ನೃತ್ಯಾಸಕ್ತರಿಗೆ ಆನ್ ಲೈನ್ ಮೂಲಕ ಕ್ಲಾಸ್ !
ಬೆಂಗಳೂರು, ಡಿ.2: ಕರ್ನಾಟಕದಲ್ಲಿ ಭರತನ ನಾಟ್ಯಶಾಸ್ತ್ರದ ಶಾಸ್ತ್ರಾಭ್ಯಾಸದ ಕುರಿತ ತರಬೇತಿಗಳು ಇಂದಿಗೆ ಕ್ರಮಬದ್ಧವಾಗಿ ಜರುಗುವುದು ತೀರಾ ವಿರಳಾತಿ ವಿರಳ. ಇದರಿಂದಾಗಿ ನೃತ್ಯಾಸಕ್ತರಿಗೆ, ಅಧ್ಯಯನದ ಅಪೇಕ್ಷೆ ಉಳ್ಳವರಿಗೆ ಸಾಕಷ್ಟು ಹಿನ್ನಡೆಯೂ ಆಗಿದೆ. ಹೀಗಾಗಿ ನೃತ್ಯಾಸಕ್ತರಿಗೆ ವಿನೂತನ ಕೋರ್ಸ್ ಗಳನ್ನು ನೂಪುರ ಭ್ರಮರಿ ತಂಡ ಆಯೋಜಿಸುತ್ತಿದೆ.
ನೃತ್ಯ ಸಂಶೋಧನೆ, ಅಧ್ಯಯನ, ದಾಖಲೀಕರಣಕ್ಕೆ ಸಂಬಂಧಿಸಿದಂತೆ ದುಡಿಯುತ್ತಿರುವ ನೂಪುರ ಭ್ರಮರಿ ಸಂಸ್ಥೆಯು ಶಾಸ್ತ್ರೀಯ-ಜಾನಪದವೆಂಬ ಬೇಧವಿಲ್ಲದೆ ವಿವಿಧ ಕಲಾವಿಭಾಗದ ಅಭ್ಯರ್ಥಿಗಳು ಕೋರ್ಸ್ ತೆಗೆದುಕೊಳ್ಳಬಹುದು.
ಅಂದರೆ ಸಬ್ ಜೂನಿಯರ್ ಹಂತದಿಂದ ಜೂನಿಯರ್, ಸೀನಿಯರ್, ವಿದ್ವತ್, ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಕಲಾವಿದರಿಗಾಗಿ ಭರತನ ನಾಟ್ಯಶಾಸ್ತ್ರದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ( ಥಿಯರಿ+ ಪ್ರಾಕ್ಟಿಕಲ್) ಸರ್ಟಿಫಿಕೇಟ್ ಕೋರ್ಸ್ ತರಗತಿಗಳನ್ನು ಆರಂಭಿಸಲಾಗಿದೆ. ಇದು ಹಲವು ಹಂತಗಳಲ್ಲಿ ವಿಭಾಗೀಕರಿಸಲ್ಪಟ್ಟಿದ್ದು ನಾಟ್ಯಶಾಸ್ತ್ರದ ಸಂಪೂರ್ಣ ಅಧ್ಯಯನ, ಕರಣ/ಚಾರಿಗಳ ಕಲಿಕೆಯನ್ನು ಒಳಗೊಳ್ಳಲಿದೆ.

ಇದರೊಂದಿಗೆ ಪ್ರದರ್ಶನ ಕಲೆಗಳ ಸಂಶೋಧನಾಸಕ್ತರಿಗಾಗಿ ಸಂಶೋಧನಾ ತರಗತಿಗಳನ್ನೂ, ಶಾಸ್ತ್ರಗ್ರಂಥಗಳ ಅಧ್ಯಯನ ತರಗತಿಗಳನ್ನೂ ನಡೆಸಲಾಗುತ್ತಿದೆ. ಈ ತರಗತಿಗಳೆಲ್ಲವೂ ಅಭ್ಯರ್ಥಿಗಳ ಆಯ್ಕೆಯ ಮೇರೆಗೆ ಒಂದೋ ಮುಖಾಮುಖಿ ಅಥವಾ ಆನ್‌ಲೈನ್‌ನಲ್ಲಿ ಹಮ್ಮಿಕೊಳ್ಳಬಹುದಾಗಿದೆ. ಇದು ಕರ್ನಾಟಕದ ನೃತ್ಯಕ್ಷೇತ್ರದಲ್ಲೇ ವಿನೂತನವಾದ ಬಹುಬೇಡಿಕೆಯ ತರಗತಿಕ್ರಮಗಳಾಗಿದ್ದು ಆಸಕ್ತರು ಸದ್ವಿನಿಯೋಗಪಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಲೇಖನಗಳಿಗಾಗಿ www.noopurabhramari.com ನ್ನು ಪರಿಶೀಲಿಸಬಹುದು. ಆಸಕ್ತರು ಸಂಪರ್ಕಿಸಿ: ಮನೋರಮಾ ಬಿ.ಎನ್ : 99641 40927
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications