ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಮದ್ಯದ ದರ ಹೆಚ್ಚಳ ಆಗುವುದಿಲ್ಲ: ಅಬಕಾರಿ ಸಚಿವ ಗೋಪಾಲಯ್ಯ ಸ್ಪಷ್ಟನೆ

|
Google Oneindia Kannada News

ಬೆಂಗಳೂರು.ಫೆ.24; ರಾಜ್ಯದಲ್ಲಿ ಮದ್ಯದ ದರ ಹೆಚ್ಚಳ ಮಾಡುವ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.

2022-23 ನೇ ಸಾಲಿನ ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

45 ದಿನಗಳ ಕಾಲ ಖಾಸಗಿ ಮದ್ಯದಂಗಡಿ ಬಂದ್: ಮದ್ಯಪ್ರಿಯರಿಗೆ ಶಾಕ್!45 ದಿನಗಳ ಕಾಲ ಖಾಸಗಿ ಮದ್ಯದಂಗಡಿ ಬಂದ್: ಮದ್ಯಪ್ರಿಯರಿಗೆ ಶಾಕ್!

ಇಲಾಖೆಯ ಹಣಕಾಸಿನ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳು ಪರಾಮರ್ಶೆ ಮಾಡಿ, ಕೆಲವು ಸಲಹೆ ಸೂಚನೆ ನೀಡಿದ್ದಾರೆ. ಅಲ್ಲದೆ, ಇಲಾಖೆಯ ಅಭಿವೃದ್ಧಿಗೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು ಎಂದು ತಿಳಿಸಿದರು.

No proposal to increase Liquor price says Minister K Gopalaiah

ನಾಳೆ ಹಣಕಾಸು ಇಲಾಖೆಯ ಕಾರ್ಯದರ್ಶಿಗಳು ಮತ್ತು ಸಿಎಂ ಜೊತೆ ಚರ್ಚೆ ನಡೆಸಿ ಮುಂದಿನ ಕಾರ್ಯಕ್ರ‌ಮದ‌ ಬಗ್ಗೆ ಚಿಂತನೆ ನಡೆಸಲಾಗುವುದು. ಇಲಾಖೆಯ ಕೆಲವು ಬೇಡಿಕೆಗಳ ಬಗ್ಗೆಯೂ ಸಿಎಂ ಗಮನ ಸೆಳೆಯುವ ಕೆಲಸ ಮಾಡಲಗಿದೆ.‌ ಇದಕ್ಕೆ ಅವರು ಬಜೆಟ್ ನಲ್ಲಿ ಅಥವಾ ಆ ನಂತರ ಸೂಕ್ತ ವಾಗಿ ಸ್ಪಂದಿಸುವ ಭರವಸೆ ಇದೆ ಎಂದು ‌ಸಚಿವ ಕೆ.ಗೋಪಾಲಯ್ಯ ಹೇಳಿದರು.

ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ ಹೊಸ ರೂಪ

2022-23 ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ ಹೊಸ ಸ್ವರೂಪ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಡಿಯೋ ವೈರಲ್: ಬೀದರ್‌ನಲ್ಲಿ ಮದ್ಯ ಮಾರಾಟ ತಡೆಯಲೆತ್ನಿಸಿದ ಪೊಲೀಸರ ಮೇಲೆ ಹಲ್ಲೆವಿಡಿಯೋ ವೈರಲ್: ಬೀದರ್‌ನಲ್ಲಿ ಮದ್ಯ ಮಾರಾಟ ತಡೆಯಲೆತ್ನಿಸಿದ ಪೊಲೀಸರ ಮೇಲೆ ಹಲ್ಲೆ

2022-23 ನೇ ಸಾಲಿನ ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿಂದು ನಡೆದ ಇಲಾಖಾವಾರು ಆಯವ್ಯಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಬಕಾರಿ ಉದ್ಯಮ ವ್ಯಾಪ್ತಿ ಹೆಚ್ಚಿಸಿಕೊಂಡಿದೆ. ಯಾವುದೇ ಉದ್ಯಮ ವ್ಯಾಪ್ತಿ ಹೆಚ್ಚಿಸಿಕೊಂಡಾಗ ಬದಲಾವಣೆ ಆಗಲು ಸಮಯ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾಲ ಕಾಲಕ್ಕೆ ವಿಚಾರಣೆ ಮಾಡಿ ಸರಿಪಡಿಸುವುದು ಎಲ್ಲರ ಕೆಲಸ ಎಂದರು.

