'ಹೈಕಮಾಂಡ್‌ಗೆ ಯಾವುದೇ ದೂರು ಕೊಟ್ಟಿಲ್ಲ'

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಬೆಂಗಳೂರು, ಮಾರ್ಚ್ 11 : 'ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸೋನಿಯಾ ಗಾಂಧಿ ಅವರ ಬಳಿ ಯಾವುದೇ ದೂರು ನೀಡಿಲ್ಲ. ಈ ಕುರಿತಾದ ವರದಿಗಳು ಆಧಾರ ರಹಿತ' ಎಂದು ಕೆಪಿಸಿಸಿ ಅಧ್ಯಕ್ಷ, ಡಾ.ಜಿ. ಪರಮೇಶ್ವರ ಅವರು ಸ್ಪಷ್ಟಪಡಿಸಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ದೆಹಲಿಯಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಆಸ್ತಿ ಬಗ್ಗೆ ಮಾಹಿತಿ ನೀಡಿದ್ದೇನೆ. ಉಳಿದಂತೆ ಯಾರ ಮೇಲೂ ದೂರು ನೀಡಿಲ್ಲ. ನೀಡುವ ಉದ್ದೇಶವೂ ತಮ್ಮದಲ್ಲ' ಎಂದರು. [ಕೆಪಿಸಿಸಿಗೆ ನೂತನ ಸಾರಥಿ ಯಾರು?]

g parameshwara

'ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆ ವಿವರ ಹಾಗು ಮೈತ್ರಿ ಬಗ್ಗೆ ಚರ್ಚೆ ಮಾಡಿದ್ದೇವೆ ಹೊರತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಾಚ್ ವಿಚಾರದ ಬಗ್ಗೆ ಹೈ ಕಮಾಂಡ್ ಗೆ ದೂರು ನೀಡಿಲ್ಲ. ಮುಖ್ಯಮಂತ್ರಿಗಳಿಗೆ ತಿಳಿಸಿಯೇ ದೆಹಲಿಗೆ ಹೋಗಿದ್ದೆ' ಎಂದು ವಿವರಣೆ ನೀಡಿದರು. [ಕರ್ನಾಟಕ ಬಿಜೆಪಿಗೆ ನೂತನ ಸಾರಥಿ ಯಾರು?]

ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಯಿಲ್ಲ : 'ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಸಮಾಧಾನ ತಂದಿದೆ. ದಿಗ್ವಿಜಯ್ ಸಿಂಗ್ ಸೇರಿ ಯಾವುದೇ ನಾಯಕರು ಮಾಹಿತಿ ಕೇಳಿಲ್ಲ. ಇದುವರೆಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ. ಒಂದು ವೇಳೆ ನೀವೆ ಮುಂದುವರೆಯಬಹದು ಎಂದಾದರೆ ತಮ್ಮ ಸಮ್ಮತಿ ಇದೆ. ಬೇಡವೆಂದರೆ ಅಧ್ಯಕ್ಷ ಸ್ಥಾನವನ್ನು ಬಿಟ್ಟು ಕೊಡುತ್ತೇನೆ' ಎಂದು ಹೇಳಿದರು. [ಬಿಜೆಪಿ-ಜೆಡಿಎಸ್ ಜಿಲ್ಲಾ ಪಂಚಾಯಿತಿ ಮೈತ್ರಿ ಮಾತುಕತೆ!]

'ರಾಜ್ಯ ಬಜೆಟ್ ಮಂಡನೆ ನಂತರ ನಿಗಮ ಮಂಡಳಿಗೆ ನೇಮಕಾತಿ, ಜಿಲ್ಲಾ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಹೊಂದಾಣಿಕೆ ವಿಚಾರದ ಬಗ್ಗೆ ಸರ್ಕಾರ ಗಮನ ಹರಿಸಲಿದೆ. ಹೊಂದಾಣಿಕೆ ವಿಚಾರವನ್ನು ಸ್ಥಳೀಯ ನಾಯಕರಿಗೆ ಬಿಡಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಸ್ಥಳೀಯ ಮುಖಂಡರಿಗೆ ಬಿಟ್ಟ ವಿಚಾರ' ಎಂದು ಅವರು ತಿಳಿಸಿದರು. [ತಾ.ಪಂ ಫಲಿತಾಂಶ : ಯಾವ ಜಿಲ್ಲೆಯಲ್ಲಿ ಯಾರಿಗೆ ಗೆಲುವು?]

'ಪಕ್ಷಕ್ಕೆ ಅನುಕೂಲಕರವಾಗಿ ಮೀಸಲಾತಿ ರೂಪಿಸುವ ಸಂಚನ್ನು ಕಾಂಗ್ರೆಸ್ ನಡೆಸಿದೆ ಎನ್ನುವ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪ ಸರಿಯಲ್ಲ. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಸಂಪುಟ ಸದಸ್ಯರು ಸೂಕ್ತ ರೀತಿಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತಾರೆ' ಎಂದರು. [30 ಜಿಲ್ಲೆಗಳ ಪಂಚಾಯ್ತಿ ಫಲಿತಾಂಶ ಸಂಪೂರ್ಣ ವಿವರ]

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
There was no political discussion. I met party high command leaders only to submit the details of the properties owned by the party in various parts of Karnataka said, Karnataka Pradesh Congress Committee(KPCC) president Dr.G. Parameshwara.
Please Wait while comments are loading...