ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭಾ ಚುನಾವಣೆ : ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಇಲ್ಲ?

|
Google Oneindia Kannada News

ಬೆಂಗಳೂರು, ಫೆಬ್ರವರಿ 18 : 'ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ನೀಡದಿರುವ ತೀರ್ಮಾನಕ್ಕೆ ಕಾಂಗ್ರೆಸ್ ವರಿಷ್ಠರು ಬಂದಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆ ಮಾಡಲು ಹಲವು ಶಾಸಕರು ಉತ್ಸುಕರಾಗಿದ್ದಾರೆ. ಆದರೆ, ದಿನೇಶ್ ಗುಂಡೂರಾವ್ ಅವರ ಹೇಳಿಕೆಯಿಂದಾಗಿ ಶಾಸಕರಿಗೆ ನಿರಾಸೆಯಾಗಲಿದೆ. ಆದರೆ, ಅನಿವಾರ್ಯ ಪರಿಸ್ಥಿತಿ ಬಂದರೆ ಶಾಸಕರ ಸ್ಪರ್ಧೆಗೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ.

ಬೆಂಗಳೂರು ಸೆಂಟ್ರಲ್ ಟಿಕೆಟ್‌ಗೆ ನಾಲ್ಕು ಕಾಂಗ್ರೆಸ್‌ ನಾಯಕರ ಪೈಪೋಟಿ!ಬೆಂಗಳೂರು ಸೆಂಟ್ರಲ್ ಟಿಕೆಟ್‌ಗೆ ನಾಲ್ಕು ಕಾಂಗ್ರೆಸ್‌ ನಾಯಕರ ಪೈಪೋಟಿ!

ಕರ್ನಾಟಕದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸಲಿವೆ. ಆದರೆ, ಸೀಟುಗಳ ಹಂಚಿಕೆ ಕುರಿತು ಇನ್ನೂ ಪಕ್ಷಗಳು ತೀರ್ಮಾನ ಕೈಗೊಂಡಿಲ್ಲ. ಜೆಡಿಎಸ್ 12 ಕ್ಷೇತ್ರಗಳಿಗಾಗಿ ಬೇಡಿಕೆ ಇಟ್ಟಿದೆ.

ಪ್ರಕಾಶ್ ರಾಜ್ ಸ್ಪರ್ಧೆ : ಬೆಂಗಳೂರು ಸೆಂಟ್ರಲ್‌ನ ರಾಜಕೀಯ ಚಿತ್ರಣಪ್ರಕಾಶ್ ರಾಜ್ ಸ್ಪರ್ಧೆ : ಬೆಂಗಳೂರು ಸೆಂಟ್ರಲ್‌ನ ರಾಜಕೀಯ ಚಿತ್ರಣ

ಆಂಧ್ರಪ್ರದೇಶದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಬಯಸುವ ಶಾಸಕರು ಮೊದಲು ರಾಜೀನಾಮೆ ನೀಡಬೇಕು ಎಂದು ಸೂಚನೆ ನೀಡಲಾಗುತ್ತಿದೆ. ಕರ್ನಾಟಕದಲ್ಲಿಯೂ ಇಂತಹ ನಿಯಮವನ್ನು ಜಾರಿಗೊಳಿಸಲು ಕಾಂಗ್ರೆಸ್ ಮುಂದಾಗಿದೆಯೇ? ಎಂಬುದು ನಿಗೂಢವಾಗಿದೆ....

ಪ್ರಕಾಶ್ ರಾಜ್ ಜತೆಗೆ ಒನ್ ಇಂಡಿಯಾ ಕನ್ನಡ ಎಕ್ಸ್ ಕ್ಲೂಸಿವ್ ಸಂದರ್ಶನಪ್ರಕಾಶ್ ರಾಜ್ ಜತೆಗೆ ಒನ್ ಇಂಡಿಯಾ ಕನ್ನಡ ಎಕ್ಸ್ ಕ್ಲೂಸಿವ್ ಸಂದರ್ಶನ

ಶಾಸಕರು ಆಕಾಂಕ್ಷಿಗಳು

ಶಾಸಕರು ಆಕಾಂಕ್ಷಿಗಳು

ಹಲವು ಶಾಸಕರು ಲೋಕಸಭಾ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಟಿಕೆಟ್‌ಗಾಗಿ ಶಿವಾಜಿನಗರ ಶಾಸಕ ರೋಷನ್ ಬೇಗ್, ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಪ್ರಯತ್ನ ನಡೆಸಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆದ್ದರಿಂದ, ದಿನೇಶ್ ಗುಂಡೂರಾವ್ ಅವರು ಶಾಸಕರಿಗೆ ಟಿಕೆಟ್ ಇಲ್ಲ ಎಂದು ಹೇಳಿಕೆ ನೀಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್

ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್

ಕೆಲವು ದಿನಗಳ ಹಿಂದೆ ಮಾತನಾಡಿದ್ದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಲಾಗುತ್ತದೆ. ಟಿಕೆಟ್‌ಗಾಗಿ ಎಷ್ಟು ಲಾಬಿ ನಡೆದರೂ ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ಹೇಳಿದ್ದರು.

ಕೃಷ್ಣಬೈರೇಗೌಡ ಕಣಕ್ಕೆ?

ಕೃಷ್ಣಬೈರೇಗೌಡ ಕಣಕ್ಕೆ?

ಹಲವು ಕಾರಣಗಳಿಗೆ ಕುತೂಹಲ ಹುಟ್ಟಿಸಿರುವ ಕ್ಷೇತ್ರ ಬೆಂಗಳೂರು ಉತ್ತರ. ಜೆಡಿಎಸ್ ಜೊತೆ ಮೈತ್ರಿ ಮಾತುಕತೆ ಸಫಲವಾಗದಿದ್ದರೆ ಸಚಿವ ಕೃಷ್ಣ ಬೈರೇಗೌಡ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷ ಚಿಂತನೆ ನಡೆಸುತ್ತಿದೆ. ಕೃಷ್ಣ ಬೈರೇಗೌಡರು ಬ್ಯಾಟರಾಯನಪುರ ಕ್ಷೇತ್ರದ ಶಾಸಕರಾಗಿದ್ದು, ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದಾರೆ.

ಶಾಸಕರನ್ನು ಕಣಕ್ಕಿಳಿಸಿದ ಉದಾಹರಣೆ ಇದೆ

ಶಾಸಕರನ್ನು ಕಣಕ್ಕಿಳಿಸಿದ ಉದಾಹರಣೆ ಇದೆ

ಶಾಸಕರನ್ನು ಲೋಕಸಭಾ ಚುನಾವಣಾ ಕಣಕ್ಕಿಳಿಸಿದ ಉದಾಹರಣೆ ಹಲವು ಸಿಗುತ್ತದೆ. 2013ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಪ್ರಕಾಶ್ ಹುಕ್ಕೇರಿ ಅವರನ್ನು 2014ರ ಲೋಕಸಭಾ ಚುನಾವಣೆ ಕಣಕ್ಕಿಳಿಸಲಾಗಿತ್ತು. ಹೆಚ್ಚು ಸ್ಥಾನ ಗೆಲ್ಲಬೇಕು ಎಂದಾದರೆ ಕಾರ್ಯತಂತ್ರವನ್ನು ಬದಲಾವಣೆ ಮಾಡಲಾಗುತ್ತದೆ.

English summary
Karnataka Pradesh Congress Committee (KPCC) president Dinesh Gundu Rao said that party will not allow any sitting MLA's to contest for Lok Sabha elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X