ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ? ಪ್ರಭಾವಿ ಸ್ವಾಮೀಜಿ ನುಡಿದ ಭವಿಷ್ಯವೇನು?

ಬೆಂಗಳೂರು, ಡಿಸೆಂಬರ್‌ 09: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದು ಸರ್ಕಾರ ರಚಿಸಿರುವ ಕಾಂಗ್ರೆಸ್‌ ನಲ್ಲಿ ಪದೇ ಪದೇ ಮುಖ್ಯಮಂತ್ರಿ ವಿಚಾರ ಚರ್ಚೆಯಾಗುತ್ತಿದ್ದು, ಇದೀಗ ಪ್ರಭಾವಿ ಸ್ವಾಮೀಜಿಯೊಬ್ಬರು ಡಿ ಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗುವ ಕುರಿತು ಭವಿಷ್ಯ ನುಡಿದಿದ್ದಾರೆ.

ಹೌದು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ನೊಣವಿನಕೆರೆ ಕಾಡಾಸಿದ್ಧೇಶ್ವರ ಮಠಾಧ್ಯಕ್ಷರಾಗಿರುವ ಡಾ. ಕರಿವೃಷಭ ದೇಶೀಕೇಂದ್ರ ಶಿವ ಯೋಗೇಶ್ವರ ಸ್ವಾಮೀಜಿ ಅವರು ಭವಿಷ್ಯ ನುಡಿದಿದ್ದಾರೆ.

Nonavinakere Swamiji Predicts That Dk Shivakumar Will Become Cm

ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ನಡೆದ ಪಟ್ಟಲದಮ್ಮ ದೇವಿಯ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸ್ವಮೀಜಿಗಳು, ಶ್ರೀಮಠದ ಪರಮ ಭಕ್ತ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ. ಅವರು ಮುಖ್ಯಮಂತ್ರಿ ಆಗಲಿ ಎಂಬುದು ನಮ್ಮ ಆಶೀರ್ವಾದ ಕೂಡ ಇದೆ.

ನಾವು ಭಗವಂತನಲ್ಲಿ ಸಂಕಲ್ಪ ಕೂಡ ಮಾಡಿದ್ದೇವೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದ ಸ್ವಾಮೀಜಿ. ಸರ್ಕಾರ ಮೀಸಲಾತಿ ಪ್ರಕಟಿಸುವುದು ಉತ್ತಮ. ಅದು ಎಲ್ಲರಿಗೂ ಅನುಕೂಲವಾಗಲಿದೆ ಎಂದು ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ.

ಡಿ ಕೆ ಶಿವಕುಮಾರ್‌ ಹೆಚ್ಚಾಗಿ ದೈವ ಭಕ್ತರು. ಮಠದ ಪರಮಭಕ್ತರಾಗಿರುವ ಡಿ ಕೆ ಶಿವಕುಮಾರ್‌, ತುಮಕೂರು ಜಿಲ್ಲೆಯ ತಿಪಟೂರಿನ ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಪರಮ ಭಕ್ತರಾಗಿರುವ ಡಿಕೆ ಶಿವಕುಮಾರ್ ಅವರು ಆಗಾಗ ಮಠಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡುತ್ತಿರುತ್ತಾರೆ.

ಚುನಾವಣಾ ಕಾರ್ಯತಂತ್ರ, ಕುಟುಂಬದ ಕಾರ್ಯಕ್ರಮ ಸೇರಿದಂತೆ ಯಾವುದೇ ಕಾರ್ಯಕ್ರಮಗಳಿದ್ದರೂ ಸಹ ಡಿ ಕೆ ಶಿವಕುಮಾರ್‌ ಅವರು ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಬಂದು ಶ್ರೀಗಳ ಆಶೀರ್ವಾದ ಪಡೆದೇ ಮುಂದುವರೆಯುತ್ತಾರೆ.

ಇನ್ನೂ ಈ ಹಿಂದೆ ವಿಧಾನಸಭಾ ಚುನಾವಣೆ ವೇಳೆ ನೊಣವಿನಕೆರೆ ಅಜ್ಜಯ್ಯನಿಗೆ ನಮಿಸಿದ ಬಳಿಕವೇ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿಫಾರಂ ಹಂಚಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗಳಿಸಿದ ಬಳಿಕ ದಿಲ್ಲಿಗೆ ಹೈಕಮಾಂಡ್ ಗೆ ತೆರಳುವ ಮುನ್ನ ಅವರು ಇಲ್ಲಿಗೆ ಆಗಮಿಸಿ ಶ್ರೀಗಳ ಆಶೀರ್ವಾದ ಪಡೆದಿದ್ದರು.

ಒಟ್ನಲಿ ರಾಜ್ಯ ಕಾಂಗ್ರೆಸ್‌ ಕಾಂಗ್ರೆಸ್‌ ನಲ್ಲಿ ಪದೇ ಪದೇ ಸಿಎಂ, ಡಿಸಿಎಂ, ದಲಿತ ಸಿಎಂ ವಿಚಾರಗಳು ಚರ್ಚೆಯಾಗುತ್ತಿದ್ದು, ಹೈಕಮಾಂಡ್‌ ಖಡಕ್‌ ವಾರ್ನಿಂಗ್‌ ಬಳಿಕ ಎಲ್ಲಾವು ತಣ್ಣಗಾಯಿತು ಎಂದು ಅಂದುಕೊಳ್ಳುತ್ತಿರುವ ಹೊತ್ತಲ್ಲೇ ಡಿ ಕೆ ಶಿವಕುಮಾರ್‌ ಸಿಎಂ ಆಗ್ತಾರೆ ಎಂಬ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+