ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪುಟ ವಿಸ್ತರಣೆ; ಬಂತು ಮತ್ತೊಂದು ಬ್ರೇಕಿಂಗ್ ನ್ಯೂಸ್!

|
Google Oneindia Kannada News

Recommended Video

13 ಶಾಸಕರು ಯಡಿಯೂರಪ್ಪ ಸಂಪುಟಕ್ಕೆ | BJP | Karnataka | Oneindia Kannada

ಬೆಂಗಳೂರು, ಫೆಬ್ರವರಿ 04 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಿಸಿ-ಬಿಸಿ ಚರ್ಚೆ ನಡೆಯುತ್ತಿದೆ. ಯಾರು ಸಚಿವ ಸ್ಥಾನ ಪಡೆಯಲಿದ್ದಾರೆ? ಎಂಬ ಚರ್ಚೆಯ ನಡುವೆಯೇ ಮತ್ತೊಂದು ಬ್ರೇಕಿಂಗ್ ನ್ಯೂಸ್ ಬಂದಿದೆ.

ಸಚಿವ ಸಂಪುಟ ವಿಸ್ತರಣೆ ಜೊತೆ ಪುನಾರಚನೆ ನಡೆಯಲಿದೆ. ಮೂವರು ಸಚಿವರನ್ನು ಸಂಪುಟದಿಂದ ಕೈ ಬಿಡಲಾಗುತ್ತದೆ ಎಂಬ ಸುದ್ದಿಗಳು ಹಲವಾರು ದಿನಗಳಿಂದ ಹಬ್ಬಿತ್ತು. ಆದರೆ, ಮಂಗಳವಾರ ಸಂಪುಟ ಪುನಾರಚನೆ ಇಲ್ಲ ಎಂಬ ಮಾಹಿತಿ ಸಿಕ್ಕಿದೆ.

ಲಕ್ಷ್ಮಣ ಸವದಿಗೆ ಬಿಜೆಪಿ ಟಿಕೆಟ್; ಆರ್. ಶಂಕರ್‌ಗೆ ನಿರಾಸೆ ಲಕ್ಷ್ಮಣ ಸವದಿಗೆ ಬಿಜೆಪಿ ಟಿಕೆಟ್; ಆರ್. ಶಂಕರ್‌ಗೆ ನಿರಾಸೆ

ಗುರುವಾರ ಬೆಳಗ್ಗೆ 10.30ಕ್ಕೆ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಒಟ್ಟು 13 ಶಾಸಕರು ಯಡಿಯೂರಪ್ಪ ಸಂಪುಟ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಆದರೆ, ಇದನ್ನು ಇನ್ನೂ ಯಾರು ಖಚಿತಪಡಿಸಿಲ್ಲ.

ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ

ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಡುತ್ತಿರುವ ಶಾಸಕರ ಜೊತೆ ಯಡಿಯೂರಪ್ಪ ನಿರಂತರ ಸಭೆಗಳನ್ನು ನಡೆಸುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಗೆದ್ದ ಶಾಸಕರು, ಮೂಲ ಬಿಜೆಪಿ ಶಾಸಕರ ನಡುವೆ ಸಂಪುಟ ಸೇರಲು ಪೈಪೋಟಿ ನಡೆಯುತ್ತಿದೆ.

ಸಂಪುಟ ವಿಸ್ತರಣೆಗೆ ಅಮಿತ್ ಶಾ ಒಪ್ಪಿಗೆ; ಷರತ್ತುಗಳು ಅನ್ವಯ! ಸಂಪುಟ ವಿಸ್ತರಣೆಗೆ ಅಮಿತ್ ಶಾ ಒಪ್ಪಿಗೆ; ಷರತ್ತುಗಳು ಅನ್ವಯ!

