• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾನುವಾರ ಕರ್ಫ್ಯೂ ಇಲ್ಲ: ಬೆಳಗ್ಗೆ 7 ರಿಂದ ಸಂಜೆ 7 ರವರಿಗೆ ಮಾತ್ರ ವಿನಾಯಿತಿ.!

|

ಬೆಂಗಳೂರು, ಮೇ 30: ಮಾರಣಾಂತಿಕ ಕೊರೊನಾ ವೈರಸ್ ಅನ್ನು ತಡೆಗಟ್ಟಲು ಮೇ 31 ರವರೆಗೂ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ 4.0 ಅನ್ವಯ ಕರ್ನಾಟಕದಲ್ಲಿ ಭಾನುವಾರದಂದು ಕಂಪ್ಲೀಟ್ ಲಾಕ್ ಡೌನ್ ಅಥವಾ ಕರ್ಫೂ ಇರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಹಿಂದೆ ಘೋಷಿಸಿದ್ದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶದಂತೆ ಕಳೆದ ಭಾನುವಾರ ಕರ್ನಾಟಕದಲ್ಲಿ ಕರ್ಫ್ಯೂ ವಿಧಿಸಲಾಗಿತ್ತು. ಆದರೆ, ನಾಳೆ (ಮೇ 31) ಭಾನುವಾರ 'ಕಂಪ್ಲೀಟ್ ಲಾಕ್ ಡೌನ್ ಅಥವಾ ಕರ್ಫ್ಯೂ ಇರುವುದಿಲ್ಲ.

Big Breaking: ಮೇ 31, ಭಾನುವಾರ ಕರ್ಫ್ಯೂ ಇರುವುದಿಲ್ಲ: ಸರ್ಕಾರದಿಂದ ಮಹತ್ವದ ನಿರ್ಧಾರ!

ಸಾರ್ವಜನಿಕರ ಬೇಡಿಕೆ ಮೇರೆಗೆ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಭಾನುವಾರದಂದು ಲಾಕ್ ಡೌನ್ ಇರುವುದಿಲ್ಲ ಎಂದು ಸಿಎಂ ಸಚಿವಾಲಯ ತಿಳಿಸಿದೆ. ಭಾನುವಾರದಂದು ವಿಧಿಸಲಾಗುವ ಕರ್ಫ್ಯೂವನ್ನು ತೆರವುಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

ಹೀಗಾಗಿ, ಮೇ 31 ಭಾನುವಾರ ಕರ್ನಾಟಕದಲ್ಲಿ ಕರ್ಫ್ಯೂ ಇರುವುದಿಲ್ಲ. ಬೆಳಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆಯವರಿಗೆ ಕರ್ಫ್ಯೂವನ್ನು ತೆರವುಗೊಳಿಸಿ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಆದರೆ, ರಾತ್ರಿ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರಿಗೆ ಯಥಾಪ್ರಕಾರ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಸರ್ಕಾರ ಸ್ಪಷ್ಟ ಪಡಿಸಿದೆ.

ಭಾನುವಾರ ಬೆಳಗ್ಗೆ 7 ರಿಂದ ರಾತ್ರಿ 7 ರವರೆಗೆ ಅಂಗಡಿಗಳು ತೆರೆಯಬಹುದಾಗಿದೆ. ಈ ಸಮಯದಲ್ಲಿ ಸಾರ್ವಜನಿಕರು ವ್ಯಾಪಾರ-ವಹಿವಾಟು ನಡೆಸಬಹುದು.

English summary
No Sunday Curfew in Karnataka: Exemption from 7am to 7pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X