ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಇಟಿ ಪರೀಕ್ಷೆಗೆ ಬರುವ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಸೂಚನೆ

|
Google Oneindia Kannada News

ಬೆಂಗಳೂರು, ಜುಲೈ 21 : ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೇ ಜುಲೈ 30 ಮತ್ತು 31ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಹೊರ ರಾಜ್ಯದಿಂದ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಸ್ಪಷ್ಟನೆಯೊಂದನ್ನು ನೀಡಿದೆ.

Recommended Video

ಅಪ್ಪನ ಹಾದಿಯನ್ನೇ ಹಿಡಿದ ಮಗ | Oneindia Kannada

ಹೊರ ರಾಜ್ಯದಿಂದ ಬರುವ ಜನರಿಗೆ ಕರ್ನಾಟಕದಲ್ಲಿ ಸಾಂಸ್ಥಿಕ ಮತ್ತು ಹೋಂ ಕ್ವಾರಂಟೈನ್ ನಿಯಮ ಜಾರಿಯಲ್ಲಿದೆ. ಆದರೆ, ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಲಾಗಿದೆ ಎಂದು ಸರ್ಕಾರ ಹೇಳಿದೆ.

ಕರ್ನಾಟಕ ಸಿಇಟಿ ಹಾಲ್ ಟಿಕೆಟ್ ಡೌನ್ ಲೋಡ್ ಹೇಗೆ? ಕರ್ನಾಟಕ ಸಿಇಟಿ ಹಾಲ್ ಟಿಕೆಟ್ ಡೌನ್ ಲೋಡ್ ಹೇಗೆ?

ಸಿಇಟಿ ಪರೀಕ್ಷೆ ನಡೆಸುವ ಕುರಿತು ವಿವರವಾದ ಕಾರ್ಯಾಚರಣೆ ವಿಧಾನ (ಎಸ್‌ಓಪಿ)ಯನ್ನು ಆರೋಗ್ಯ ಇಲಾಖೆ ಸೋಮವಾರ ಬಿಡುಗಡೆ ಮಾಡಿದೆ. ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

ಸಿಇಟಿ ಪರೀಕ್ಷೆ ನಿಗದಿಯಂತೆ ನಡೆಯಲಿವೆ: ಡಿಸಿಎಂ ಡಾ. ಅಶ್ವಥ್ ನಾರಾಯಣ್ ಸಿಇಟಿ ಪರೀಕ್ಷೆ ನಿಗದಿಯಂತೆ ನಡೆಯಲಿವೆ: ಡಿಸಿಎಂ ಡಾ. ಅಶ್ವಥ್ ನಾರಾಯಣ್

CET

ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳು ಮಾತ್ರ ಇರಬೇಕು. ಹೊರ ರಾಜ್ಯ, ದೇಶದಿಂದ ಬರುವ ವಿದ್ಯಾರ್ಥಿಗಳು ಮತ್ತು ಅವರ ಜೊತೆಗಿರುವ ಸಹಾಯಕರ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಹೇಳಿದೆ.

ಕರ್ನಾಟಕ ಸಿಇಟಿ 2020 ದಿನಾಂಕ, ವೇಳಾಪಟ್ಟಿ ಪ್ರಕಟ ಕರ್ನಾಟಕ ಸಿಇಟಿ 2020 ದಿನಾಂಕ, ವೇಳಾಪಟ್ಟಿ ಪ್ರಕಟ

ಎಲ್ಲಾ ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಪರಿವೀಕ್ಷಕರು ಮತ್ತು ಮೇಲ್ವಿಚಾರಕರಿಗೆ ಕೈಗವಸು ಮತ್ತು ವೈದ್ಯಕೀಯ ಮಾಸ್ಕ್ ಒದಗಿಸಬೇಕು. ಕಂಟೈನ್ಮೆಂಟ್ ಝೋನ್‌ಗಳಲ್ಲಿ ಯಾವುದೇ ಪರೀಕ್ಷಾ ಕೇಂದ್ರ ಇರಬಾರದು ಎಂದು ಎಸ್‌ಓಪಿಯಲ್ಲಿ ತಿಳಿಸಲಾಗಿದೆ.

ಮೂರು ದಿನ ಮೊದಲು ಪರೀಕ್ಷಾ ಕೇಂದ್ರವನ್ನು ಸೋಂಕು ನಾಶಕದಿಂದ ಸ್ವಚ್ಛಗೊಳಿಸಬೇಕು. ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ಪೋಷಕರು, ಜೊತೆಯಲ್ಲಿ ಬಂದವರು ಗುಂಪು ಗೂಡಲು ಅವಕಾಶ ನೀಡಬಾರದು ಎಂದು ಸೂಚನೆ ನೀಡಲಾಗಿದೆ.

English summary
No quarantine for out of state students who come to attend CET exam in Karnataka. Exam scheduled on July 30 and 31, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X