ಸಂಪುಟ ವಿಸ್ತರಣೆಗೆ ಮಾತ್ರ ಒಪ್ಪಿಗೆ

ಸಂಪುಟ ವಿಸ್ತರಣೆಗೆ ಮಾತ್ರ ಒಪ್ಪಿಗೆ

ಬಿಜೆಪಿ ಹೈಕಮಾಂಡ್ ಸಂಪುಟ ವಿಸ್ತರಣೆಗೆ ಮಾತ್ರ ಒಪ್ಪಿಗೆ ಕೊಟ್ಟಿದೆ. ಆದ್ದರಿಂದ, ಸಂಪುಟ ಪುನಾರಚನೆ ನಡೆಯುವುದಿಲ್ಲ. ಮೂವರು ಸಚಿವರನ್ನು ಸಂಪುಟದಿಂದ ಕೈ ಬಿಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿದ್ದವು. ಎಲ್ಲಾ ಗೊಂದಲಗಳಿಗೆ ಈಗ ತೆರೆ ಬಿದ್ದಿದೆ.

ಯಾವ-ಯಾವ ಸಚಿವರು?

ಯಾವ-ಯಾವ ಸಚಿವರು?

ಸಂಪುಟ ಪುನಾರಚನೆಯಾದರೆ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಸಂಪುಟದಿಂದ ಕೈ ಬಿಡಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು.

ಕೋಟಾ ಶ್ರೀನಿವಾಸ ಪೂಜಾರಿ

ಕೋಟಾ ಶ್ರೀನಿವಾಸ ಪೂಜಾರಿ

ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ವಿಧಾನ ಪರಿಷತ್ ಸದಸ್ಯರಾಗುತ್ತಿದ್ದಾರೆ. ಆದ್ದರಿಂದ, ಪರಿಷತ್ ಸಭಾ ನಾಯಕರಾಗಿರುವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಸಂಪುಟದಿಂದ ಕೈ ಬಿಡಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಒಂದು ವೇಳೆ ಲಕ್ಷ್ಮಣ ಸವದಿ ಸಭಾನಾಯಕರಾದರೂ ಪೂಜಾರಿ ಸಚಿವ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ.

ಹೈಕಮಾಂಡ್ ಒಪ್ಪಿಗೆ ಸಿಕ್ಕಿಲ್ಲ

ಹೈಕಮಾಂಡ್ ಒಪ್ಪಿಗೆ ಸಿಕ್ಕಿಲ್ಲ

ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಕೈ ಬಿಡಲು ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಿಲ್ಲ. ಆದ್ದರಿಂದ, ಸಂಪುಟ ಪುನಾರಚನೆ ಇಲ್ಲ, ವಿಸ್ತರಣೆ ಮಾತ್ರ ಎಂಬ ತೀರ್ಮಾನಕ್ಕೆ ಯಡಿಯೂರಪ್ಪ ಅವರು ಬಂದಿದ್ದಾರೆ.

ಶಶಿಕಲಾ ಜೊಲ್ಲೆ

ಶಶಿಕಲಾ ಜೊಲ್ಲೆ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಅವರನ್ನು ಸಂಪುಟದಿಂದ ಕೈಬಿಡಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಬೆಳಗಾವಿ ಜಿಲ್ಲೆಗೆ ಇನ್ನೊಂದು ಸ್ಥಾನ ನೀಡಲು ಕೈಬಿಡಲು ತೀರ್ಮಾನಿಸಲಾಗಿತ್ತು. ಆದರೆ, ಮಹೇಶ್ ಕುಮಟಳ್ಳಿ ಸಚಿವರಾಗುವುದು ಅನುಮಾನವಾಗಿದೆ. ಆದ್ದರಿಂದ, ಶಶಿಕಲಾ ಜೊಲ್ಲೆ ಮುಂದುವರೆಯಲಿದ್ದಾರೆ.

English summary
All set for Karnataka chief minister B. S. Yediyurappa cabinet expansion. There is no reshuffle in cabinet. Cabinet expansion on February 6, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X