ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪಠಾಣ ಅವರ ಮೇಲೆ ರೌಡಿಶೀಟ್ ಇರುವುದಿಲ್ಲ: ಹಾವೇರಿ ಎಸ್ಪಿ ಸ್ಪಷ್ಟನೆ
ಬೆಂಗಳೂರು, ನವೆಂಬರ್ 12: ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ಯಾವುದೇ ರೀತಿಯ ರೌಡಿಶೀಟ್ ಇರುವುದಿಲ್ಲ ಎಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದವರಾದ ಯಾಸೀರ್ ಅಹ್ಮದ್ ತಂದೆ ಮೊಹ್ಮದ್‌ಖಾನ್ ಪಠಾಣ ಇವರ ಮೇಲೆ ರೌಡಿಶೀಟ್ ಇದೆ ಅಂತ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗಿರುತ್ತದೆ.
ಶಿಗ್ಗಾಂವಿಯ ಡಿಎಸ್‌ಪಿ ಮತ್ತು ಪೊಲೀಸ್ ಇನ್ಸಪೆಕ್ಟರ್ (ಪಿಐ) ಅವರ ಕಚೇರಿಯ ದಾಖಲಾತಿಗಳನ್ನು ಪರಿಶೀಲಿಸಲಾಗಿದ್ದು, ಪ್ರಸ್ತುತ ಯಾಸೀರ್ ಅಹ್ಮದ್ ತಂದೆ ಮೊಹ್ಮದ್‌ಖಾನ್ ಪಠಾಣ ಅವರ ಮೇಲೆ ಯಾವುದೇ ರೌಡಿ ಶೀಟ್ ಇರುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

ಇನ್ನೂ ಈ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರೌಡಿಶೀಟರ್ ಅಂತ ಎಸ್ಪಿ ಹಾಗೂ ಅಜ್ಜಂಪೀರ್ ಖಾದ್ರಿ ಇಬ್ಬರೂ ಹೇಳಿದ್ದಾರೆ. ಎಸ್ಪಿ ಅವರು ಯಾಕೆ ಹೇಳಿದರು. ಅದನ್ನು ಯಾಕೆ ವಾಪಸ್ ತೊಗೆದುಕೊಂಡರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟೀಕರಣ ನೀಡಬೇಕು. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಹಾಗೂ ರಾಜ್ಯದ ಚುನಾವಣಾ ಆಯೋಗಕ್ಕೆ ದೂರು ಕೊಡುತ್ತೇವೆ ಎಂದರು.
ಶಿಗ್ಗಾವಿ ಸವಣೂರು ಕ್ಷೇತದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ದೊಡ್ಡ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಭರವಸೆ ವ್ಯಕ್ತಪಡಿಸಿದ್ದಾರೆ. ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೀಡಿರುವ ಹೇಳಿಕೆ ವಿರುದ್ದ ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ದೂರು ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಈಗ ಬಗ್ಗೆ ಪ್ರಲ್ಹಾದ್ ಜೋಷಿಯವರು ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿಯ ರೌಡಿ ಶೀಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದು ಹೇಳಿಕೆ ಬದಲಾಯಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹಾವೇರಿ ಎಸ್ಪಿ ಮಾದ್ಯಮದ ಪ್ರಶ್ನೆಗೆ ಇರುವ ಪರಿಸ್ಥಿತಿಯನ್ನು ಸತ್ಯವಮ್ನು ಹೇಳಿದ್ದರು. ಅದು ಮಾಧ್ಯಮದಲ್ಲಿ ಬಂದಿದೆ. ಎಸ್ಪಿ ಸುಮ್ಮನೆ ಹೇಳಿಕೆ ನೀಡುವುದಿಲ್ಲ. ಮಾಹಿತಿ ಪಡೆದುಕೊಂಡೇ ಹೇಳಿರುತ್ತಾರೆ. ಈಗ ಸರ್ಕಾರದ ಒತ್ತಡಕ್ಕೆ ಮಣಿದು ಯಾವುದೇ ಪ್ರಕರಣ ಇಲ್ಲ ಅಂತ ಹೇಳುತ್ತಾರೆ. ಎಸ್ಪಿ ಹೇಳಿಕೆಯ ಬಗ್ಗೆ ತನಿಖೆಯಾಗಬೇಕು. ಯಾವುದು ಸತ್ಯ ಎನ್ನುವುದು ಗೊತ್ತಾಗಬೇಕು. ಈ ಬಗ್ಗೆ ನಾವು ನಾಳೆ ಚುನಾವಣಾ ಆಯೋಗಕ್ಕೆ ದೂರು ಕೊಡುತ್ತೇವೆ ಎಂದರು.
ಕಳೆದ ವರ್ಷ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ದ ಅಷ್ಟೊಂದು ಪ್ರಕರಣಗಳು ಇದ್ದವು. ಪ್ರಕರಣಗಳು ಮುಕ್ತಾಯವಾಗಲು ಏನೆಲ್ಲ ನಿಯಮ ಇದೆ ಎಂದು ಎಸ್ಪಿಯವರು ಪೊಲಿಸ್ ಮ್ಯಾನುವಲ್ ಏನು ಅಂತ ಅವರೇ ಹೇಳಿದರು. ಈಗ ಯಾವುದೇ ಪ್ರಕರಣ ಇಲ್ಲ ಅಂತ ಸರ್ಕಾರ ಹೇಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.












Click it and Unblock the Notifications