No proposal to increase Liquor price says Minister K Gopalaiah

ಇಲಾಖೆ ಬಗ್ಗೆ ಸಹಾನೂಭೂತಿ ಇದೆ. ಹಾಗೇಯೆ ಇಲಾಖೆಯಲ್ಲಿ ನಡೆಯುತ್ತಿರುವ ಕಿರುಕುಳ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ವ್ಯವಸ್ಥೆಯಲ್ಲಿ ಬದಲಾವಣೆ ತರಲು ಬಜೆಟ್‌ನಲ್ಲಿ ಇಲಾಖೆಗೆ ಹೊಸ ಸ್ವೂರಪ ನೀಡಲಾಗುವುದು. ಆರ್ಥಿಕ ಮಿತಿಗಳನ್ನು ನೋಡಿಕೊಂಡು ನೌಕರರಿಗೆ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಲಾಗುವುದಲ್ಲದೆ, ಕಾನೂನುಗಳನ್ನು ಬದಲಾಯಿಸುವ ಸಂಬಂಧವೂ ಗಮನಹರಿಸಲಾಗುವುದು ಎಂದರು.

ನಕಲಿ ಮಧ್ಯಕ್ಕೆ ತಡೆ

ರಾಜ್ಯದಲ್ಲಿ ನಕಲಿ ಮದ್ಯ ತಯಾರಿಕೆ ಮತ್ತು ಹೊರ ರಾಜ್ಯದಲ್ಲಿ ಆಗಮಿಸುವ ನಕಲಿ ಮದ್ಯ ತಡೆಗೆ ಸರ್ಕಾರ ಉಗ್ರ ಕ್ರಮ ಕೈಗೊಂಡಿದೆ. ಇದರಿಂದ ಸರ್ಕಾರಕ್ಕೆ ಆದಾಯ ಕೂಡ ಬರುತ್ತದೆ. ನಕಲಿ ಜಾಲದ ಹಿಂದೆ ಯಾರೇ ಇದ್ದರೂ ಅವರನ್ನು ಮುಲಾಜಿಲ್ಲದೇ ಅಮಾನತು ಮಾಡುವಂತೆ ಇಲಾಖಾ ಆಯುಕ್ತರಿಗೆ ಇದೇ ಸಂದರ್ಭದಲ್ಲಿ ಸಿಎಂ ಸೂಚಿಸಿದರು.

ಸಿಎಲ್ 7, ಸಿಎಲ್ 9 ವಿಚಾರದಲ್ಲಿ ಸಾಕಷ್ಟು ದೂರುಗಳು ಬಂದಿವೆ.ಇದೆಲ್ಲವನ್ನೂ ಸರಿಪಡಿಸುವ ಕೆಲಸ ಆಗಬೇಕು. ವ್ಯಾಪಾರ, ಆದಾಯ ಮೂರು ಮುಖ್ಯ ಅಂಶಗಳನ್ನು ಇಟ್ಟುಕೊಂಡು ಕೆಲಸಮಾಡುವಂತೆ ಸೂಚಿಸಿದರಲ್ಲದೇ ಸಮಯ ನೀಡಿದರೆ ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದರು.

Recommended Video

ರಷ್ಯಾ- ಉಕ್ರೇನ್ ಬಿಕ್ಕಟ್ಟು:ಕೇವಲ ಒಂದು ಗಂಟೆಯಲ್ಲೇ 8 ಲಕ್ಷ ಕೋಟಿ ರೂ.ಅಧಿಕ ಕುಸಿತ | Oneindia Kannada

English summary
Excise minister K Gopalaiah said No proposal to increase liquor prices in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X