Get Updates
Get notified of breaking news, exclusive insights, and must-see stories!

Government Employee: ಸೇವಾ ನಿರತ ಸರ್ಕಾರಿ ಉದ್ಯೋಗಿಗಳಿಗೆ ಸಿಹಿಸುದ್ದಿ

ಬೆಂಗಳೂರು, ಜುಲೈ 09: ಕರ್ನಾಟಕ ಸರ್ಕಾರ ಸೇವಾ ನಿರತ ಉದ್ಯೋಗಿಗಳಿಗೆ ಸಿಹಿಸುದ್ದಿ ನೀಡಿದೆ. ಸರ್ಕಾರಿ ನೌಕರರು ಸೇವೆ ಸಲ್ಲಿಸುತ್ತಲೇ ಬೇರೆ ಹುದ್ದೆಗೆ ನೇಮಕಾತಿ ಹೊಂದಲು ಮತ್ತು ಸದರಿ ಹುದ್ದೆಗೆ ಅರ್ಜಿ ಸಲ್ಲಿಸಲು ನಿರಾಕ್ಷೇಪಣಾ ಪತ್ರ ಪಡೆಯುವ ನಿಯಮವನ್ನು ತಿದ್ದುಪಡಿ ಮಾಡಲಾಗಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎ. ವಿ. ಶೈಲಜ, ಸರ್ಕಾರದ ಅಧೀನ ಕಾರ್ಯದರ್ಶಿ-2, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು) ಅಧಿಸೂಚನೆ ಹೊರಡಿಸಿದ್ದಾರೆ.

ಅಧಿಸೂಚನೆ ವಿವರಗಳು: ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977 ಮತ್ತಷ್ಟು ತಿದ್ದುಪಡಿ ಮಾಡಲು ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990ರ ಅಧಿನಿಯಮ ಸಂಖ್ಯೆ: 14)ರ 3ನೇ ಪ್ರಕರಣದ 2(ಎ) ಉಪ ಪ್ರಕರಣವನ್ನು ಪ್ರಕರಣ 8ರೊಂದಿಗೆ ಓದಿಕೊಂಡು ಅದರಲ್ಲಿ ಅಗತ್ಯಪಡಿಸಲಾದಂತೆ, ಕರಡು ನಿಯಮಗಳನ್ನು ದಿನಾಂಕ 07/08/2020ರ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ ಪ್ರಕಟಿಸಲಾಗಿತ್ತು, ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿತ್ತು.

NOC For Government Employees For Apply For Other Post Rule Change

ಈಗ, ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990ರ ಅಧಿನಿಯಮ ಸಂಖ್ಯೆ: 14)ರ 3ನೇ ಪ್ರಕರಣದ 1ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಗಿನ ನಿಯಮಗಳನ್ನು ರಚಿಸಿದೆ. ಈ ನಿಯಮಗಳನ್ನು ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳು, 2020 ಎಂದು ಕರೆಯತಕ್ಕದ್ದು. ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಅಂತಿಮವಾಗಿ ಪ್ರಕಟವಾದ ದಿನಾಂಕದಿಂದ ಜಾರಿಗೆ ಬರತಕ್ಕದ್ದು ಎಂದು ಸ್ಪಷ್ಟಪಡಿಸಲಾಗಿದೆ.

