ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು: ಸಿದ್ದರಾಮಯ್ಯ ಖಡಕ್ ಉತ್ತರ

|
Google Oneindia Kannada News

ಬೆಂಗಳೂರು, ಜುಲೈ 30: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡಿದ್ದಾರೆ.

ಉತ್ತರ-ದಕ್ಷಿಣ ಎಂಬ ಭೇದ ನಮಗಿಲ್ಲ. ನಮ್ಮದು ಒಂದೇ ಕರ್ನಾಟಕ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಯಾವುದೇ ಕಾರಣಕ್ಕೂ ಈ ಕೂಗಿಗೆ ನಮ್ಮ ಬೆಂಬಲವಿಲ್ಲ ಎಂದು ಅವರು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ಪ್ರತ್ಯೇಕ ರಾಜ್ಯದ ಬೇಡಿಕೆ ತಳ್ಳಿ ಹಾಕಿದ ಒನ್ ಇಂಡಿಯಾ ಓದುಗರು ಪ್ರತ್ಯೇಕ ರಾಜ್ಯದ ಬೇಡಿಕೆ ತಳ್ಳಿ ಹಾಕಿದ ಒನ್ ಇಂಡಿಯಾ ಓದುಗರು

ಉತ್ತರ-ದಕ್ಷಿಣದ ನಡುವಿನ ಅಂತರವನ್ನು ಸರಿದೂಗಿಸುವ ಸಲುವಾಗಿಯೇ ನಾನು ಬಾಗಲಕೋಟೆ ಜಿಲ್ಲೆಯ ಬಾದಾಮಿಯಿಂದ ಸ್ಪರ್ಧಿಸಿದೆ ಎಂದು ಸಹ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಉತ್ತರ ಕರ್ನಾಟಕ ಭಾಗದ ಜನರನ್ನು ನಿರಂತರವಾಗಿ ನಿರ್ಲಕ್ಷ್ಯಿಸಲಾಗುತ್ತಿದೆ, ಮಲತಾಯಿ ಧೋರಣೆ ತೋರಲಾಗುತ್ತಿದೆ ಎಂದು ಆರೋಪಿಸಿ ಆಗಸ್ಟ್ 2 ರಂದು ಗುರುವಾರ ಉತ್ತರ ಕರ್ನಾಟಕ ಬಂದ್ ಗೆ ಕರೆನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಸಾಲು ಸಾಲು ಟ್ವೀಟ್ ಇಲ್ಲಿದೆ.

ಉತ್ತರ ದಕ್ಷಿಣ ಎಂಬ ಭೇದವಿಲ್ಲ

ಉತ್ತರ ದಕ್ಷಿಣ ಎಂಬ ಭೇದವಿಲ್ಲ

"ಉತ್ತರ-ದಕ್ಷಿಣ ಭೇದ ನಮಗಿಲ್ಲ.ನಮ್ಮದು ಒಂದೇ ಕರ್ನಾಟಕ.‌ ಅದು ಅಖಂಡ‌ ಕರ್ನಾಟಕ. ಚಾರಿತ್ರಿಕ ಕಾರಣಗಳಿಗಾಗಿ ರಾಜ್ಯದ ಕೆಲವು ಭಾಗಗಳು ಹಿಂದುಳಿದಿರುವುದು ನಿಜ. ಅವುಗಳ ಅಭಿವೃದ್ದಿ ಗೆ ಒತ್ತು ನೀಡುವ ಪ್ರಾದೇಶಿಕ‌ ನ್ಯಾಯದ ಪರವಾಗಿ ನಮ್ಮ ಪಕ್ಷ ಇದೆ"- ಸಿದ್ದರಾಮಯ್ಯ

ಏನಿದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು? ಆ.2ರ ಬಂದ್ ಯಾಕಾಗಿ?ಏನಿದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು? ಆ.2ರ ಬಂದ್ ಯಾಕಾಗಿ?

