ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ, ಹಣ ಬಿಡುಗಡೆ ಬಗ್ಗೆ ಅಪ್‌ಡೇಟ್‌ ಕೊಟ್ಟ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು, ಜೂನ್‌ 19: ರಾಜ್ಯ ಕಾಂಗ್ರೆಸ್‌ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸಿದೆ. ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಆಗುತ್ತಿದೆಯೇ ಎಂಬ ಪ್ರಶ್ನೆಗೆ, ಆತಂಹ ಸಮಸ್ಯೆ ಏನೂ ಇಲ್ಲ ಎಂದ ಅವರು, ಈ‌ಗಾಗಲೇ ಏಪ್ರಿಲ್ ತಿಂಗಳ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ನಮಗೆ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. ನಮ್ಮ ಇಲಾಖೆಯ ಬದಲಾಗಿ ಈಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮೂಲಕ ಹಣ ಸಂದಾಯವಾಗುತ್ತಿದೆ ಎಂದು ಹೇಳಿದರು.

No revision in Grihalakshmi scheme Minister Lakshmi Hebbalkar Said

ಗೃಹಲಕ್ಷ್ಮಿ ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಳಜಿ ಇದೆ‌. ಯೋಜನೆಗೆ ಯಾವುದೇ ತೊಂದರೆ ಇಲ್ಲ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ. ಪ್ರತಿ ತಿಂಗಳು 10 ರಿಂದ 15 ಸಾವಿರ ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಿದೆ. ನೋಂದಣಿ ಮಾಡಿಕೊಂಡ ಎಲ್ಲಾ ಫಲಾನುಭವಿಗಳಿಗೆ ಹಣ ತಲುಪುತ್ತಿದೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+