ಮುರುಘಾ ಶರಣರಿಗೆ ಮತ್ತೊಂದು ಸಂಕಷ್ಟ: ಹೈಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್

ಬೆಂಗಳೂರು,ಸೆ.2. ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಸದ್ಯ ಮೂರು ದಿನ ನ್ಯಾಯಾಂಗ ವಶಕ್ಕೆ ಒಳಪಟ್ಟಿರುವ ಚಿತ್ರದುರ್ಗದ ಮುರುಘಾ ಮಠದ ಪೀಠಾಧೀಶ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಮಠಕ್ಕೆ ಸೇರಿದ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿದ್ದ ಪ್ರಕರಣದಲ್ಲಿ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಲು ಕೋರ್ಟ್ ಆದೇಶ ನೀಡಿದೆ. ಹಾಗಾಗಿ ಮೊದಲೇ ಕಷ್ಟಕ್ಕೆ ಸಿಲುಕಿರುವ ಸ್ವಾಮೀಜಿಗೆ ಇದೀಗ ಮತ್ತೊಂದು ತಲೆನೋವು ಎದುರಾಗಿದ್ದು, ಎರಡನ್ನೂ ಹೇಗೆ ನಿಭಾಯಿಸುತ್ತಾರೋ ಕಾದು ನೋಡಬೇಕಿದೆ.

ನಗರದ ಕೆಂಗೇರಿ ಹೋಬಳಿಯ ಸೂಲಿಕೆರೆ ಗ್ರಾಮದಲ್ಲಿ ಚಿತ್ರದುರ್ಗದ ಮುರುಘಾರಾಜೇಂದ್ರ ಮಠಕ್ಕೆ ಸೇರಿದ 7 ಎಕರೆ ಜಮೀನನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆ ದರಕ್ಕೆ ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣ ಸಂಬಂಧ ಮಠದ ಪೀಠಾಧೀಶ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ವಾರೆಂಟ್ ಮರು ಜಾರಿಗೆ ನಗರದ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

one more trouble to Murugha Shree: Court ordered re issuance of NBW

ಮಠದ ಭಕ್ತ ತುಮಕೂರಿನ ಪಿ.ಎಸ್.ಪ್ರಕಾಶ್, ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆ ನಡೆಸಿದ ನಡೆಸಿದ ನಾಲ್ಕನೇ ಎಸಿಎಂಎಂ ನ್ಯಾಯಾಲಯ, ಶಿವಮೂರ್ತಿ ಶರಣರು ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ವಿರುದ್ಧ ಜಾಮೀನು ರಹಿತ ವಾರೆಂಟ್ ಮರು ಜಾರಿಗೆ ಆದೇಶಿಸಿ ವಿಚಾರಣೆಯನ್ನು ನ.10ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ:

ಬೆಂಗಳೂರು ದಕ್ಷಿಣ ಕೆಂಗೇರಿ ಹೋಬಳಿಯ ಸೂಲಿಕೆರೆ ಗ್ರಾಮದಲ್ಲಿ ಸರ್ವೇ ನಂ 34ರಲ್ಲಿನ 7 ಎಕರೆ 18 ಗುಂಟೆ ಚಿತ್ರದುರ್ಗದ ಮುರುಘರಾಜೇಂದ್ರ ಮಠಕ್ಕೆ ಸೇರಿತ್ತು. ಈ ಏಳು ಎಕರೆಯ ಮಾರುಕಟ್ಟೆ ಮೌಲ್ಯ ಏಳು ಕೋಟಿ ರೂ.ಗಿಂತ ಹೆಚ್ಚಿದೆ. ಆದರೆ, ಇದೇ ಜಮೀನನ್ನು ಕೇವಲ 46 ಲಕ್ಷ ರೂ.ಗೆ ಆನಂದ್ ಕುಮಾರ್ ಎಂಬುವರಿಗೆ ಶಿವಮೂರ್ತಿ ಮುರುಘಾ ಶರಣರು ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

one more trouble to Murugha Shree: Court ordered re issuance of NBW

ಆದ್ದರಿಂದ ಶಿವಮೂರ್ತಿ ಶರಣರು ಮತ್ತು ಆನಂದ್ ಕುಮಾರ್ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಕೋರಿದ್ದರು. ಪ್ರಕರಣವನ್ನು ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಶರಣರಿಗೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ 2022ರ ಸೆ.2ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ, ಶರಣರು ಶುಕ್ರವಾರ ವಿಚಾರಣೆಗೆ ಗೈರಾಗಿದ್ದರು. ಹಾಗಾಗಿ ನ್ಯಾಯಾಲಯ ಎನ್‌ಬಿಡಬ್ಲ್ಯೂ ಜಾರಿಗೆ ಆದೇಶ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+