ಆಮ್ನೆಸ್ಟಿಗೆ ಕ್ಲೀನ್‌ ಚಿಟ್ ನೀಡಿಲ್ಲ ಅಂದ್ರು ಪರಮೇಶ್ವರ!

By: ವಿಕಾಸ್ ನಂಜಪ್ಪ
Subscribe to Oneindia Kannada

ಬೆಂಗಳೂರು, ಆಗಸ್ಟ್ 22 : ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆ ವಿಚಾರದಲ್ಲಿ ನೀಡಿದ ಹೇಳಿಕೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಅವರು ಯೂಟರ್ನ್ ತೆಗೆದುಕೊಂಡಿದ್ದಾರೆ. 'ಸಂಸ್ಥೆಗೆ ನಾನು ಕ್ಲೀನ್ ಚಿಟ್ ನೀಡಿಲ್ಲ' ಎಂದು ಅವರು ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಪರಮೇಶ್ವರ ಅವರು, 'ರಾಜದ್ರೋಹದ ಆರೋಪ ಎದುರಿಸುತ್ತಿರುವ ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆಗೆ ತಾವು ಕ್ಲೀನ್ ಚಿಟ್ ನೀಡಿಲ್ಲ' ಎಂದು ಸ್ಪಷ್ಟಪಡಿಸಿದರು.[ಆಮ್ನೆಸ್ಟಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಆಸ್ಕರ್ ಪುತ್ರಿ!]

g parameshwara

'ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಸಂಸ್ಥೆಯು ಎಂದಾದರೂ ದೇಶದ್ರೋಹದ ಕೆಲಸ ಮಾಡಿದೆ ಎಂದು ನನಗೆ ಅನಿಸುತ್ತಿಲ್ಲ' ಎಂದು ಶನಿವಾರ ಪರಮೇಶ್ವರ ಅವರು ಹೇಳಿದ್ದರು.[ಸೈನಿಕರೂ ತಪ್ಪು ಮಾಡಿರಬಹುದು: ಅಮ್ನೆಸ್ಟಿಗೆ ರಾಜ್ಯದಲ್ಲಿ ರೆಡ್ ಕಾರ್ಪೆಟ್]

ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಸಾಮಾಜಿಕ ಜಾಲ ತಾಣದಲ್ಲಿ ಪರಮೇಶ್ವರ ಅವರ ಹೇಳಿಕೆಯನ್ನು ಖಂಡಿಸಲಾಗಿತ್ತು. ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಸಂಸ್ಥೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡೀಸ್ ಅವರ ಪುತ್ರಿ ಕೆಲಸ ಮಾಡುತ್ತಿದ್ದಾಳೆ. ಆದ್ದರಿಂದ, ಗೃಹ ಸಚಿವು ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಟೀಕಿಸಲಾಗಿತ್ತು.[ಆಮ್ನೆಸ್ಟಿ ಸಂಸ್ಥೆ ಪರಿಚಯ]

ಪರಮೇಶ್ವರ ಹೇಳಿದ್ದೇನು? : ಶನಿವಾರ ಕೆಪಿಸಿಸಿ ಪುರಭವನದಲ್ಲಿ ಏರ್ಪಡಿಸಿದ್ದ ದೇವರಾಜ ಅರಸು ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪರಮೇಶ್ವರ ಅವರು, 'ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಸಂಸ್ಥೆಯು ಎಂದಾದರೂ ದೇಶದ್ರೋಹದ ಕೆಲಸ ಮಾಡಿದೆ ಎಂದು ನನಗೆ ಅನಿಸುತ್ತಿಲ್ಲ. ಎಬಿವಿಪಿ ಆಮ್ನೆಸ್ಟಿ ವಿರುದ್ಧ ವಿನಾಕಾರಣ ಬೀದಿಗಿಳಿದು ಗದ್ದಲ ಸೃಷ್ಟಿಸುತ್ತಿದ್ದಾರೆ' ಎಂದು ಪರಮೇಶ್ವರ ಹೇಳಿದ್ದರು.

ಏನಿದು ವಿವಾದ? : ಬೆಂಗಳೂರಿನ ಯುನೈಟೆಡ್‌ ಥಿಯಾಲಾಜಿಕಲ್‌ ಕಾಲೇಜಿನಲ್ಲಿ ಆಮ್ನೆಸ್ಟಿ ಇಂಟರ್‌ನ್ಯಾಷನಲ್‌ ಇಂಡಿಯಾ ಸಂಸ್ಥೆ ಆಗಸ್ಟ್ 13ರಂದು 'ಬ್ರೋಕನ್‌ ಫ್ಯಾಮಿಲೀಸ್‌' ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಇಲ್ಲಿ ದೇಶ ವಿರೋಧಿ ಘೋಷಣೆ ಕೂಗಲಾಗಿದೆ ಎಂಬುದು ಆರೋಪವಾಗಿದೆ. ಈ ಬಗ್ಗೆ ಜೆ.ಸಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
I have not given them a clean chit, let me make this clear says Karnataka Home Minister, G.Parameshwara on Amnesty International sedition charge.
Please Wait while comments are loading...