Breaking: ಪ್ರಾಸಿಕ್ಯೂಷನ್‌ಗೆ ಅನುಮತಿ ಅರ್ಜಿ, ಸ್ಪಷ್ಟನೆ ನೀಡಿದ ರಾಜಭವನ
ಬೆಂಗಳೂರು, ಸೆಪ್ಟೆಂಬರ್ 01: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅನುಮತಿ ಸಲ್ಲಿಸಿದ್ದಾರೆ. ಈ ಬೆಳವಣಿಗೆ ಸರ್ಕಾರ ಮತ್ತು ರಾಜಭವನದ ನಡುವೆ ಜಟಾಪಟಿಗೆ ಕಾರಣವಾಗಿದೆ. ಅಲ್ಲದೇ ಸಿದ್ದರಾಮಯ್ಯ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ಮಾಡುತ್ತಿದ್ದಾರೆ.
ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ರಾಜಭವನವನ್ನು ಬಳಕೆ ಮಾಡಿಕೊಂಡು ರಾಜಕೀಯ ಮಾಡುತ್ತಿವೆ. ರಾಜ್ಯಪಾಲರು ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧದ ಪ್ರಾಸಿಕ್ಯೂಷನ್ ಅರ್ಜಿಯನ್ನು ಬಾಕಿ ಇಟ್ಟುಕೊಂಡಿದ್ದಾರೆ. ಆದರೆ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಈ ಕುರಿತು ಆರ್‌ಟಿಐ ಅಡಿ ಸಾಮಾಜಿಕ ಕಾರ್ಯಕರ್ತ ಟಿ. ಜೆ. ಅಬ್ರಹಾಂ ಮಾಹಿತಿಯೊಂದನ್ನು ಕೇಳಿದ್ದರು. ರಾಜಭವನದಲ್ಲಿ ಯಾವ-ಯಾವ ನಾಯಕರ ವಿರುದ್ಧ ಪ್ರಾಸಿಕ್ಯೂಷನ್ ಅರ್ಜಿಗಳು ಬಾಕಿ ಇದೆ? ಎಂದು ಪ್ರಶ್ನೆ ಕೇಳಿದ್ದರು. ಇದಕ್ಕೆ ರಾಜಭವನ ಉತ್ತರ ನೀಡಿದ್ದು, ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರುವ ಯಾವುದೇ ಅರ್ಜಿಗಳು ರಾಜಭವನದಲ್ಲಿ ಬಾಕಿ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಕಾಂಗ್ರೆಸ್ ಹೇಳುವುದೇನು?: ಕರ್ನಾಟಕದ ಕಾಂಗ್ರೆಸ್ ನಾಯಕರು, ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ. ಶಾಸಕರಾದ ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರುವ ಅರ್ಜಿಗಳು ರಾಜಭವನದಲ್ಲಿ ಬಾಕಿ ಇದೆ, ಈ ಅರ್ಜಿಗಳನ್ನು ವಿಲೇವಾರಿ ಮಾಡಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಅರ್ಜಿಯನ್ನು ತರಾತುರಿಯಲ್ಲಿ ವಿಲೇವಾರಿ ಮಾಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ ಎಂದು ಆರೋಪ ಮಾಡುತ್ತಿದ್ದಾರೆ.
ಆದರೆ ಈಗ ರಾಜಭವನವೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರುವ ಯಾವುದೇ ಅರ್ಜಿಗಳು ರಾಜಭವನದಲ್ಲಿ ಬಾಕಿ ಇಲ್ಲ ಎಂದು ಹೇಳಿರುವುದು ಕಾಂಗ್ರೆಸ್ ನಾಯಕರಿಗೆ ಹಿನ್ನಡೆ ಉಂಟು ಮಾಡಿದೆ. ರಾಜಭವನದಲ್ಲಿ ಯಾವುದೇ ಅರ್ಜಿಗಳು ಬಾಕಿ ಇಲ್ಲ ಎಂದಾದರೆ ಬಂದ ಸಿದ್ದರಾಮಯ್ಯ ವಿರುದ್ಧದ ಅರ್ಜಿಯನ್ನು ಅನುಮತಿ ನೀಡಿ ವಿಲೇವಾರಿ ಮಾಡಲಾಗಿದೆ.
ಮತ್ತೊಂದು ಕಡೆ ಶನಿವಾರ ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕ ಸದಸ್ಯ ಪೀಠದಲ್ಲಿ ಸಿದ್ದರಾಮಯ್ಯ ಸಲ್ಲಿಸಿದ್ದ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ಅರ್ಜಿ ವಿಚಾರಣೆ ನಡೆಯಿತು. ಆಗ ಹೈಕೋರ್ಟ್‌ಗೆ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ಯಾವುದೇ ಅರ್ಜಿ ಬಾಕಿ ಇಲ್ಲ ಎಂದು ಹೇಳಿಕೆ ನೀಡಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದಾರೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದಲ್ಲಿ ಸಿದ್ದರಾಮಯ್ಯ ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ಆಗಸ್ಟ್ 19, 29 ಮತ್ತು 31ರಂದು ನಡೆದಿದೆ. ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 2ರ ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಶನಿವಾರ ಅರ್ಜಿಯ ವಿಚಾರಣೆ ವೇಳೆ ಯಾವುದೇ ಕ್ರಮ ಕೈಗೊಳ್ಳಬಾರದು ಎಂಬ ಆಗಸ್ಟ್ 19ರ ಮಧ್ಯಂತರ ಆದೇಶವನ್ನು ವಿಸ್ತರಣೆ ಮಾಡಿ, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿದೆ. ಸಿದ್ದರಾಮಯ್ಯಗೆ ಕಾನೂನು ಹೋರಾಟದಲ್ಲಿ ಜಯ ಸಿಗಲಿದೆಯೇ? ಎಂದು ಕಾದು ನೋಡಬೇಕು.












Click it and Unblock the Notifications