Get Updates
Get notified of breaking news, exclusive insights, and must-see stories!

ಪರಿಷತ್ ಚುನಾವಣೆ; ಮತದಾರರ ಪಟ್ಟಿ ಸೇರಲು ಪದವೀಧರ ನಿರಾಸಕ್ತಿ

ಬೆಂಗಳೂರು, ಅಕ್ಟೋಬರ್ 29: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ವಿಧಾನ ಪರಿಷತ್‌ ಚುನಾವಣೆಗಾಗಿ ಪದವೀಧರ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಪದವೀಧರರು ಹಿಂದೇಟು ಹಾಕುತ್ತಿದ್ದಾರೆ.

ಪದವೀಧರ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನವೆಂಬರ್ 6 ಕೊನೆಯ ದಿನವಾಗಿದೆ. ಆದರೆ ಇನ್ನೂ 75 ಲಕ್ಷಕ್ಕೂ ಅಧಿಕ ಪದವೀಧರರು ಹೆಸರು ನೋಂದಣಿ ಮಾಡಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಿ ಎಂದು ಪದವೀಧರ ಮತದಾರರ ಕ್ಷೇತ್ರದ ಚುನಾವಣಾಧಿಕಾರಿಗಳು ಕರೆ ನೀಡುತ್ತಿದ್ದಾರೆ.

graduate-voter

ಚುನಾವಣಾ ಆಯೋಗದ ನಿರ್ದೇಶನದಂತೆ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ದಪಡಿಸಲಾಗುತ್ತಿದೆ. ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ-18ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬೇಕು.

ಯಾರು ಹೆಸರು ಸೇರಿಸಬಹುದು?; ಹೊಸದಾಗಿ ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಪದವೀಧರರು 01/11/2020ಕ್ಕಿಂತಲೂ ಹಿಂದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು. ನಮೂನೆ-18 ರಲ್ಲಿ (ಭಾವ ಚಿತ್ರದೊಂದಿಗೆ) ಭರ್ತಿಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ತಾವು ಉತ್ತೀರ್ಣರಾಗಿರುವ ಅಂಕಪಟ್ಟಿ, ಆಧಾರ್‌ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ತಾವು ವಾಸಿಸುತ್ತಿರುವ ವಾಸ್ಥಳದ ದಾಖಲೆಗಳನ್ನು ಸ್ವಯಂಧೃಡೀಕರಿಸಿ ಅರ್ಜಿಯೊಂದಿಗೆ ದಿನಾಂಕ 6/11/2023ರ ಒಳಗಾಗಿ ಸಲ್ಲಿಸಬೇಕು.

ಪದವೀಧರರು ಅರ್ಜಿಗಳನ್ನು ಮತದಾರರ ನೋಂದಣಾಧಿಕಾರಿಗಳು/ ಸಹಾಯಕ ಮತದಾರರ ನೋಂದಣಾಧಿಕಾರಿಗಳು/ ಸಂಬಂಧಪಟ್ಟ ವಿಧಾನಸಭಾ ಮತಕೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಶೀಲ್ದಾರ್‌ ಕಾರ್ಯಾಲಯದಲ್ಲಿ) ಸಲ್ಲಿಸಬಹುದಾಗಿದೆ.

ಸೇವೆಯಲ್ಲಿರುವ ಸರ್ಕಾರಿ ನೌಕರರು ತಮ್ಮ ಇಲಾಖಾ ಮುಖ್ಯಸ್ಥರ ಮೂಲಕ ಇಲಾಖಾ ಮುಖ್ಯಸ್ಥರು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ನೌಕರರ ಸೇವಾ ದಾಖಲೆಗಳನ್ನು ಪರಿಶೀಲಿಸಿ, ಆಯೋಗವು ನಿಗದಿಪಡಿಸಿರುವ 3ನೇ ಅನುಸೂಚಿತ ನಮೂನೆಯಲ್ಲಿ ದೃಢೀಕರಣ ಪತ್ರವನ್ನು ನೀಡಿ ಗೊತ್ತುಪಡಿಸಿದ ಅಧಿಕಾರಿಗೆ ಅರ್ಜಿ ಸಲ್ಲಿಸಬಹುದು.

