ವಿವಿಧ ಸಮಿತಿಗಳ ಪುನರ್ ರಚನೆ : ಎಚ್‌ಡಿಕೆಗೆ ದಿನೇಶ್ ಗುಂಡೂರಾವ್ ಪತ್ರ

ಬೆಂಗಳೂರು, ಅಕ್ಟೋಬರ್ 18 : ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈಗ ಇರುವ ಹಲವು ಸಮಿತಿಗಳನ್ನು ಹೊಸ ಸರ್ಕಾರ ಪುನರ್ ರಚನೆ ಮಾಡಲಿದೆ. ಪುನರ್ ರಚನೆ ವೇಳೆ ಕಾಂಗ್ರೆಸ್ ಸದಸ್ಯರಿಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರು ಈ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ. ಎರಡೂ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಬೆಂಬಲವನ್ನು ನೀಡುವುದರ ಜೊತೆಗೆ ಪ್ರೋತ್ಸಾಹಿಸುವುದು ಅಗತ್ಯವಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಈಗ ಇರುವ ಅಕ್ರಮ-ಸಕ್ರಮ ಸಮಿತಿ, ಭೂ ನ್ಯಾಯಮಂಡಳಿ ಸಮಿತಿ ಸೇರಿದಂತೆ ಇತರ ಸಮಿತಿಗಳನ್ನು ಪುನರ್ ರಚನೆ ಮಾಡಬೇಕಿದೆ. ಸಮಿತಿ ಪುನರ್ ರಚನೆ ಮಾಡುವಾಗ ಎರಡೂ ಪಕ್ಷಗಳ ಸದಸ್ಯರಿಗೆ ಸಮಾನ ಅವಕಾಶಗಳು ಸಿಗಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗಳು ಈ ವಿಷಯವನ್ನು ಗಮನದಲ್ಲಿಟ್ಟುಕೊಳ್ಳಬೇಕು ತಮ್ಮ ಮಂತ್ರಿ ಮಂಡಲದ ಎಲ್ಲಾ ಸದಸ್ಯರಿಗೆ ಈ ಕುರಿತು ಸೂಚನೆಗಳನ್ನು ನೀಡಬೇಕು ಎಂದು ದಿನೇಶ್ ಗುಂಡೂರಾವ್ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಯಾವ ಅನುಪಾತದಲ್ಲಿ ನೇಮಕ

ಯಾವ ಅನುಪಾತದಲ್ಲಿ ನೇಮಕ

ಕಾಂಗ್ರೆಸ್ ಶಾಸಕರು ಇರುವಂತಹ ಕ್ಷೇತ್ರ/ತಾಲೂಕಿನಲ್ಲಿ ಸಮಿತಿಗಳನ್ನು ರಚನೆ ಮಾಡುವಾಗ 2:1ರ ಅನುಪಾತದಲ್ಲಿ ಕಾಂಗ್ರೆಸ್-ಜೆಡಿಎಸ್ ಸದಸ್ಯರನ್ನು ನೇಮಿಸಬೇಕು ಎಂದು ದಿನೇಶ್ ಗುಂಡೂರಾವ್ ಪತ್ರದಲ್ಲಿ ತಿಳಿಸಿದ್ದಾರೆ. ಎರಡೂ ಪಕ್ಷದ ಮುಖಂಡರಿಗೆ ಸಹಾಯಕವಾಗಬೇಕು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಜೆಡಿಎಸ್ ಶಾಸಕರು ಇರುವ ಕ್ಷೇತ್ರ

ಜೆಡಿಎಸ್ ಶಾಸಕರು ಇರುವ ಕ್ಷೇತ್ರ

ಜೆಡಿಎಸ್ ಶಾಸಕರು ಇರುವ ಕ್ಷೇತ್ರದಲ್ಲಿ 2:1 ಅನುಪಾತದಲ್ಲಿ ಜೆಡಿಎಸ್-ಕಾಂಗ್ರೆಸ್ ಸದಸ್ಯರು ಇರುವಂತೆ ಸಮಿತಿಯನ್ನು ರಚಿಸಬೇಕು. ಒಂದು ವೇಳೆ ಬಿಜೆಪಿ ಶಾಸಕರಿದ್ದು, ಕಾಂಗ್ರೆಸ್ 2ನೇ ಸ್ಥಾನದಲ್ಲಿದ್ದರೆ 2:1ರ ಅನುಪಾತದಲ್ಲಿ ನೇಮಕ ಮಾಡಬೇಕು ಎಂದು ಪತ್ರದಲ್ಲಿ ವಿವರಣೆ ನೀಡಿದ್ದಾರೆ.

ಜೆಡಿಎಸ್ 2ನೇ ಸ್ಥಾನದಲ್ಲಿದ್ದರೆ

ಜೆಡಿಎಸ್ 2ನೇ ಸ್ಥಾನದಲ್ಲಿದ್ದರೆ

ಬಿಜೆಪಿ ಶಾಸಕರಿರುವ ಕ್ಷೇತ್ರದಲ್ಲಿ ಜೆಡಿಎಸ್ 2ನೇ ಸ್ಥಾನದಲ್ಲಿದ್ದರೆ 2:1 ಅನುಪಾತದಲ್ಲಿ ಜೆಡಿಎಸ್ ಕಾಂಗ್ರೆಸ್ ಶಾಸಕರು ಇರುವಂತೆ ಸಮಿತಿ ರಚನೆ ಮಾಡಬೇಕು. ಎರಡೂ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಬೆಂಬಲ ನೀಡುವ ಜೊತೆಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ದಿನೇಶ್ ಗುಂಡೂರಾವ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇಲಾಖೆಯ ಸಮಿತಿಗಳು

ಇಲಾಖೆಯ ಸಮಿತಿಗಳು

ದಿನೇಶ್ ಗುಂಡೂರಾವ್ ಅವರು ಪತ್ರದಲ್ಲಿ ಈ ವಿಷಯದಲ್ಲಿ ಮುಖ್ಯಮಂತ್ರಿಗಳು ಮುತುವರ್ಜಿ ವಹಿಸಬೇಕು. ಎಲ್ಲಾ ಸಚಿವರಿಗೆ ಸೂಕ್ತ ನಿರ್ದೇಶವನ್ನು ನೀಡಬೇಕು. ತಮ್ಮ ಇಲಾಖೆಗೆ ಸಂಬಂಧಪಟ್ಟಂತೆ, ಸಾಧ್ಯವಾದಷ್ಟು ಎಲ್ಲಾ ಕ್ಷೇತ್ರಗಳಲ್ಲಿ/ತಾಲೂಕುಗಳಲ್ಲಿ/ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಸದಸ್ಯರು ಇರುವಂತೆ ಜಾಗೃತೆ ವಹಿಸಿ ಎಂದು ಪತ್ರದಲ್ಲಿ ವಿವರಣೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+