ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೈ-ಕರ್ನಾಟಕ ಭಾಗದ ನೌಕರರಿಗೆ 10 ವರ್ಷ ವರ್ಗಾವಣೆ ಇಲ್ಲ

|
Google Oneindia Kannada News

ಬೆಂಗಳೂರು, ಜೂನ್ 27 : ಹೈದರಾಬಾದ್-ಕರ್ನಾಟಕ ಭಾಗದಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು 10 ವರ್ಷಗಳ ಕಾಲ ವರ್ಗಾವಣೆ ಮಾಡದಂತೆ ಸೂಚನೆ ನೀಡಲಾಗಿದೆ. ಸಚಿವ ಪ್ರಿಯಾಂಕ್‌ ಖರ್ಗೆ ವರ್ಗಾವಣೆ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಈ ಕುರಿತು ನಿರ್ದೇಶನ ನೀಡಿದೆ. ಹೈದರಾಬಾದ್-ಕರ್ನಾಟಕ ಭಾಗದಲ್ಲಿ ಕೆಲಸ ಮಾಡುವ ಅಧಿಕಾರಿಗಳ ನೇಮಕದ ದಿನದಿಂದ 10 ವರ್ಷಗಳ ಕಾಲ ವರ್ಗಾವಣೆ ಮಾಡಬಾರದು ಎಂದು ಹೇಳಿದೆ.

ಹೈದರಾಬಾದ್ ಕರ್ನಾಟಕಕ್ಕೆ 'ಕಲ್ಯಾಣ ಕರ್ನಾಟಕ' ಎಂದು ಹೆಸರಿಡಲು ಆಗ್ರಹಹೈದರಾಬಾದ್ ಕರ್ನಾಟಕಕ್ಕೆ 'ಕಲ್ಯಾಣ ಕರ್ನಾಟಕ' ಎಂದು ಹೆಸರಿಡಲು ಆಗ್ರಹ

ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವೊಂದನ್ನು ಬರೆದಿದ್ದರು. ಹೈದರಾಬಾದ್-ಕರ್ನಾಟಕ ಭಾಗದಲ್ಲಿನ ಅಧಿಕಾರಿಗಳನ್ನು ಪದೇ ಪದೇ ವರ್ಗಾವಣೆ ಮಾಡುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ ಉಂಟಾಗಿದೆ ಎಂದು ಹೇಳಿದ್ದರು.

ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಮುತುವರ್ಜಿ: ಮುಖ್ಯಮಂತ್ರಿ ಭರವಸೆಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಮುತುವರ್ಜಿ: ಮುಖ್ಯಮಂತ್ರಿ ಭರವಸೆ

No transfer for Hyderabad-Karnataka region govt employees for 10 years

ಕಲಬುರಗಿ ಜಿಲ್ಲೆಯಲ್ಲಿಯೇ 76 ಪ್ರಮುಖ ಹುದ್ದೆಗಳು ವರ್ಗಾವಣೆ ಕಾರಣದಿಂದಾಗಿ ಖಾಲಿ ಇವೆ. ಇದರಿಂದಾಗಿ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆ ಉಂಟಾಗಿದೆ ಎಂದು ಪತ್ರದಲ್ಲಿ ವಿವರಣೆ ನೀಡಿದ್ದರು.

ಹೈ-ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ರಾಜಶೇಖರ ಪಾಟೀಲ್ ಆಯ್ಕೆಹೈ-ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ರಾಜಶೇಖರ ಪಾಟೀಲ್ ಆಯ್ಕೆ

ಆದ್ದರಿಂದ ಹೈದರಾಬಾದ್-ಕರ್ನಾಟಕ ಭಾಗದ ವ್ಯಾಪ್ತಿಗೆ ಬರುವ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು 10 ವರ್ಷ ವರ್ಗಾವಣೆ ಮಾಡದಂತೆ ಸೂಚನೆ ನೀಡಲಾಗಿದೆ.

ಹೈದರಾಬಾದ್-ಕರ್ನಾಟಕ ಭಾಗಕ್ಕೆ ನೇಮಕವಾದ ಅಧಿಕಾರಿಗಳು ಸ್ಪಲ್ಪ ಸಮಯ ಇಲ್ಲೇ ಕೆಲಸ ಮಾಡುವಂತೆ ಮಾಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದರು. ಜೂನ್ 20ರಂದು ಇಲಾಖೆ ಹತ್ತು ವರ್ಷ ವರ್ಗಾವಣೆ ಮಾಡದಂತೆ ಸೂಚನೆ ಕೊಟ್ಟಿದೆ.

English summary
Karnataka government employees working in the Hyderabad-Karnataka region will not transfer for ten years from the date of appointment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X