ಡಿಸೆಂಬರ್ 8ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ

ಬೆಂಗಳೂರು, ಡಿಸೆಂಬರ್ 04: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 08ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಲಿದೆ.

ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್‌ನಲ್ಲಿ ಒಣಹವೆ ಮುಂದುವರೆಯಲಿದೆ.

ಶನಿವಾರ ಬೆಳಗ್ಗೆ ಜವಾದ್ ಚಂಡಮಾರುತ ಉತ್ತರ ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿರುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಒಡಿಶಾದ ಗಜಪತಿ, ಗಂಜಾಂ, ಪುರಿ ಮತ್ತು ಜಗತ್‌ಸಿಂಗ್‌ಪುರ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಗುರುವಾರ ಲಘುವಾಗಿ ಸಾಧಾರಣ ಮಳೆಗೆ ಸಾಕ್ಷಿಯಾಗಬಹುದು ಮತ್ತು ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಕರಾವಳಿ ಆಂಧ್ರಪ್ರದೇಶದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.

ಶುಕ್ರವಾರದಿಂದ ವಾರಾಂತ್ಯದವರೆಗೆ ಆಂಧ್ರಪ್ರದೇಶ, ಒಡಿಶಾದಿಂದ ಗಂಗಾನದಿ ಪಶ್ಚಿಮ ಬಂಗಾಳದವರೆಗೆ ಕರಾವಳಿಯಾದ್ಯಂತ ಒಟ್ಟು 150-200 ಮಿಮೀ ಮಳೆಯ ಪ್ರಮಾಣದೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಈಶಾನ್ಯ ಭಾರತದಲ್ಲಿ ಸರಾಸರಿ ತಪಾಮಾನ ಮತ್ತಷ್ಟು ಇಳಿಕೆಯಾಗಲಿದೆ.

ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿದ್ದ ಅಕಾಲಿಕ ಮಳೆ(ಸದ್ಯಕ್ಕೆ ಕೊಂಚ ಬಿಡುವು ಕೊಟ್ಟಿದೆ. ಮುಂಗಾರು ಮುಗಿದರೂ ಸಹ ಎಡೆಬಿಡದೆ ಸುರಿದ ಅಕಾಲಿಕ ಮಳೆಯಿಂದಾಗಿ ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿಗರ ಜೀವನವಂತೂ ತೀರಾ ಶೋಚನೀಯವಾಗಿತ್ತು. ಸದ್ಯ ಮಳೆ ಸ್ವಲ್ಪ ಬ್ರೇಕ್ ಕೊಟ್ಟಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿವೆ.

ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಹೊಸದುರ್ಗ, ರಾಮದುರ್ಗ, ಲೋಂಡಾ, ಕುಂದಗೋಳ, ಕಡೂರು, ಹಾವೇರಿ, ಸಿದ್ದಾಪುರ, ಮಂಚಿಕೆರೆ, ಕ್ಯಾಸಲ್ ರಾಕ್, ಹುಕ್ಕೇರಿ, ಸಂಕೇಶ್ವರ, ಧಾರವಾಡ, ಬಿಳಿಗಿ, ಕೆಂಭಾವಿ, ಬಂಡೀಪುರ, ಬೆಳ್ಳೂರು, ತಿಪಟೂರಿನಲ್ಲಿ ಮಳೆಯಾಗಲಿದೆ.

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿರಲಿದೆ. ಎಚ್‌ಎಎಲ್‌ನಲ್ಲಿ 25.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಅತಿ ಕನಿಷ್ಠ ಉಷ್ಣಾಂಶ

ಅತಿ ಕನಿಷ್ಠ ಉಷ್ಣಾಂಶ

ಬೆಳಗಾವಿ 17.8 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recommended Video

    ಲಕ್ಷ್ಮಣನ ಪತ್ನಿ ಊರ್ಮಿಳಾ 14 ವರ್ಷಗಳ ಕಾಲ ನಿರಂತರ ನಿದ್ರೆ ಮಾಡಿದ್ದು ಯಾಕೆ? | Oneindia Kannada
    ರಾಜ್ಯದ ವಾತಾವರಣ ಹೇಗಿರಲಿದೆ?

    ರಾಜ್ಯದ ವಾತಾವರಣ ಹೇಗಿರಲಿದೆ?

    ಮುಂದಿನ 24 ಗಂಟೆ ರಾಜ್ಯಾದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ.
    ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಲಿದೆ.
    ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್‌ನಲ್ಲಿ ಒಣಹವೆ ಮುಂದುವರೆಯಲಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+