ಚುನಾವಣಾ ಆಯೋಗ ಪದವೀಧರರ ಮತದಾರರ ಪಟ್ಟಿಗೆ ಹೆಸರನ್ನು ನೋಂದಾಯಿಸಲು ವಿಳಾಸ ಗುರುತಿನ ಚೀಟಿ ಸಂಬಂಧಿಸಿದಂತೆ ಆಧಾರ್‌ ಕಾರ್ಡ್‌ ಕಡ್ಡಾಯವಲ್ಲ. ಬದಲಾಗಿ 6 ತಿಂಗಳು ಕಾಲ ವಾಸವಾಗಿರುವ ಕುರಿತು ದೃಢೀಕರಣ ಪ್ರಮಾಣ ಪತ್ರ, ರೇಷನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಬ್ಯಾಂಕ್ ಪಾಸ್‍ಬುಕ್, ಗ್ಯಾಸ್ ವಿತರಣೆ ಕಾರ್ಡ್ ಸೇರಿದಂತೆ ವಿಳಾಸವಿರುವ 11 ದಾಖಲೆಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿದಾರರ ಭಾವಚಿತ್ರದಲ್ಲಿ ಪರದೆಯ ಹಿಂದಿನ ಬಣ್ಣ ಬಿಳಿಯದ್ದಾಗಿರುವ ಫೋಟೋ ಸಲ್ಲಿಸಬೇಕು ಎಂದು ಹೇಳಿದೆ.

ಆದರೆ ಸರ್ಕಾರಿ ಅಧಿಕಾರಿಗಳ ನೋಂದಣಿಗೂ ಸಹ ಪದವಿ ಪ್ರಮಾಣ ಪತ್ರವನ್ನು ಪರಿಗಣಿಸಲಾಗುತ್ತಿದೆ. ಸಾಲು ಸಾಲು ರಜೆ, ಸರಿಯಾಗಿ ಪ್ರಚಾರ ನಡೆಸದ ಕಾರಣ ನೋಂದಣಿ ಕಡಿಮೆಯಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ದಿನಾಂಕವನ್ನು ವಿಸ್ತರಣೆ ಮಾಡಬೇಕು ಎಂದು ಕೆಲವು ಆಕಾಂಕ್ಷಿಗಳು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು ಪದವೀಧರ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪದವೀಧರರ ಮತದಾರರ ಪಟ್ಟಿಗೆ ಹೆಸರನ್ನು ನೋಂದಾಯಿಸಲು ಪದವೀಧರರು ಆಸಕ್ತಿಯನ್ನು ತೋರಿಸುತ್ತಿಲ್ಲ. ನವೆಂಬರ್ 23ರಂದು ಕರಡು ಮತದಾರರ ಪಟ್ಟಿ ಬಿಡುಗಡೆಯಾಗಲಿದೆ. ಆಕ್ಷೇಪಣೆ ಸಲ್ಲಿಕೆ ಮಾಡಲು ಡಿಸೆಂಬರ್ 9 ಕೊನೆಯ ದಿನವಾಗಿದೆ. ಡಿಸೆಂಬರ್ 30ರಂದು ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ. ಬಳಿಕವೂ ನೋಂದಣಿಗೆ ಅವಕಾಶ ಇರುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

2024ರ ಜೂನ್ ತಿಂಗಳಿನಲ್ಲಿ ಕರ್ನಾಟಕ ವಿಧಾನ ಪರಿಷತ್‌ನ ವಿವಿಧ ಸದಸ್ಯರ ಸ್ಥಾನಗಳ ಅವಧಿ ಮುಕ್ತಾಯವಾಗಲಿದೆ. ಆಗ ಪದವೀಧರ, ಶಿಕ್ಷಕರ ಕ್ಷೇತ್ರದ ಮತದಾನ ನಡೆಯಲಿದೆ. ಅದಕ್ಕಾಗಿ ಚುನಾವಣಾ ಆಯೋಗ ಈಗ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+