ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ: ರಾಜ್ಯ ಚುನಾವಣಾ ಆಯೋಗ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 01: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಚುನಾವಣಾ ವೇಳಾಪಟ್ಟಿಯು ಪ್ರಕಟಗೊಂಡಿರುವ ಬಗ್ಗೆ ಸುಳ್ಳು ಮಾಹಿತಿಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ರಾಜ್ಯ ಚುನಾವಣಾ ಆಯೋಗದ ಗಮನಕ್ಕೆ ಬಂದಿರುತ್ತದೆ. ಆದರೆ ರಾಜ್ಯ ಚುನಾವಣಾ ಆಯೋಗದಿಂದ ಈವರೆವಿಗೂ ಯಾವುದೇ ವೇಳಾಪಟ್ಟಿಯನ್ನು ಪ್ರಕಟಿಸಿರುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗವು ತಿಳಿಸಿದೆ.
ರಾಜ್ಯ ಚುನಾವಣಾ ಆಯೋಗವು ಪತ್ರಿಕಾ ಹಾಗೂ ದೃಶ್ಯ ಮಾಧ್ಯಮದ ಮೂಲಕ ಪತ್ರಿಕಾ ಗೋಷ್ಠಿಯನ್ನು ಕರೆದು ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸುತ್ತದೆ. ಅದುದರಿಂದ, ಪ್ರಸ್ತುತ ಹರಿದಾಡುತ್ತಿರುವ ಚುನಾವಣಾ ವೇಳಾಪಟ್ಟಿಯು ಸುಳ್ಳು ಮಾಹಿತಿಯಾಗಿರುವುದಾಗಿ ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರಿಗೆ ಆಗಮಿಸಿದ ರಾಷ್ಟಪತಿ ದ್ರೌಪದಿ ಮುರ್ಮು
ಎರಡು ದಿನಗಳ ಮೈಸೂರು ಭೇಟಿಗಾಗಿ ಇಂದು ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಮೈಸೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಮಯದಲ್ಲಿ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವರಾದ ಅನುಪ್ರಿಯಾ ಪಟೇಲ್, ಮೈಸೂರಿನ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿ ಕಾಂತ ರೆಡ್ಡಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವಗುಪ್ತ, ಮೈಸೂರು ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.












Click it and Unblock the Notifications