ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ; ಸ್ಪಷ್ಟನೆ ಕೊಟ್ಟ ಸಚಿವರು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 14; ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಬೇಕು ಎಂಬ ಒತ್ತಾಯ ಜೋರಾಗಿದೆ. ಕೇರಳ ರಾಜ್ಯದ ಮಾದರಿಯಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಬೇಕು ಎಂದು ಹಿಂದೂ ಪರ ಸಂಘಟನೆಗಳು ಆಗ್ರಹಿಸಿದ್ದವು.

ಮುಜರಾಯಿ ಮತ್ತು ವಕ್ಫ್ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಈ ಕುರಿತು ಮಾತನಾಡಿದ್ದು, "ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

ದೇವಾಲಯ ತೆರವು ವಿವಾದ, ನಂಜನಗೂಡು ತಹಶೀಲ್ದಾರ್ ವರ್ಗಾವಣೆ ದೇವಾಲಯ ತೆರವು ವಿವಾದ, ನಂಜನಗೂಡು ತಹಶೀಲ್ದಾರ್ ವರ್ಗಾವಣೆ

ಹಿಂದಿನ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಬೇಕು ಎಂದು ಮನವಿ ಮಾಡಲಾಗಿದೆ ಎಂಬ ವರದಿಯನ್ನು ಸಚಿವರು ತಳ್ಳಿ ಹಾಕಿದರು. "ನಾನು ಈ ಬಗ್ಗೆ ಪರಿಶೀಲನೆ ನಡೆಸಿ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ" ಎಂದು ಸಚಿವರು ಹೇಳಿದರು.

ಕೊಪ್ಪಳ: ದಲಿತ ಬಾಲಕ ದೇವಾಲಯ ಪ್ರವೇಶಿಸಿದ್ದಕ್ಕೆ ದಂಡಕೊಪ್ಪಳ: ದಲಿತ ಬಾಲಕ ದೇವಾಲಯ ಪ್ರವೇಶಿಸಿದ್ದಕ್ಕೆ ದಂಡ

 No Proposal Before Govt To Enforce Dress Code In Temples Says Minister

ಕಳೆದ ವಾರದಿಂದ ರಾಜ್ಯದ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವ ಕುರಿತು ಚರ್ಚೆ ನಡೆಯುತ್ತಿದೆ. ಕೇರಳ ಮಾದರಿಯಲ್ಲಿ ರಾಜ್ಯದಲ್ಲಿಯೂ ವಸ್ತ್ರ ಸಂಹಿತೆ ಜಾರಿಗೊಳಿಸಲು ಧಾರ್ಮಿಕ ಪರಿಷತ್ ಸಭೆಯಲ್ಲಿ ವಿಚಾರ ಪ್ರಸ್ತಾಪಿಸಲಾಗಿದೆ ಎಂಬ ಸುದ್ದಿಗಳು ಹಬ್ಬಿತ್ತು.

ದೇವಾಲಯ ತೆರವು ಘಟನೆ ಮತ್ತೆ ಮರುಕಳಿಸಲ್ಲ: ಬೊಮ್ಮಾಯಿ ದೇವಾಲಯ ತೆರವು ಘಟನೆ ಮತ್ತೆ ಮರುಕಳಿಸಲ್ಲ: ಬೊಮ್ಮಾಯಿ

ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು, ಪೊಳಲಿ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಅಳವಡಿಕೆ ಮಾಡಿರುವ ಬ್ಯಾನರ್ ಹಾಕಲಾಗಿತ್ತು. ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಅಳವಡಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂಬ ವರದಿಗಳು ಹರಿದಾಡುತ್ತಿದ್ದವು.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ಹಿಂದೂ ಪರ ಸಂಘಟನೆಗಳು ದೇವಸ್ಥಾನಗಳಿಗೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಕಡ್ಡಾಯ ಎಂದು ಬ್ಯಾನರ್ ಹಾಕಿವೆ. ಮಂಗಳೂರಿನ ಕದ್ರಿ ಮಂಜುನಾಥೇಶ್ವರ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನ, ಕಟೀಲು ದುರ್ಗಾಪರಮೇಶ್ವರಿ ದೇವಾಲಯಗಳಲ್ಲಿ ಬ್ಯಾನರ್ ಕಂಡು ಬಂದಿತ್ತು.

ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ ಗೊಳಿಸಬೇಕು. ಹಿಂದೂ ಸಂಪ್ರದಾಯದಂತೆ ಭಕ್ತರು ವಸ್ತ್ರ ಧರಿಸಬೇಕು. ದೇವಾಲಯದ ಪಾವಿತ್ರ್ಯತೆ ಉಳಿಸುವಂತಹ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಡ್ಡಾಯವಾಗಿ ವಸ್ತ್ರ ಸಂಹಿತೆ ಜಾರಿ ಮಾಡಬೇಕು ಎಂದು ಹಿಂದೂ ಪರ ಸಂಘಟನೆಗಳು ಆಗ್ರಹಿಸಿದ್ದವು.

ವಸ್ತ್ರ ಸಂಹಿತೆ ಜಾರಿಗೊಳಿಸುವ ಕುರಿತು ಸರ್ಕಾರದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ದೊರಕದ ಹಿನ್ನಲೆಯಲ್ಲಿ ಹಿಂದೂ ಸಂಘಟನೆಗಳು ತಾವೇ ಮುಂದಾಗಿ ದೇವಾಲಯಗಳ ಎದುರು ಭಾಗದಲ್ಲಿ ವಸ್ತ್ರ ಸಂಹಿತೆಯ ಬಗ್ಗೆ ಬ್ಯಾನರ್ ಹಾಕಿದ್ದವು.

ದೇವಾಲಯಕ್ಕೆ ಬರುವ ಪುರುಷರು ಧೋತಿ, ಪಂಚೆ ಅಥವಾ ಪ್ಯಾಂಟ್ ಧರಿಸಬಹುದು. ಮಹಿಳೆಯರು ಸೀರೆ ಅಥವಾ ಚೂಡಿದಾರ್ ಧರಿಸಿ ದೇವಾಲಯಕ್ಕೆ ಬರಬೇಕು ಎಂದು ಬ್ಯಾನರ್‌ನಲ್ಲಿ ಮಾಹಿತಿ ನೀಡಲಾಗಿತ್ತು.

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ಈ ಕುರಿತು ಮಾತನಾಡಿದ್ದರು. "ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಬೇಕೆಂದು ನಮ್ಮೆಲ್ಲರ ಅಭಿಪ್ರಾಯ ವಾಗಿದೆ. ಆದರೆ ಈ ಬಗ್ಗೆ ಸರ್ಕಾರ ನಿಯಮ ರೂಪಿಸಬೇಕು. ಈ ಬಗ್ಗೆ ಇಲಾಖೆಯಿಂದ ಸಭೆ ಕೂಡಾ ನಡೆದಿದ್ದು, ಶೀಘ್ರದಲ್ಲೇ ವಸ್ತ್ರ ಸಂಹಿತೆ ಜಾರಿಯಾಗುವ ವಿಶ್ವಾಸವಿದೆ" ಎಂದು ಹೇಳಿದ್ದರು.

Recommended Video

IPL ಚಾಂಪಿಯನ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು? RCBಗೆ ಎಷ್ಟು ಸಿಕ್ತು? | Oneindia Kannada

ದೇವಾಲಯಗಳಲ್ಲಿ ಹಾಕಿರುವ ಬ್ಯಾನರ್‌ಗಳ ಕಾರಣದಿಂದಾಗಿ ಭಕ್ತರು ಗೊಂದಲದಲ್ಲಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಕಟೀಲು ದುರ್ಗಾಪರಮೇಶ್ವರಿ ದೇವಾಲಯದ ಪ್ರಧಾನ ಅರ್ಚಕರಾದ ಹರಿನಾರಾಯಣ ಅಸ್ರಣ್ಣ, "ಸರ್ಕಾರ ಅಥವಾ ಧಾರ್ಮಿಕ ದತ್ತಿ ಇಲಾಖೆಗಳು ವಸ್ತ್ರ ಸಂಹಿತೆಯನ್ನು ಇನ್ನೂ ಜಾರಿ ಮಾಡಿಲ್ಲ. ಆದರೆ ಭಕ್ತರ ಹಿತರಕ್ಷಣೆಯ ದೃಷ್ಟಿಯಿಂದ ಬ್ಯಾನರ್ ಅಳವಡಿಸಿದ್ದೇವೆ. ಇದು ಕಡ್ಡಾಯ ವಲ್ಲ, ಕ್ಷೇತ್ರದ ವತಿಯಿಂದ ದೇವಳದ ಭಕ್ತರಿಗೆ ಮಾಡುವ ಮನವಿ" ಎಂದು ಹೇಳಿದ್ದಾರೆ.

English summary
There is no proposal before the government to enforce a dress code in temples. Muzrai and Wakf minister Shashikala Jolle also ruled out reports that a request was made during Rajya Dharmika Parishat meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X