Get Updates
Get notified of breaking news, exclusive insights, and must-see stories!

ಎಲ್ಲಿಯೂ ಜಾತ್ರೆ ನಡೆಸುವಂತಿಲ್ಲ, ನಿಯಮ ಮೀರಿದರೆ ನೀವೇ ಹೊಣೆ; ಡಿಸಿಗಳಿಗೆ ಅಶೋಕ್ ಸೂಚನೆ

ಬೆಂಗಳೂರು, ಏಪ್ರಿಲ್ 17: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗಿದ್ದು, ಹಲವು ನಿರ್ಬಂಧಗಳನ್ನು ಹೇರುವ ಅಗತ್ಯವಿದೆ ಎಂದಿರುವ ಕಂದಾಯ ಸಚಿವ ಆರ್ ಅಶೋಕ್, ರಾಜ್ಯದಲ್ಲಿ ಎಲ್ಲ ಕಡೆಯೂ ಜಾತ್ರೆಗಳನ್ನು ನಿಷೇಧಿಸಲಾಗಿದೆ. ಎಲ್ಲಿಯೂ ಜಾತ್ರೆ ನಡೆಸಬಾರದು. ಜಾತ್ರೆ ನಡೆದರೆ ಜಿಲ್ಲಾಧಿಕಾರಿಗಳೇ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

Recommended Video

      ಸರ್ವಪಕ್ಷ ಸಭೆ ಮುಂದೂಡಿಕೆ ಬೆನ್ನಲ್ಲೇ ಹಿರಿಯ ಸಚಿವರ ಸಭೆ | Oneindia Kannada

      ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಕೆ. ಸುಧಾಕರ್ ಹಾಗೂ ಕಂದಾಯ ಸಚಿವ ಆರ್ ಅಶೋಕ್ ಅವರು ಶನಿವಾರ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದು, ಕೊರೊನಾ ಸ್ಥಿತಿಗತಿ ಕುರಿತು ಚರ್ಚೆ ನಡೆಸಿದರು.

      ಆನಂತರ ಮಾತನಾಡಿದ ಸಚಿವ ಅಶೋಕ್, "ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಜಾತ್ರೆ ನಡೆಯುವಂತಿಲ್ಲ. ಮದುವೆ ಸಮಾರಂಭ ನಡೆಸಲು ಕಡ್ಡಾಯವಾಗಿ ಪಾಸ್‌ ತೆಗೆದುಕೊಳ್ಳಬೇಕು. ಒಳಾಂಗಣದಲ್ಲಿ 100 ಹಾಗೂ ಹೊರಾಂಗಣದಲ್ಲಿ 200ಕ್ಕಿಂತ ಹೆಚ್ಚು ಜನ ಸೇರಿದರೆ ಕಲ್ಯಾಣ ಮಂಟಪ ಮುಚ್ಚಿಸುತ್ತೇವೆ" ಎಂದು ಎಚ್ಚರಿಸಿದ್ದಾರೆ.

      No Permission For Fairs Anywhere In Karnataka Says R Ashok

      ರಾಜ್ಯದ ಎಲ್ಲಿಯೂ ಆಮ್ಲಜನಕದ ಸಮಸ್ಯೆ ಆಗಬಾರದು. ಕಳೆದ ಬಾರಿಗಿಂತ ಈ ಬಾರಿ ಪ್ರಕರಣಗಳು ಹೆಚ್ಚಾಗಬಹುದು. ಹೀಗಾಗಿ ಯಾವುದೇ ಸಮಸ್ಯೆ ಆಗಬಾರದು. ಸಿಬ್ಬಂದಿಗೆ ಸಂಬಳದಲ್ಲಿಯೂ ತೊಂದರೆ ಎದುರಾಗಬಾರದು ಎಂದಿದ್ದಾರೆ. ಶವ ಸಂಸ್ಕಾರ ಮಾಡುವಲ್ಲಿ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.

      ಈ ಸಂದರ್ಭ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮೇ ತಿಂಗಳಲ್ಲಿ ನಡೆಯುವ ಸಮಾರಂಭಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

      No Permission For Fairs Anywhere In Karnataka Says R Ashok

      7500 ಜಂಬೋ ಆಕ್ಸಿಜನ್ ಸಿಲಿಂಡರ್ ನೀಡಲು ಕೇಂದ್ರ ಸಚಿವರ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದರು. ಸದ್ಯಕ್ಕೆ ಬುಕ್ ಆಗಿರುವ ಮದುವೆ ಸಮಾರಂಭಗಳಿಗೆ ಸಮಸ್ಯೆಯಿಲ್ಲ. ಆದರೆ ಮುಂದೆ ಬುಕ್ ಆಗುವ ಮದುವೆಗಳಿಗೆ ನಿಯಮಗಳು ಕಡ್ಡಾಯ ಎಂದು ತಿಳಿಸಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+