ಇದು ಲೈಂಗಿಕ ಹಗರಣವಲ್ಲ, ಸಾಮೂಹಿಕ ಅತ್ಯಾಚಾರ: ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ರಾಹುಲ್ ಗಾಂಧಿ ಹೇಳಿದ್ದೇನು?

ಬೆಂಗಳೂರು, ಮೇ 02: ಕರ್ನಾಟಕದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣವು ಕೇವಲ ಲೈಂಗಿಕ ಹಗರಣವಲ್ಲ, ಅದೊಂದು ಸಾಮೂಹಿಕ ಅತ್ಯಾಚಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರದ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ಮಾತನಾಡಿ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಮೋದಿ ಸಾಮೂಹಿಕ ಅತ್ಯಾಚಾರಿಯ ಪರವಾಗಿ ಮತ ಕೇಳುತ್ತಿದ್ದಾರೆ.

Not a sex scandal but mass rape Rahul Gandhi on charges against Prajwal Revanna

ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡ ನೇತೃತ್ವದ ಜನತಾ ದಳದ (ಜಾತ್ಯತೀತ) ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. "ಸಾಮೂಹಿಕ ಅತ್ಯಾಚಾರಿ"ಯ ಪರವಾಗಿ ಮತ ಕೇಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ. ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ್ದಾರೆ. ಅವರ ಅಶ್ಲೀಲ ವೀಡಿಯೊಗಳನ್ನು ಮಾಡಿದ್ದಾರೆ. ನಮ್ಮ ದೇಶದ ಪ್ರಧಾನಿ ಮೋದಿ ಸಾರ್ವಜನಿಕ ವೇದಿಕೆಯಲ್ಲೇ ಆ ಅತ್ಯಾಚಾರಿಗೆ ಬೆಂಬಲ ನೀಡಿ, ಅವರ ಪರವಾಗಿ ಮತಯಾಚನೆ ಮಾಡುತ್ತಿದ್ದಾರೆ

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಭಾರತದಿಂದ ಪಾರಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದರು. ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದಾಗಲೂ ಪ್ರಧಾನಿ ಮೋದಿ ಅವರು ಜರ್ಮನಿಗೆ ಹೋಗುವುದನ್ನು ಯಾಕೆ ತಡೆಯಲಿಲ್ಲ ಎಂದು ಗಾಂಧಿ ಹೇಳಿದರು. "ಪ್ರಧಾನಿ ಮೋದಿ ಅಧಿಕಾರವಿದೆ. ಆದರೂ ಅವರು ಸಾಮೂಹಿಕ ಅತ್ಯಾಚಾರಿಗಳಿಗೆ ಜರ್ಮನಿಗೆ ಹೋಗಲು ಅವಕಾಶ ನೀಡಿದರು, ಇದು 'ಮೋದಿ ಗ್ಯಾರಂಟಿ' ಭ್ರಷ್ಟ ನಾಯಕನಾಗಲಿ ಅಥವಾ ಸಾಮೂಹಿಕ ಅತ್ಯಾಚಾರಿಯಾಗಲಿ ಬಿಜೆಪಿಯು ಅವನನ್ನು ರಕ್ಷಿಸುತ್ತದೆ ಎಂದು ವಾಗ್ದಾಳಿ ನಡೆಸಿದೆ.

ಹಾಸನದ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಸೆಕ್ಸ್ ಟೇಪ್‌ಗಳಿವೆ ಎಂಬ ಆರೋಪ ಕೇಳಿಬಂದಿದೆ. ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ)-ಜೆಡಿ (ಎಸ್) ಅಭ್ಯರ್ಥಿಯಾಗಿರುವ ಲೋಕಸಭಾ ಕ್ಷೇತ್ರವಾದ ಹಾಸನದಲ್ಲಿ ಅವರ ಲೈಂಗಿಕ ದೌರ್ಜನ್ಯದ ವೀಡಿಯೊಗಳನ್ನು ಒಳಗೊಂಡಿರುವ ಸಾವಿರಾರು ಪೆನ್ ಡ್ರೈವ್‌ಗಳನ್ನು ಪ್ರಸಾರ ಮಾಡಲಾಗಿದೆ. ಪ್ರಜ್ವಲ್ ತನ್ನ ಮನೆ ಮತ್ತು ಕಚೇರಿಯಲ್ಲಿ ರೆಕಾರ್ಡ್ ಮಾಡಿದ್ದಾರೆ ಎನ್ನಲಾಗಿದೆ.

ಆರೋಪಗಳ ತನಿಖೆಗಾಗಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಕರ್ನಾಟಕ ಪೊಲೀಸರು ಎಸ್‌ಐಟಿಯನ್ನು ರಚಿಸಿದ ದಿನವೇ ಪ್ರಜ್ವಲ್‌ ರೇವಣ್ಣ ಅವರು ವಿದೇಶಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ. ಇನ್ನೂ ಮಂಗಳವಾರ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. ಪ್ರಜ್ವಲ್ ರೇವಣ್ಣ ವಿರುದ್ಧ ಭಾರತದಾದ್ಯಂತ ಎಲ್ಲಾ ವಲಸೆ ಕೇಂದ್ರಗಳಲ್ಲಿ ಲುಕ್‌ಔಟ್ ಸುತ್ತೋಲೆ ಹೊರಡಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+