ಒಬ್ಬ ಸರ್ಕಾರಿ ನೌಕರನು ಅಥವಾ ಬೇರೆ ಯಾವುದೇ ರಾಜ್ಯ ಸರ್ಕಾರದಲ್ಲಿ ಅಥವಾ ಕೇಂದ್ರ ಸರ್ಕಾರದಲ್ಲಿ ಅಥವಾ ಸಾರ್ವಜನಿಕ ವಲಯದ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿರುವ ವ್ಯಕ್ತಿಯು, ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಯೊಂದಕ್ಕೆ ಆತನ ಆಯ್ಕೆ ಅಧಿಸೂಚನೆಗೊಂಡ ಕೂಡಲೇ ಆದರೆ ಅವನಿಗೆ ನೇಮಕಾತಿ ಆದೇಶ ಹೊರಡಿಸುವ ಮುನ್ನ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ಪಡೆದು ಅವನನ್ನು ಅಂತಹ ಹುದ್ದೆಗೆ ನೇಮಕಾತಿ ಮಾಡಲು ಸಕ್ಷಮವಾದ ಪ್ರಾಧಿಕಾರಕ್ಕೆ ಅದನ್ನು ಹಾಜರುಪಡಿಸದ ಅಥವಾ ಅದನ್ನು ನಿಯಮ 11ರ ಅನುಸಾರ ಪಡೆದಿದ್ದಾನೆ ಎಂದು ಪರಿಗಣಿತಗೊಳ್ಳದ ಹೊರತು ಆತನು ನೇಮಕಾತಿ ಹೊಂದಲು ಅರ್ಹನಾಗಿರತಕ್ಕದ್ದಲ್ಲ.

ಯಾವುದೇ ಸೇವೆ ಅಥವಾ ಹುದ್ದೆಗೆ ಆಯ್ಕೆಯಾಗಲು ಅರ್ಜಿ ಸಲ್ಲಿಸುವ ಒಬ್ಬ ಸರ್ಕಾರಿ ನೌಕರನು ತನ್ನ ಅರ್ಜಿಯನ್ನು ನೇರವಾಗಿ ಆಯ್ಕೆ ಪ್ರಾಧಿಕಾರಕ್ಕೆ ಸಲ್ಲಿಸತಕ್ಕದ್ದು, ಆತನ ಆಯ್ಕೆಯನ್ನು ಅಧಿಸೂಚಿತಗೊಳಿಸಿದ ಕೂಡಲೇ, ಆತನು ಆಯ್ಕೆಯಾದ ವಾಸ್ತವಾಂಶವನ್ನು ತಾನು ಕರ್ತವ್ಯ ನಿರ್ವಹಿಸುತ್ತಿರುವ ಇಲಾಖೆಯ ಇಲಾಖಾ ಮುಖ್ಯಸ್ಥರಿಗೆ ತಿಳಿಸತಕ್ಕದ್ದು ಹಾಗೂ ಆತನು ಆಯ್ಕೆಯಾದ ಹುದ್ದೆಯ ನೇಮಕಾತಿಯನ್ನು ಒಪ್ಪಿಕೊಳ್ಳಲು ಅನುವಾಗುವಂತೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡುವಂತೆ ಕೋರತಕ್ಕದ್ದು.

ಸರ್ಕಾರಿ ನೌಕರನು ಶಿಸ್ತುಕ್ರಮಕ್ಕೆ ಒಳಗೊಂಡಿದ್ದಲ್ಲಿ ಅಥವಾ ಆತ ಇಲಾಖಾ ವಿಚಾರಣೆ ಅಥವಾ ಕ್ರಿಮಿನಲ್‌ ನಡವಳಿಗಳನ್ನು ಎದುರಿಸುತ್ತಿದ್ದಲ್ಲಿ ಮತ್ತು ಸಾರ್ವಜನಿಕ ಹಿತಾಸಕ್ತಿಯ ಕಾರಣ ಅಥವಾ ಸರ್ಕಾರಿ ನೌಕರ ಮತ್ತು ಸರ್ಕಾರದ ನಡುವೆ ಮಾಡಿಕೊಳ್ಳಲಾದ ಯಾವುದೇ ನಿರ್ದಿಷ್ಟ ಒಪ್ಪಂದಕ್ಕೆ ಅಸಂಗತವಾದಂತಹ ಸಂದರ್ಭದಲ್ಲಿ ಲಿಖಿತ ರೂಪದಲ್ಲಿ ಕಾರಣಗಳನ್ನು ದಾಖಲಿಸಿ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಬಾರದೆಂದು ಇಲಾಖಾ ಮುಖ್ಯಸ್ಥರು ಪರಿಗಣಿಸಿದ ಹೊರತು, ಸಾಮಾನ್ಯವಾಗಿ ಇಲಾಖಾ ಮುಖ್ಯಸ್ಥರು ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡತಕ್ಕದ್ದು.

