ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದ್ವಿತೀಯ ಪಿಯುಸಿ ಪರೀಕ್ಷೆ; ಆನ್‌ಲೈನ್ ಪ್ರಶ್ನೆ ಪತ್ರಿಕೆ ಇಲ್ಲ

|
Google Oneindia Kannada News

ಬೆಂಗಳೂರು, ನವೆಂಬರ್ 10 : ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಆನ್‌ಲೈನ್ ಮೂಲಕ ಪ್ರಶ್ನೆ ಪತ್ರಿಕೆ ಕಳುಹಿಸಲು ಸಾಧ್ಯವಿಲ್ಲ. 2020ರ ಮಾರ್ಚ್ 4ರಿಂದ ಈ ಬಾರಿಯ ಪರೀಕ್ಷೆಗಳು ಆರಂಭವಾಗಲಿವೆ.

ದ್ವಿತೀಯ ಪಿಯುಸಿ ಪರೀಕ್ಷೆ ತಯಾರಿ ಕುರಿತು ಪೂರ್ವ ಸಿದ್ದತಾ ಸಭೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ಆನ್‌ಲೈನ್ ಮೂಲಕ ಪ್ರಶ್ನೆ ಪತ್ರಿಕೆ ಕಳಿಸುವ ಬಗ್ಗೆ ಚರ್ಚೆ ನಡೆಯಿತು.

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ: ಯಾವಾಗ ಯಾವ ಪರೀಕ್ಷೆ?ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ: ಯಾವಾಗ ಯಾವ ಪರೀಕ್ಷೆ?

2018ರ ಪರೀಕ್ಷೆ ಸಮಯದಲ್ಲಿ ಸರ್ಕಾರಿ ಕಾಲೇಜುವೊಂದಕ್ಕೆ ಆನ್‌ಲೈನ್ ಮೂಲಕ ಪ್ರಶ್ನೆ ಪತ್ರಿಕೆ ಕಳಿಸಲು ಪ್ರಯೋಗವನ್ನು ಮಾಡಲಾಗಿತ್ತು. ಆದರೆ, ಅದು ಯಶಸ್ವಿಯಾಗಲಿಲ್ಲ ಎಂದು ಅಧಿಕಾರಿಗಳು ಹೇಳಿದರು.

ಪಂಕ್ಚರ್ ಅಂಗಡಿಯಲ್ಲಿ ಕೆಲಸ ಮಾಡುವ ಹುಡುಗಿ ರಾಜ್ಯಕ್ಕೆ ಪ್ರಥಮಪಂಕ್ಚರ್ ಅಂಗಡಿಯಲ್ಲಿ ಕೆಲಸ ಮಾಡುವ ಹುಡುಗಿ ರಾಜ್ಯಕ್ಕೆ ಪ್ರಥಮ

No Online Question Papers For 2nd PUC This Year

ಆನ್‌ಲೈನ್ ಮೂಲಕ ಪ್ರಶ್ನೆ ಪತ್ರಿಕೆ ಕಳಿಸಿದರೆ ನಿರಂತರ ವಿದ್ಯುತ್ ಪೂರೈಕೆ ಇರಬೇಕು. ಇಂಟರ್ ನೆಟ್ ಸಂಪರ್ಕ ಬೇಕು. ಫೋಟೋ ಕಾಪಿ ಮಾಡಲು ಯಂತ್ರ ಸೇರಿದಂತೆ ಇತರ ಸೌಲಭ್ಯಗಳು ಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಯಿತು.

ಚಿತ್ರವಿವರ: ದ್ವಿತೀಯ ಪಿಯುಸಿ ಫಲಿತಾಂಶ- ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?ಚಿತ್ರವಿವರ: ದ್ವಿತೀಯ ಪಿಯುಸಿ ಫಲಿತಾಂಶ- ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?

ಈ ವರ್ಷದ ಪರೀಕ್ಷೆಗೆ ಸಿದ್ಧತೆಗಳನ್ನು ಆರಂಭಿಸಲಾಗಿದೆ. ಇಷ್ಟು ವ್ಯವಸ್ಥೆಗಳನ್ನು ಮಾಡಲು ಸಮಯ ಸಾಕಾಗುವುದಿಲ್ಲ ಎಂದು ಸಭೆಯಲ್ಲಿ ವಿವರವಾದ ಚರ್ಚೆ ನಡೆಯಿತು. ಅಂತಿಮವಾಗಿ ಈ ವರ್ಷ ಆನ್‌ಲೈನ್ ಮೂಲಕ ಪ್ರಶ್ನೆ ಪತ್ರಿಕೆ ಕಳಿಸದಿರುವ ತೀರ್ಮಾನಕ್ಕೆ ಬರಲಾಯಿತು.

ಪದವಿ ಪೂರ್ವ ಶಿಕ್ಷಣ ಇಲಾಖೆ 2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ 4 ರಿಂದ ಮಾರ್ಚ್ 23ರ ತನಕ ಈ ಬಾರಿಯ ಪರೀಕ್ಷೆಗಳು ನಡೆಯಲಿವೆ.

English summary
Online question papers will not delivered this year for 2nd PUC exam. Exam will began form March 4, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X