ಅಖಂಡ ಕರ್ನಾಟಕದ ರಕ್ಷಣೆಗೆ ಬದ್ಧ

ಅಖಂಡ ಕರ್ನಾಟಕದ ರಕ್ಷಣೆಗೆ ಬದ್ಧ

"ಜಾತಿ-ಧರ್ಮಗಳನ್ನು ರಾಜಕೀಯ ಲಾಭಕ್ಕಾಗಿ ಬಳಸುವುದು‌ ಜನದ್ರೋಹದ ಕೆಲಸ. ಅಖಂಡ ಕರ್ನಾಟಕದ ರಕ್ಷಣೆ-ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧ, ನಾನು‌ ಸದಾ ಸಿದ್ಧ"- ಸಿದ್ದರಾಮಯ್ಯ

ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದೇಕೆ?

ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದೇಕೆ?

"ಉತ್ತರ-ದಕ್ಷಿಣದ ನಡುವಿನ ಅಂತರವನ್ನು‌ ಹೋಗಲಾಡಿಸಿ ಸೌಹಾರ್ದತೆಯ ಪರಂಪರೆಯನ್ನು ಗಟ್ಟಿಗೊಳಿಸಲಿಕ್ಕಾಗಿಯೇ ನಾನು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಆ ಕ್ಷೇತ್ರದ ಜನರ ಆಶೀರ್ವಾದ ನನ್ನ ಬದ್ಧತೆಯನ್ನು ಇನ್ನಷ್ಟು ಗಟ್ಟಿಗೊಳಿಸಿದೆ"- ಸಿದ್ದರಾಮಯ್ಯ

ಬಿಜೆಪಿಯ ಆತ್ಮವಂಚಕ ನಡವಳಿಕೆ

ಬಿಜೆಪಿಯ ಆತ್ಮವಂಚಕ ನಡವಳಿಕೆ

"ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲು ಸಂವಿಧಾನಕ್ಕೆ ತಿದ್ದುಪಡಿ (371-ಜೆ) ಮಾಡಬೇಕೆಂಬ ಬೇಡಿಕೆ ಈಡೇರಿಸಿದ್ದು ಕಾಂಗ್ರೆಸ್ ಪಕ್ಷ. ಆ ಬೇಡಿಕೆಯನ್ನು ತಿರಸ್ಕರಿಸಿದ್ದ ಬಿಜೆಪಿಯ ನಾಯಕರು ಈಗ ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟಿರುವುದು ಆತ್ಮದ್ರೋಹ ಮಾತ್ರವಲ್ಲ, ಆತ್ಮವಂಚಕ ನಡವಳಿಕೆ"- ಸಿದ್ದರಾಮಯ್ಯ

ನಂಜುಂಡಪ್ಪ ವರದಿಗೆ ಕಾಂಗ್ರೆಸ್ ಬದ್ಧ

ನಂಜುಂಡಪ್ಪ ವರದಿಗೆ ಕಾಂಗ್ರೆಸ್ ಬದ್ಧ

"ಡಿ.ಎಂ.ನಂಜುಂಡಪ್ಪ‌ ಸಮಿತಿಯ‌ ಶಿಪಾರಸ್ಸಿನಂತೆ ರೂಪಿಸಲಾಗಿದ್ದ ವಿಶೇಷ ಅಭಿವೃದ್ಧಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಮಾಡಲು ಅದರ ಅವಧಿಯನ್ನು ಐದು ವರ್ಷಗಳ ಕಾಲ ವಿಸ್ತರಿಸಿದ್ದು ನಮ್ಮ ಸರ್ಕಾರ. ಪ್ರತಿ ವರ್ಷ ಇದಕ್ಕಾಗಿ 1500 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ನಮ್ಮ ಸರ್ಕಾರ ನೀಡಿತ್ತು"- ಸಿದ್ದರಾಮಯ್ಯ

English summary
Former chief minister opposes idea of separate north Karnataka state. We never discriminate North and south, Siddaramaiah said, and posted series of tweets.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X