ದೀಪಾವಳಿ ನಂತರ ಸರ್ಕಾರ ಪತನ : ಮಧು ಬಂಗಾರಪ್ಪ ಏನಂದ್ರು?

ಬೆಳಗಾವಿ, ಸೆಪ್ಟೆಂಬರ್‌ 11 : ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ. ಸರ್ಕಾರ ಪತನಕ್ಕೆ ಟೈಮ್‌ ಬಾಂಬ್ ಫಿಕ್ಸ್ ಆಗಿದೆ.‌ ಸಂಕ್ರಾಂತಿ ದೂರ ಆಯ್ತು, ದೀಪಾವಳಿ ಒಳಗೆ ಕಾಂಗ್ರೆಸ್, ಸಿದ್ದರಾಮಯ್ಯ ಸರ್ಕಾರ ಢಮಾರ್ ಆಗುತ್ತೆ ಎಂದು ಬಿಜೆಪಿ ನಾಯಕರ ಹೇಳಿಕೆ ಕುರಿತು ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ಬಿಜೆಪಿಯವರು ಇನ್ನೂ ನಾಲ್ಕು ದೀಪಾವಳಿ ಕಾಯಬೇಕು. ಅಲ್ಲಿಯವರೆಗೆ ಮನೆಯಲ್ಲಿ ದೀಪಾವಳಿ ಮಾಡೋಕೆ ಹೇಳಿ ಎಂದು ಮಧುಬಂಗಾರಪ್ಪ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ. ಒಳ್ಳೆಯವರನ್ನ ಕೆಳಗಿಳಿಸಲು ಕುತಂತ್ರ ಇರುತ್ತೆ, ಬಿಜೆಪಿಯವರು ನಿಸ್ಸಿಮರು.ಇವತ್ತಿನವರೆಗೂ ಅವರ ಹಣೆಬರಹಕ್ಕೆ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬಂದಿಲ್ಲ.ಬಾಂಬೆ ಬಾಯ್ಸ ಅಂತಾ ನೀವೆ ಎಲ್ಲ ಹಾಕಿದ್ರಿ‌ ಇಂತಹ ಸಂಪ್ರದಾಯ ಬೇಕಾ ನಮಗೆ ಎಂದು ಮಧುಬಂಗಾರಪ್ಪ ಪ್ರಶ್ನಿಸಿದರು.

Nobody Can Remove Siddaramaiah From Power Says Minister Madhu Bangarappa

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಯಾರಿಂದಲೂ ಸಾಧ್ಯವಿಲ್ಲ. ಕೋರ್ಟ್ ಅನ್ನುವುದು ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ. ನ್ಯಾಯಿಕ ವಿಚಾರಣೆ ನಡೆದುಕೊಂಡು ಹೋಗುತ್ತದೆ. ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎನ್ನುವುದು ನಮ್ಮೆಲ್ಲರ ಆಸೆ, ಅವರು ಮುಙದುವರೆಯುತ್ತಾರೆ ಎಂದರು.

ಕೋರ್ಟ್ ನಲ್ಲಿ ದೆಹಲಿ ಸಿಎಂ ಅರವಿಂದ ಕ್ರೇಜಿ ವಾಲ್, ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರದ್ದು ಕೇಸ್ ಇದೆ, ಇವರಿಗೆ ಸಿದ್ದರಾಮಯ್ಯ ಅಷ್ಟೇ ಯಾಕೆ ಕಾಣ್ತಾರೆ ಎಂದ ಮಧುಬಂಗರಾಪ್ಪ ಬಿಜೆಪಿಯನ್ನು ಪ್ರಶ್ನಿಸಿದರು.

ನಮ್ಮ ತಂದೆ ಎಸ್. ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗ ಬೇಕಾದಷ್ಟು ಕೇಸ್ ಗಳನ್ನ ನಾವು ಸಹ ನೋಡಿದ್ದೇವೆ, ಇದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಸಿಎಂ ರೇಸ್ ನಲ್ಲಿ ಕಾಂಗ್ರೆಸ್ ನಾಯಕರೇ ಹೆಚ್ಚಿನವರು ಇದ್ದಾರೆ ಎಂಬ ಬಿಜೆಪಿ ನಾಯಕರ ಆರೋಪ. ನಾನು ಅಷ್ಟು ದೊಡ್ಡ ಮನುಷ್ಯ ಅಲ್ಲ, ಅದಕ್ಕೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದರು.

ಬಿಜೆಪಿಗೆ ಸಿದ್ದರಾಮಯ್ಯ ಭಯ ಇದೆಯೇ ಎಂಬ ಪ್ರಶ್ನೆಗೆ, ಬಿಜೆಪಿ ಅಷ್ಟೇ ಅಲ್ಲಾ ಜೆಡಿಎಸ್ ಸೇರಿ ಎಲ್ಲ ವಿರೋಧ ಪಕ್ಷದವರಿಗೂ ಭಯ ಇದೆ. ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ. ಒಳ್ಳೆಯವರನ್ನ ಕೆಳಗಿಳಿಸಲು ಕುತಂತ್ರ ಇರುತ್ತೆ, ಬಿಜೆಪಿಯವರು ನಿಸ್ಸಿಮರು.ಇವತ್ತಿನವರೆಗೂ ಅವರ ಹಣೆಬರಹಕ್ಕೆ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬಂದಿಲ್ಲ.ಬಾಂಬೆ ಬಾಯ್ಸ ಅಂತಾ ನೀವೆ ಎಲ್ಲ ಹಾಕಿದ್ರಿ‌ ಇಂತಹ ಸಂಪ್ರದಾಯ ಬೇಕಾ ನಮಗೆ ಎಂದು ಮಧುಬಂಗಾರಪ್ಪ ಪ್ರಶ್ನಿಸಿದರು.

ಶಾಲೆಗಳಲ್ಲಿ ಪಾಠ ಮಾಡದೇ ಇತರೇ ಕೆಲಸ ಮಾಡುತ್ತ ತಿರುಗಾಡುವ ಶಿಕ್ಷಕರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರಿಹಾಯ್ದಿದ್ದಾರೆ. ಶಿಕ್ಷಕರಾದವರು ಶಾಲೆಯಲ್ಲಿಯೇ ಇದ್ದು ಮಕ್ಕಳಿಗೆ ಶಿಕ್ಷಣ ನೀಡಲಿ. ಅದು ಬಿಟ್ಟು ರಾಜಕೀಯ, ಸಂಘಟನೆ, ವ್ಯವಹಾರ ಮಾಡುತ್ತ ತಿರುಗಾಡುವ ದೂರುಗಳು ಬಂದಿವೆ. ಶಿಕ್ಷಣಾಧಿಕಾರಿಗಳ ನಿಯಂತ್ರಣದಲ್ಲೂ ಇಲ್ಲದಂತೆ ವರ್ತಿಸುತ್ತಿರುವುದು ಗಮನ ಸೆಳೆದಿದೆ. ಶಿಕ್ಷಕರು ಇಲ್ಲವೇ ಸರಕಾರಿ ನೌಕರರಿಗೆ ಪ್ರತಿಭಟನೆ ಮಾಡುವ ಹಕ್ಕು ಇದೆ ಎಂದ ಮಾತ್ರಕ್ಕೆ ಅದನ್ನೇ ಮುಖ್ಯ ಕಾಯಕ ಮಾಡಿಕೊಂಡರೆ ಹೇಗೆ ಎಂದು ಪ್ರಶ್ನಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+