• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಿಸಿಯೂಟ ವಂಚಿತ ವಿದ್ಯಾರ್ಥಿಗಳಿಗೆ ಪರಿಹಾರ ಹೇಗೆ: ಹೈಕೋರ್ಟ್ ಪ್ರಶ್ನೆ

|

ಬೆಂಗಳೂರು,ನವೆಂಬರ್ 11: ಬಿಸಿಯೂಟ ವಂಚಿತ ವಿದ್ಯಾರ್ಥಿಗಳಿಗೆ ಪರಿಹಾರ ಕಲ್ಪಿಸುತ್ತೀರಿ ವಿವರಿಸಿ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ಪ್ರಶ್ನಿಸಿದೆ.

ಕೊರೊನಾ ಸೋಂಕು ತಡೆಯಲು ಲಾಕ್ಡೌನ್ ಘೋಷಿಸಿದ ಪರಿಣಾಮ ಸಾರ್ವಜನಿಕರಿಗೆ ಉಂಟಾದ ಅನಾನುಕೂಲತೆಗಳನ್ನು ಬಗೆಹರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕರ್ನಾಟಕ: ವಿದ್ಯಾರ್ಥಿಗಳಿಗೆ ಬಿಸಿಯೂಟದ ಬದಲು 2 ಕಂತುಗಳಲ್ಲಿ ಆಹಾರ ಧಾನ್ಯ ವಿತರಣೆ

ರಾಜ್ಯದಲ್ಲಿ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಳಿಸಿದ ಸರ್ಕಾರದ ನಡೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಈ ವೇಳೆ ಸರ್ಕಾರದ ನಡೆದೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ ವಿದ್ಯಾರ್ಥಿಗಳಿಗೆ ಆಹಾರ ಒದಗಿಸದಿದ್ದರೆ ಸಂವಿಧಾನ ನೀಡಿದ ಜೀವಿಸುವ ಹಕ್ಕು ಉಲ್ಲಂಘನೆಯಾಗಲಿದೆ ಎಂದು ಖಾರವಾಗಿ ನುಡಿಯಿತು.

ಜನೌಷಧಿ ಕೇಂದ್ರಗಳಲ್ಲಿ ರೂ.25ಕ್ಕೆ ಎನ್-95 ಮಾಸ್ಕ್‌ಗಳು ಲಭ್ಯವಿದೆ ಎಂದು ವಿಚಾರಣೆ ವೇಳೆ ಕೇಂದ್ರ ಸರ್ಕಾರ ಮಾಹಿತಿ ನೀಡಿತು. ಜನ ಸಾಮಾನ್ಯರೆಲ್ಲರಿಗೂ ಮಾಸ್ಕ್ ದೊರೆಯುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಆಹಾರ ವಂಚಿತ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯ, ಮಧ್ಯಾಹ್ನದ ಊಟ ಒದಗಿಸುವ ಬಗ್ಗೆ ಕ್ರಮ ಕೈಗೊಂಡು ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಪ್ರಮಾಣಪತ್ರ ಸಲ್ಲಿಸಬೇಕು.

   ಕುಷನ್ ಸೋಫಾ ಹಾಗೆ ಮಾತಾಡಸತ್ತೆ!! | DK Ravi Mother | Oneindia Kannada

   ಯಾವ ಕಾರಣಕ್ಕೆ ಮಧ್ಯಾಹ್ನದ ಬಿಸಿಯೂಟ ಪೂರೈಕೆ ಸ್ಥಗಿತಗೊಳಿಸಲಾಯಿತು? ಆಹಾರ ವಂಚಿತ ವಿದ್ಯಾರ್ಥಿಗಳಿಗೆ ಹೇಗೆ ಪರಿಹಾರ ಕಲ್ಪಿಸಲಾಗುತ್ತದೆ ಎಂಬ ಬಗ್ಗೆ ಮಾಹಿತಿ ಸಲ್ಲಿಸಬೇಕೆಂದು ಸೂಚಿಸಿ ವಿಚಾರಣೆಯನ್ನು ನ.17ಕ್ಕೆ ಮುಂದೂಡಿತು.

   English summary
   The High Court Of Karnataka said non implementation of the Midday meal scheme amounts to violation of fundamental rights of children and may also lead Malnutrition.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X