ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅಂತ್ಯ

ಬೆಂಗಳೂರು, ಮಾರ್ಚ್ 26 : ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಮುಕ್ತಾಯಗೊಂಡಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 18ರಂದು ಮತದಾನ ನಡೆಯಲಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ನಾಮಪತ್ರಗಳನ್ನು ಸಲ್ಲಿಸಲು ಮಾ.26ರ ಮಂಗಳವಾರ ಕೊನೆಯ ದಿನವಾಗಿತ್ತು. 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 340 ಅಭ್ಯರ್ಥಿಗಳಿಂದ 452 ನಾಮಪತ್ರಗಳು ಸಲ್ಲಿಕೆಯಾಗಿವೆ. ಬುಧವಾರದಿಂದ ನಾಮಪತ್ರಗಳ ಪರಿಶೀಲನೆ ಆರಂಭವಾಗಲಿದೆ.

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಅತಿ ಹೆಚ್ಚು ಎಂದರೆ 37 ಅಭ್ಯರ್ಥಿಗಳು 46 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ 36 ಅಭ್ಯರ್ಥಿಗಳು 41 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

Nomination for 1st phase poll ends in Karnataka

ಮೈಸೂರು-ಕೊಡಗು ಕ್ಷೇತ್ರದಲ್ಲಿ 34 ಅಭ್ಯರ್ಥಿಗಳು 49 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಹೆಸರಿನ ನಾಲ್ವರು ಪಕ್ಷೇತರ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿರುವುದು ವಿಶೇಷವಾಗಿದೆ.ಮಾ.27ರ ಬುಧವಾರಿಂದ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ.

ಅಭ್ಯರ್ಥಿಗಳು ನಾಮಪತ್ರವನ್ನು ವಾಪಸ್ ಪಡೆಯಲು ಮಾರ್ಚ್ 29 ಕೊನೆಯ ದಿನವಾಗಿದೆ. ಏಪ್ರಿಲ್ 18ರಂದು ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ, ಹಾಸನ, ಬೆಂಗಳೂರು ದಕ್ಷಿಣ, ತುಮಕೂರು, ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳು ವಿವಿಧ ಕಾರಣಗಳಿಗಾಗಿ ಕುತೂಹಲ ಹುಟ್ಟಿಸಿವೆ.

14 ಲೋಕಸಭಾ ಕ್ಷೇತ್ರಗಳ ಪೈಕಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತುಮಕೂರು ಕ್ಷೇತ್ರದಿಂದ ಕಣದಲ್ಲಿದ್ದಾರೆ. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಬೆಂಗಳೂರು ಉತ್ತರದಿಂದ, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಕೃಷ್ಣ ಬೈರೇಗೌಡ ಅವರು ಬೆಂಗಳೂರು ಉತ್ತರದಿಂದ ಕಣದಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+