ಐಪಿಎಸ್ ಅಧಿಕಾರಿಗಳ ಪತ್ರ: ಸಿಎಂ ಹೇಳಿದ್ದು ಹೀಗೆ

Posted By:
Subscribe to Oneindia Kannada

ಹುನಗುಂದ, ಮಾರ್ಚ್ 12: ಐಪಿಎಸ್ ಅಧಿಕಾರಿಗಳ ಸಂಘ ಸರ್ಕಾರಕ್ಕೆ ಬರೆದಿರುವ ಪತ್ರ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಮಾತನಾಡಿದ್ದು, 'ಮುಖ್ಯ ಕಾರ್ಯದರ್ಶಿಗೆ ಅಧಿಕಾರಿಯೊಬ್ಬರು ಪತ್ರ ಬರೆದರೆ ಅದನ್ನು ಐಪಿಎಸ್ ಅಧಿಕಾರಿಗಳ ಬಂಡಾಯವೆಂದು ಪರಿಗಣಿಸಬೇಕೇ' ಎಂದು ಪ್ರಶ್ನೆ ಮಾಡಿದ್ದಾರೆ.

ಹುನಗುಂದ ತಾಲ್ಲೂಕಿನ ಕೂಡಲಸಂಗಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅಧಿಕಾರಿ ಮುಖ್ಯ ಕಾರ್ಯದರ್ಶಿ ಅವರಿಗೆ ಬರೆದ ಪತ್ರದಲ್ಲಿ ಏನಿದೆ ಎಂಬುದು ಗೊತ್ತಿಲ್ಲ ಆದರೆ ಅಧಿಕಾರಿಗಳ ದೈನಂದಿನ ಕರ್ತವ್ಯ ನಿರ್ವಹಣೆ ವೇಳೆ ಸಂಪುಟ ಸಹೋದ್ಯೋಗಿಗಳಾಗಲಿ, ಪಕ್ಷದ ಶಾಸಕರಾಗಲಿ ಹಸ್ತಕ್ಷೇಪ ಮಾಡಿಲ್ಲ ಎಂದರು.

ಸರ್ಕಾರದ ವಿರುದ್ಧ ಐಪಿಎಸ್ ಅಧಿಕಾರಿಗಳು ಗರಂ, ರತ್ನಪ್ರಭಾಗೆ ಪತ್ರ

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವಾಗಿಯೂ ಮಾತನಾಡಿದ ಸಿಎಂ, 'ಮಾರ್ಚ್ 14ರಂದು ಸಂಪುಟ ಸಭೆಯಲ್ಲಿ ಆ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Not one MLA or minister interfered in officers duty: CM

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಇದೇ ವೇಳೆ ರಾಜ್ಯದಲ್ಲಿ ಲಿಂಗಾಯತರನ್ನು ಧಾರ್ಮಿಕ ಅಲ್ಪಸಂಖ್ಯಾತರೆಂದು ಮಾನ್ಯತೆ ನೀಡಿ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗದಗದ ತೋಂಟದಾರ್ಯ ಮಠದ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಮಠಾಧೀಶರು ಮನವಿ ಅರ್ಪಿಸಿದರು.

ರವಿ ಚನ್ನಣ್ಣನವರ್ ಸೇರಿ 20 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Cm Siddaramaiah says 'Not one MLA or minister of congress party interfered in Officers duty'. He also said one officers letter to chief secretory cant considered as IPS officers rebellion.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