ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಸ್ಲಿಂ ಪ್ರತ್ಯೇಕ ಕಾಲೇಜು ಪ್ರಾರಂಭದ ಪ್ರಸ್ತಾಪ ಸರಕಾರದ ಮಟ್ಟದಲ್ಲಿ ಇಲ್ಲ: ಶಶಿಕಲಾ ಜೊಲ್ಲೆ

|
Google Oneindia Kannada News

ಬೆಂಗಳೂರು ಡಿಸೆಂಬರ್‌ 1: ಮುಸ್ಲೀಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಯಾವುದೇ ಪ್ರಸ್ತಾಪ ಸರಕಾರದ ಮುಂದೆ ಇಲ್ಲ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ.

ಗುರುವಾರ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಮುಸ್ಲಿಂ ಮಹಿಳೆಯರಿಗಾಗಿಯೇ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಯಾವುದೇ ಪ್ರಸ್ತಾವನೆಗಳು ಇಲ್ಲ. ಕಾಲೇಜುಗಳ ಪ್ರಾರಂಭದ ಬಗ್ಗೆ ವಕ್ಫ್‌ ಬೋರ್ಡ್‌ ಅಧ್ಯಕ್ಷರ ಹೇಳಿಕೆಯು ಅವರ ವೈಯಕ್ತಿಕ ಹೇಳಿಕೆಯಾಗಿದೆ. ಈ ವಿಷಯದ ಕುರಿತು ನಾನು ಈಗಾಗಲೇ ವಕ್ಫ್‌ ಬೋರ್ಡ್‌ ಅಧ್ಯಕ್ಷರ ಜೊತೆ ಮಾತನಾಡಿದ್ದು, ಇದರ ಬಗ್ಗೆ ಎದ್ದಿರುವ ಊಹಾಪೋಹಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಜನವರಿಯಲ್ಲಿ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ ಓಪನ್‌? ಜನವರಿಯಲ್ಲಿ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ ಓಪನ್‌?

ಮುಸ್ಲಿಂ ಯುವತಿಯರಿಗೆ ಪ್ರತ್ಯೇಕ ಕಾಲೇಜು ವಿಚಾರಕ್ಕೆ ಸಿಎಂ ಹೇಳಿದ್ದೇನು.?

ಪ್ರತ್ಯೇಕ ಕಾಲೇಜು ಬಗ್ಗೆ ನಮ್ಮ ಸರ್ಕಾರದಲ್ಲಿ ಯಾವುದೇ ಚರ್ಚೆ ನಡೆದಿಲ್ಲ, ಇದು ನಮ್ಮ ಸರ್ಕಾರದ ನಿಲುವು ಕೂಡಾ ಆಗಿಲ್ಲ. ಆ ಥರದ್ದು ಏನಾದರೂ ಪ್ರಸ್ತಾವನೆ ಇದ್ರೆ ವಕ್ಫ್ ಬೋರ್ಡ್ ಅಧ್ಯಕ್ಷರೇ ಬಂದು ನನ್ನ ಜತೆ ಚರ್ಚೆ ಮಾಡಲಿ ಎಂದರು.

no proposal to start separate college for muslim women says shashikala jolle

10 ಮುಸ್ಲಿಂ ಕಾಲೇಜು ಸ್ಥಾಪನೆಗೆ ಸರ್ಕಾರ ನಿರ್ಧಾರ ಖಂಡನೀಯ: ಮುತಾಲಿಕ್

ಯಾವುದೇ ಪರಿಸ್ಥಿತಿಯಲ್ಲಿ ಕರ್ನಾಟಕದಲ್ಲಿ ಮುಸ್ಲಿಂ ಕಾಲೇಜು ಸ್ಥಾಪನೆಗೆ ಅವಕಾಶ ಕೊಡುವುದಿಲ್ಲ, ನಮ್ಮ ಬಲಿದಾನ ಆದ್ರೂ 10 ಮುಸ್ಲೀಂ ಕಾಲೇಜು ಸ್ಥಾಪನೆಗೆ ಅವಕಾಶ ಕೊಡುವುದಿಲ್ಲ ಎಂದು ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯದ ಕಲಬುರಗಿ, ಯಾದಗರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಸರ್ಕಾರಿ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಮುಂದಾಗಿದ್ದಕ್ಕೆ ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ವಕ್ಫ್ ಬೋರ್ಡ್ ಮುಸ್ಲಿಂ ಹೆಣ್ಣುಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸುವ ನಿರ್ಣಯ ಕೈಗೊಳ್ಳಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಸರ್ಕಾರದಿಂದ ಇದಕ್ಕೆ ಅನುಮೋದನೆಯೂ ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದ್ಧು, ಇದು ಸರಿಯಲ್ಲ. ಸರ್ಕಾರದ ಈ ನಿರ್ಧಾರವನ್ನು ನಾನು ವಿರೋಧಿಸುತ್ತೇನೆ. ಶ್ರೀರಾಮ ಸೇನೆ ಸೇರಿದಂತೆ ಯಾವುದೇ ಹಿಂದು ಪರ ಸಂಘಟನೆಗಳ ಮುಖಂಡರು ಇದಕ್ಕೆ ಒಪ್ಪಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಶ್ರೀ ರಾಮಸೇನೆ ಮುಂದಾಳತ್ವದಲ್ಲಿ ಎಲ್ಲ ಹಿಂದು ಸಂಘಟನೆಗಳ ಸೇರಿದಂತೆ ಉಗ್ರ ಸ್ವರೂಪದ ಹೋರಾಟ ನಡೆಸಲಾವುದು ಎಂದು ಎಚ್ಚರಿಕೆ ನೀಡಿದ ಅವರು, ಕಾಂಗ್ರೆಸ್ ನವರು ಈ ರೀತಿಯಾದ ತುಷ್ಢೀಕರಣದಿಂದ ಇಂದು ಈ ಪರಿಸ್ಥಿತಿಗೆ ಬಂದಿದೆ. ಬಿಜೆಪಿಯೂ ಸಹ ತುಷ್ಠೀಕರಣ ಮಾಡಿ ಹತ್ತು ಮುಸ್ಲೀಂ ಕಾಲೇಜುಗಳನ್ನ ಕೊಡುತ್ತಿರುವುದು ತಪ್ಪು ಎಂದರು.

no proposal to start separate college for muslim women says shashikala jolle

ಏನಿದು ಪ್ರತ್ಯೇಕ ಕಾಲೇಜು ವಿವಾದ.?

ರಾಜ್ಯದಲ್ಲಿ ಮುಸ್ಲಿಂ ಹೆಣ್ಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಂದಿನ ತಿಂಗಳು ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ನಿರೀಕ್ಷೆಯಿದೆ. ಮೂರು ತಿಂಗಳ ಹಿಂದೆ, ರಾಜ್ಯ ವಕ್ಫ್ ಬೋರ್ಡ್‌ನಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಸರ್ಕಾರದಿಂದ ಇದಕ್ಕೆ ಅನುಮೋದನೆಯೂ ದೊರೆತಿತ್ತು. ಪ್ರತಿ ಕಾಲೇಜಿಗೆ 2.50 ಕೋಟಿ ರು.ಅನುದಾನವನ್ನೂ ಮೀಸಲಿರಿಸಲಾಗಿದ್ದು, ವಕ್ಫ್ ಬೋರ್ಡ್‌ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿ ಈ ವೆಚ್ಚವನ್ನು ಭರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದ್ದು, ಇದಕ್ಕೆ ಹಲವು ಹಿಂದೂ ಪರ ಸಂಘಟನೆಗಳಿಂದಲೂ ತೀವ್ರ ವಿರೋಧಗಳು ಕೇಳಿಬಂದಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್‌ ಕಣ್ಣೂರಿನ 16 ಎಕರೆ ಜಾಗವನ್ನು ಮೀಸಲಿಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಇನ್ನೂ ಬೇರೆ ಕಡೆಗಳಲ್ಲಿ ಕಾಲೇಜು ಸ್ಥಾಪಿಸುವ ಉದ್ದೇಶ ಹೊಂದಿದೆ. ಉತ್ತರ ಕರ್ನಾಟಕ, ಹೈದ್ರಾಬಾದ್‌ ಕರ್ನಾಟಕದ ಕೆಲವೆಡೆ ಕಾಲೇಜು ಆರಂಭಿಸಲಾಗುತ್ತದೆ. ಯಾವ ಭಾಗದಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹೆಚ್ಚಿರುತ್ತಾರೋ ಆ ಸ್ಥಳದಲ್ಲಿ ಸ್ಥಾಪಿಸಲಾಗುತ್ತದೆ ಎಂದು ತಿಳಿದುಬಂದಿದೆ.

English summary
shashikala jolle said There is no proposal before the government to start a separate college for Muslim women
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X