Karnataka Railways: ಎಕ್ಸ್‌ಪ್ರೆಸ್ ರೈಲಿನ ನಿಲುಗಡೆಗೆ ಗ್ರೀನ್ ಸಿಗ್ನಲ್: 2 ರಸ್ತೆ ಕೆಳ ಸೇತುವೆಗಳಿಗೆ ಶಂಕುಸ್ಥಾಪನೆ
ಉತ್ತರ ಕರ್ನಾಟಕದಲ್ಲಿ ರೈಲ್ವೆ ವ್ಯಾಪ್ತಿಯಲ್ಲಿ ಸಾಕಷ್ಟು ಸುಧಾರಣೆಗಳು ಆಗುತ್ತಿವೆ. ಇದೀಗ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ವಿಂಡೋ ಟ್ರೇಲಿಂಗ್ ತಪಾಸಣೆ ನಡೆಸಿದರು. ಅವರು ಹಲವಾರು ಪ್ರಮುಖ ಕಾರ್ಯಾಚರಣೆ ಮತ್ತು ಸುರಕ್ಷತಾ ಅಂಶಗಳನ್ನು ಸೋಮವಾರ ಪರಿಶೀಲಿಸಿದರು. ಜೊತೆಗೆ SSS ಹುಬ್ಬಳ್ಳಿ - ದಾದರ್ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿನ (17317) ಹೆಚ್ಚುವರಿ ನಿಲುಗಡೆಗೆ ಅವರು ಹಸಿರು ನಿಶಾನೆ. ಇದರಿಂದಾಗುವ ಪ್ರಯೋಜನಗಳು ಏನು? ಹೊಸ ಕೇಳಸೇತುವೆ ನಿರ್ಮಾಣ ಆಗುತ್ತಿರುವುದೆಲ್ಲಿ? ಇಲ್ಲಿದೆ ವಿವರ.
ಇಂದು ಸೋಮವಾರ ಸಚಿವ ವಿ.ಸೋಮಣ್ಣ ಅವರು ಧಾರವಾಡ - ಬೆಳಗಾವಿ ವಿಭಾಗದ ನಡುವೆ ಅವರು ವಿಂಡೋ ಟ್ರೇಲಿಂಗ್ ತಪಾಸಣೆ ನಡೆಸಿದರು. ಅವರು ಹಲವಾರು ಪ್ರಮುಖ ಕಾರ್ಯಾಚರಣೆ ಮತ್ತು ಸುರಕ್ಷತಾ ಅಂಶಗಳನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಇದೇ ವೇಳೆ ಸಾರ್ವಜನಿಕರೊಂದಿಗೆ ಸಂವಹನ ನಡೆಸಿದ ಅವರು ಅವರ ಕುಂದು ಕೊರತೆಗಳನ್ನು ಆಲಿಸಿದರು. ಅವರ ಮನವಿ, ಬೇಡಿಕೆಗಳನ್ನು ಪರಿಶೀಲಿಸಲಾಗುವುದು. ಅವುಗಳ ಕುರಿತು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೊಂದಿಗೆ ಸೇರಿ ಅಮೃತ ಭಾರತ ನಿಲ್ದಾಣ ಯೋಜನೆ (ABSS) ಅಡಿಯಲ್ಲಿ ಪ್ರಸ್ತುತ ಪುನರಾಭಿವೃದ್ಧಿ ಮಾಡಲಾಗುತ್ತಿರುವ ಅಳ್ನಾವರ ರೈಲು ನಿಲ್ದಾಣದ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು. ಪ್ರಯಾಣಿಕರ ಅನುಕೂಲತೆಯನ್ನು ಹೆಚ್ಚಿಸಲು ಮತ್ತು ಒಟ್ಟಾರೆ ನಿಲ್ದಾಣದ ಮೂಲ ಸೌಕರ್ಯವನ್ನು ಸುಧಾರಿಸಲು ಅಧಿಕಾರಿಗಳೊಂದಿಗೆ ಹಲವಾರು ಪ್ರಮುಖ ನಿರ್ದೇಶನಗಳನ್ನು ನೀಡಿದರು.
ಎಕ್ಸ್‌ಪ್ರೆಸ್ ರೈಲಿನ ಹೆಚ್ಚುವರಿ ನಿಲುಗಡೆಗೆ ಗ್ರೀನ್ ಸಿಗ್ನಲ್
ಉತ್ತರ ಕರ್ನಾಟಕದಲ್ಲಿ ಮೂಲ ಸೌಕರ್ಯಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಅದರ ಭಾಗವಾಗಿ ಬೆಳಗಾವಿಯಲ್ಲಿ LC 380 ಮತ್ತು ಖಾನಾಪುರದಲ್ಲಿ LC 360 ರ ಬದಲಿಗೆ 2 ರಸ್ತೆ ಕೆಳ ಸೇತುವೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಇದರೊಂದಿಗೆ ಖಾನಾಪುರ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯ SSS ಹುಬ್ಬಳ್ಳಿ - ದಾದರ್ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿಗೆ (17317) ಹಸಿರು ನಿಶಾನೆ ನೀಡಲಾಯಿತು.
ನಿಲುಗಡೆಯಿಂದ ಈ ಭಾಗಕ್ಕೆ ಸಿಗುವ ಪ್ರಯೋಜನಗಳೇನು?
SSS ಹುಬ್ಬಳ್ಳಿ - ದಾದರ್ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿನ ನಿಲುಗಡೆಯಿಂದ ಬೆಳಗಾವಿ ಮತ್ತು ಖಾನಾಪುರ ರೈಲು ಮತ್ತು ರಸ್ತೆ ಸಾರಿಗೆ ಅಚರಣೆ ಇಲ್ಲದೇ ಸಂಚಾರ ನೀಡಿದಂತಾಗುತ್ತದೆ. ಈ ಭಾಗದ ಜನರಿಗೆ ಶಿಕ್ಷಣ, ಆರೋಗ್ಯ ಸೇವೆ ಹಾಗೂ ಇತರ ಸೌಲಭ್ಯಗಳಿಗೆ ಉತ್ತಮ ಸಂಪರ್ಕ ಒದಗಿಸುತ್ತದೆ. ಸ್ಥಳೀಯ ರೈಲು ಸೇವೆ, ಸಂಪರ್ಕವನ್ನು ಉತ್ತೇಜಿಸುತ್ತದೆ. ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಬಲಪಡಿಸುತ್ತದೆ.
-
New Railway Line: 6000 ಕಿಮೀ ರೈಲ್ವೆ ಜಾಲ ವಿಸ್ತರಣೆ, 100 ಯೋಜನೆಗಳ ಜಾರಿಗೆ ₹1.53 ಲಕ್ಷ ಕೋಟಿ ಹೂಡಿಕೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications