ಕರ್ನಾಟಕದಲ್ಲಿ ನಾಳೆಯಿಂದ ಲೋಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು, ಮಾರ್ಚ್ 18: ರಾಜ್ಯದಲ್ಲಿ ನಡೆಯಲಿರುವ ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ ಮತದಾನ ಜರುಗಲಿರುವ ಕ್ಷೇತ್ರಗಳ ಚುನಾವಣೆಗೆ ಅಧಿಸೂಚನೆ ಮಂಗಳವಾರ(ಮಾರ್ಚ್ 19)ರಂದು ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಟಿಕೆಟ್‌ಗಾಗಿ ಬಿಜೆಪಿಯಲ್ಲಿ ನಡೆಯುತ್ತಿರುವ ಪೈಪೋಟಿ ಒಂದೆಡೆ, ಆಡಳಿತಾರೂಢ ಮೈತ್ರಿ ಪಕ್ಷಗಳ ನಡುವೆ ಸೀಟು ಹಂಚಿಕೆ ಗೊಂದಲ, ಅಸಮಾಧಾನ ಮಧ್ಯೆ ಲೋಕಸಭಾ ಚುನಾವಣೆಗೆ ಸಿದ್ಧತೆ ಗರಿಗೆದರಿದೆ.

ಮೊದಲ ಹಂತದಲ್ಲಿ ನಡೆಯಲಿರುವ 14 ಕ್ಷೇತ್ರಗಳ ಚುನಾವಣೆಗೆ ಮಾರ್ಚ್ 19ರಂದು ಅಧಿಸೂಚನೆ ಹೊರಡಿಸಲಿದ್ದು, ಏ.18ರಂದು ಚುನಾವಣೆ ನಡೆಯಲಿದೆ. ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಮಾರ್ಚ್ 28ರಂದು ಅಧಿಸೂಚನೆ ಹೊರಡಿಸಲಿದ್ದು ಏ.23ರಂದು ಮತದಾನ ನಡೆಯಲಿದೆ.

Nomination process will start from tomorrow in Karnataka

ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಕಾಂಗ್ರೆಸ್, ತುಮಕೂರು ಲೋಕಸಭಾ ಕ್ಷೇತ್ರ ಹೊರತುಪಡಿಸಿ ಉಳಿದ ಕಡೆ ಹಾಲಿ ಕಾಂಗ್ರೆಸ್ ಸದಸ್ಯರಿಗೆ ಟಿಕೆಟ್ ನೀಡಿದ್ದು, ಒಂದೆರೆಡು ದಿನಗಳಲ್ಲಿ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ.

ಜೆಡಿಎಸ್ ತನಗೆ ದೊರೆತಿರುವ ಎಂಟು ಕ್ಷೇತ್ರಗಳ ಪೈಕಿ ತೀವ್ರ ಕುತೂಹಲ ಕೆರಳಿಸಿರುವ ಹಾಸನ, ಮಂಡ್ಯ, ಶಿವಮೊಗ್ಗ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಚಿಸಿದೆ.

ಮೊದಲ ಹಂತ: ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ.
ಅಧಿಸೂಚನೆ ಪ್ರಕಟ-19-3-2019
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ-26-3-2019
ನಾಮಪತ್ರ ಪರಿಶೀಲನೆ-27-3-2019
ನಾಮಪತ್ರ ಹಿಂಪಡೆವ ದಿನ- 29-3-2019
ಮತದಾನ- 18-4-2019
ಮತಗಳ ಎಣಿಕೆ-23-5-2019
ಚುನಾವಣಾ ಪ್ರಕ್ರಿಯೆ ಮುಗಿಯುವ ದಿನ-27-5-2019

ಎರಡನೇ ಹಂತ: ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರೌಆಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ

ಅಧಿಸೂಚನೆ ಪ್ರಕಟ-28-3-2019
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ- 4-4-2019
ನಾಮಪತ್ರ ಪರಿಶೀಲನೆ-5-4-2019
ನಾಮಪತ್ರ ಹಿಂಪಡೆವ ದಿನ-8-4-2019
ಮತದಾನ-23-4-2019
ಮತಗಳ ಎಣಿಕೆ-23-5-2019

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+