ಸಾಧ್ಯವಾದಷ್ಟು ಬೇಗನೆ ಆದರೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಕೋರಿ ಇಲಾಖಾ ಮುಖ್ಯಸ್ಥರಿಗೆ ಸಲ್ಲಿಸಿದ ಅರ್ಜಿಯ ದಿನಾಂಕದ ಮೂವತ್ತು ದಿನಗಳ ಅವಧಿಯ ಒಳಗಾಗಿ ಇಲಾಖಾ ಮುಖ್ಯಸ್ಥರು ಈ ಬಗ್ಗೆ ನಿರ್ಣಯವನ್ನು ತೆಗೆದುಕೊಳ್ಳತಕ್ಕದ್ದು ಹಾಗೂ ಅದನ್ನು ಸಂಬಂಧಿತ ಸರ್ಕಾರಿ ನೌಕರ ಮತ್ತು ಆಯ್ಕೆ ಪ್ರಾಧಿಕಾರ ಮತ್ತು ಹುದ್ದೆಗೆ ನೇಮಕಾತಿ ಮಾಡುವ ಸಕ್ಷಮ ಪ್ರಾಧಿಕಾರಕ್ಕೆ ತಿಳಿಸತಕ್ಕದ್ದು ಹಾಗೂ ಆ ರೀತಿ ಮಾಡಲು ವಿಫಲವಾದಲ್ಲಿ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಲಾಗಿದೆ ಎಂದು ಪರಿಗಣಿತಗೊಳ್ಳತಕ್ಕದ್ದು.

ನಿರಾಕ್ಷೇಪಣಾ ಪ್ರಮಾಣಪತ್ರಕ್ಕಾಗಿ ತಾನಾಗಿಯೇ ಕೋರಿಕೆ ಸಲ್ಲಿಸುವ ಉಪಕ್ರಮದ ಜವಾಬ್ದಾರಿಯು ಸರ್ಕಾರಿ ನೌಕರನದ್ದಾಗಿದ್ದು, ಆಯ್ಕೆಗೊಂಡ ಹುದ್ದೆಗೆ ಅವನಿಗೆ ನೇಮಕಾತಿ ಆದೇಶ ಹೊರಡಿಸುವ ಮುನ್ನ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆದು, ಆಯ್ಕೆಗೊಂಡ ಹುದ್ದೆಗೆ ಅವನನ್ನು ನೇಮಕಾತಿ ಮಾಡಲು ಸಕ್ಷಮವಾದ ಪ್ರಾಧಿಕಾರಕ್ಕೆ ಅದನ್ನು ಸಲ್ಲಿಸುವುದಕ್ಕೆ ಅವನು ಹೊಣೆಗಾರನಾಗಿರುತ್ತಾನೆ. ಉಪ-ನಿಯಮ (2) ರ ಅಡಿ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಲಾಗಿದೆ ಎಂದು ಪರಿಗಣಿತಗೊಂಡಂತಹ ಪ್ರಕರಣದಲ್ಲಿ ಅದನ್ನು ಸಂಬಂಧಿತ ಪ್ರಾಧಿಕಾರಕ್ಕೆ ತಿಳಿಸಲು ಇಲಾಖಾ ಮುಖ್ಯಸ್ಥರು ಹೊಣೆಗಾರರಾಗಿರತಕ್ಕದ್ದು.

ಬೇರೆ ಯಾವುದೇ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ ಅಥವಾ ಸಾರ್ವಜನಿಕ ವಲಯದ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿರುವ ವ್ಯಕ್ತಿಗಳು ಸಲ್ಲಿಸುವ ಅರ್ಜಿಗಳಿಗೆ ಸಂಬಂಧಿಸಿದಂತೆ ಉಪನಿಯಮ (1) ರಿಂದ (3)ರವರೆಗೆ ನಿರ್ದಿಷ್ಟಪಡಿಸಲಾದ ಕಾರ್ಯವಿಧಾನವು ಉಚಿತ ವ್ಯತ್ಯಾಸಗಳೊಂದಿಗೆ ಅನ್ವಯವಾಗತಕ್ಕದ್ದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+