ಜೆಡಿಎಸ್ ಜೊತೆಗೆ ಚುನಾವಣಾ ಮೈತ್ರಿ ಬಗ್ಗೆ ರಾಜ್ಯ ಮಟ್ಟದಲ್ಲಿ ಯಾವುದೇ ಚರ್ಚೆಯಿಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಜೂನ್.14: 2024ರ ಲೋಕಸಭೆ ಚುನಾವಣೆಗೆ ಜೆಡಿಎಸ್‌ನೊಂದಿಗೆ ಚುನಾವಣಾ ಮೈತ್ರಿ ಕುರಿತು ರಾಜ್ಯ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜಕೀಯದಲ್ಲಿ ಭವಿಷ್ಯವನ್ನು ಊಹಿಸುವುದು ಕಷ್ಟ ಎಂದು ಮುಂದೆ ಏನಾದರೂ ಆಗಬಹುದು ಎಂಬ ಸೂಚನೆ ನೀಡಿದ್ದಾರೆ.

ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಇತರ ಪಕ್ಷಗಳನ್ನು ಒಗ್ಗೂಡಿಸುವ ಕುರಿತು ಮಾಧ್ಯಮಗಳಲ್ಲಿ ನಡೆಯುತ್ತಿರುವ ಚರ್ಚೆಗಳನ್ನು ತಮ್ಮ ಪಕ್ಷವು ಗಮನಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 'ರಾಜ್ಯ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ, ಮುಂದಿನ ದಿನಗಳಲ್ಲಿ ನೋಡೋಣ, ರಾಜಕೀಯದಲ್ಲಿ ಭವಿಷ್ಯ ಹೇಳುವುದು ಕಷ್ಟ' ಎಂದು ಜೆಡಿಎಸ್ ಜತೆಗಿನ ಮೈತ್ರಿ ಕುರಿತ ಪ್ರಶ್ನೆಗೆ ಬಸವರಾಜ ಬೊಮ್ಮಾಯಿ ಉತ್ತರಿಸಿದ್ದಾರೆ.

No state level discussions on electoral understanding with JDS: Basavaraj Bommai

ಕಾಂಗ್ರೆಸ್ ಅನ್ನು ಕಟ್ಟಿಹಾಕಲು ಇತರ ಪಕ್ಷಗಳನ್ನು ಒಗ್ಗೂಡಿಸುವ ಕುರಿತು ಕೇಳಿದ ಪ್ರಶ್ನೆಗೆ, "ಪತ್ರಿಕೆಗಳಲ್ಲಿ ಇಂತಹ ಮಾತುಕತೆಗಳು ಬಲವಾಗಿ ನಡೆಯುತ್ತಿವೆ ಮತ್ತು ಈ ನಿಟ್ಟಿನಲ್ಲಿ ಎಲ್ಲಾ ಚಾನೆಲ್‌ಗಳಲ್ಲಿ ಚರ್ಚೆಗಳು ನಡೆಯುತ್ತಿವೆ, ನಾವು ಈ ಬಗ್ಗೆ ನಿಗಾ ಇಡುತ್ತೇವೆ" ಎಂದು ಹೇಳಿದ್ದಾರೆ.

ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ, ಲೋಕಸಭೆ ಚುನಾವಣೆ ಎದುರಿಸಲು ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇತ್ತೀಚೆಗಷ್ಟೇ ದೆಹಲಿಗೆ ಭೇಟಿ ನೀಡಿದ್ದ ಜೆಡಿಎಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿಯ ಕೆಲವು ಹಿರಿಯ ನಾಯಕರನ್ನು ಭೇಟಿ ಮಾಡಿದ್ದರು ಎಂದು ಹೇಳಲಾಗಿದೆ.

ಕುತೂಹಲದ ಸಂಗತಿಯೆಂದರೆ, ಲೋಕಸಭೆ ಚುನಾವಣೆಗೆ ಚುನಾವಣಾ ಮೈತ್ರಿ ಪರಿಸ್ಥಿತಿ ಎದುರಾದಾಗ ನೋಡಿಕೊಳ್ಳಲಾಗುವುದು ಮತ್ತು ಸಂಸತ್ತಿನ ಚುನಾವಣೆಗೆ ಸ್ಪರ್ಧಿಸುವ ಯಾವುದೇ ಪ್ರಸ್ತಾಪವು ತಮ್ಮ ಮುಂದೆ ಇಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಸೋಮವಾರ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿ(ಎಸ್) ಮೈತ್ರಿ ಮಾಡಿಕೊಳ್ಳಬಹುದೆಂಬ ಊಹಾಪೋಹಗಳಿಗೆ ಮತ್ತು ಆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಕೇಳಿದ ಪ್ರಶ್ನೆಗೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದರು.

ಕರ್ನಾಟಕದಲ್ಲಿ 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಒಟ್ಟು 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆಲ್ಲುವ ಮೂಲಕ ಮುನ್ನಡೆಯಲ್ಲಿದೆ. ಆದರೆ ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಒಂದು ಸ್ಥಾನದಲ್ಲಿ ಗೆದ್ದಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಪಡೆದುಕೊಂಡಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+