ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Vani Vilasa Sagara : ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಆತಂಕ ಇಲ್ಲ ಎಂದು ತಜ್ಞರ ವರದಿ: ಗೋವಿಂದ ಕಾರಜೋಳ

|
Google Oneindia Kannada News

ಬೆಂಗಳೂರು, ಸೆ.9: ವಾಣಿವಿಲಾಸ ಸಾಗರ ಜಲಾಶಯದ ಸುರಕ್ಷತೆಯ ಬಗ್ಗೆ ಯಾವುದೇ ಆತಂಕ ಪಡುವ ಕಾರಣವಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.

Recommended Video

Vani Vilas Dam ದಾಖಲೆ ಬರೆದ ಹಿರಿಯೂರು ವಾಣಿವಿಲಾಸ ಸಾಗರ ಜಲಾಶಯ | *India | OneIndia Kannada

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಜ್ಞರು ಸಮಿತಿಯು ಅಣೆಕಟ್ಟೆಗೆ ಭೇಟಿ ಕೊಟ್ಟಿದ್ದು ವಾಣಿವಿಲಾಸ ಸಾಗರ ಜಲಾಶಯದ ಅಣೆಕಟ್ಟೆಯನ್ನು ಸಮಗ್ರವಾಗಿ ಪರಿಶೀಲಿಸಿ, ಪರಿವೀಕ್ಷಿಸಿ ಅಣೆಕಟ್ಟೆಯ ಯಾವುದೇ ಭಾಗದಲ್ಲಿ ನೀರು ಸೋರುವಿಕೆ ಇಲ್ಲವೆಂದು ಹಾಗೂ ಅಣೆಕಟ್ಟೆಯ ಸುರಕ್ಷತೆಗೆ ಯಾವುದೇ ತೊಂದರೆ ಇಲ್ಲವೆಂದು ವರದಿ ನೀಡಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

No worry about Chitradurga Vanivilasa Sagar Reservoir: Minister Govind Karjol

ಕೇಂದ್ರ ಜಲ ಆಯೋಗದ ಶಿಫಾರಸ್ಸಿನಂತೆ ವಾಣಿವಿಲಾಸ ಸಾಗರ ಅಣೆಕಟ್ಟೆಯಲ್ಲಿ ಅತಿ ಹೆಚ್ಚು ಸಂಭವನೀಯ ಪ್ರವಾಹ ಪರಿಸ್ಥಿತಿ 35,000 ಕ್ಯೂಸೆಕ್ಸ್ ಇದ್ದು, ಪ್ರಸ್ತುತ ಅಣೆಕಟ್ಟೆಗೆ ಹರಿದು ಬರುತ್ತಿರುವ ನೀರು ಸುಮಾರು 15 ಸಾವಿರ ಕ್ಯೂಸೆಕ್ಸ್ ಇದೆ. ಅಷ್ಟೇ ಪ್ರಮಾಣದ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿರುವುದರಿಂದ ಅಣೆಕಟ್ಟೆಯ ಗರಿಷ್ಠ ಮಟ್ಟ 142 ಅಡಿ ಇರುವುದರಿಂದ ಪ್ರಸ್ತುತ ನೀರಿನ ಸಂಗ್ರಹಣೆ 135 ಅಡಿ ಇರುವುದರಿಂದ ಅಣೆಕಟ್ಟೆಗೆ ಯಾವುದೇ ತೊಂದರೆ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆಂದು ಭದ್ರಾ ಮೇಲ್ದಂಡೆ ಯೋಜನಾ ವಲಯದ ಮುಖ್ಯ ಇಂಜಿನಿಯರ್ ವರದಿ ಸಲ್ಲಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಆತಂಕಕ್ಕೆಕಾರಣವಿಲ್ಲ ಎಂದು ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ.

English summary
Water Resources Minister Govind Karjol said that there is no reason to worry about the safety of Chitradurga Vanivilasa Sagar reservoir.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X