ಉತ್ತರ ಕರ್ನಾಟಕ ಬಂದ್ : ಹೋರಾಟ ಸಮಿತಿ ಸಭೆ ಕರೆದ ಸಿಎಂ
ಬೆಂಗಳೂರು, ಜುಲೈ 30 : ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವಾಗಿ ಮಾಡಬೇಕು ಎಂಬ ಬೇಡಿಕೆಯೊಂದಿಗೆ ಉತ್ತರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಂದ್ ಕರೆ ನೀಡಿದ ಸಂಘಟನೆಗಳ ಸಭೆ ಕರೆದಿದ್ದಾರೆ.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಕೊತಂಬರಿ ಅವರು ಆಗಸ್ಟ್ 2ರಂದು ಉತ್ತರ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜುಲೈ 31ರಂದು ಸಮಿತಿ ಸಭೆ ಕರೆದಿದ್ದಾರೆ.
ಉತ್ತರ ಕರ್ನಾಟಕ ಬಂದ್ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಹಲವು ಸಂಘಟನೆಗಳು ಬಂದ್ ಪರ-ವಿರೋಧ ಮಾತುಗಳನ್ನು ಆಡುತ್ತಿವೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಬೆಂಬಲವಿಲ್ಲ ಎಂದು ಕರ್ನಾಟಕ ಬಿಜೆಪಿ ಸ್ಪಷ್ಟಪಡಿಸಿದೆ.

ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಮಹದಾಯಿ ನದಿ ನೀರಿನ ಸಮಸ್ಯೆ ಬಗೆಹರಿಸಿಲ್ಲ, ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ರಾಜ್ಯ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿ ಉತ್ತರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.
ಬೆಂಬಲವಿಲ್ಲ : 'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ನಮ್ಮ ಬೆಂಬಲವಿಲ್ಲ. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.
'ಶ್ರೀರಾಮುಲು ಅವರಿಗೆ ಉತ್ತರ ಕರ್ನಾಟಕದ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಈ ಭಾಗದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ' ಎಂದರು.












Click it and Unblock the Notifications