ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೋರ್‌ವೆಲ್ ನೋಂದಣಿ ಮಾಡಿಸಿ, ಇಲ್ಲವೇ ದಂಡ ಕಟ್ಟಲು ರೆಡಿಯಾಗಿ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 14: ಆದಷ್ಟು ಬೇಗ ಬೋರ್‌ವೆಲ್ ನೋಂದಣಿ ಮಾಡಿ ಇಲ್ಲವಾದಲ್ಲಿ ದಂಡ ಕಟ್ಟಲು ಸಿದ್ಧರಾಗಿ ಎಂದು ಕರ್ನಾಟಕ ಅಂತರ್ಜಲ ಪ್ರಾಧಿಕಾರ ಹೇಳಿದೆ.

ಅಪಾರ್ಟ್ ಮೆಂಟುಗಳು, ಹೌಸಿಂಗ್ ಸೊಸೈಟಿಗಳು, ಸರ್ಕಾರಿ ನೀರು ಪೂರೈಕೆ ಏಜೆನ್ಸಿಗಳು, ಗಣಿಗಾರಿಕಾ ಸಂಸ್ಥೆಗಳು, ಸ್ವಿಮ್ಮಿಂಗ್ ಪೂಲ್ ಗಳು ಎಲ್ಲವೂ ತಮ್ಮ ಹಳೆಯ ಹಾಗೂ ಹೊಸ ಬೋರ್ ವೆಲ್ ಸಂಪರ್ಕವನ್ನು ನೋಂದಣಿ ಮಾಡಿಸಿಕೊಳ್ಳಬೇಕಾಗಿದೆ.

ಅದಕ್ಕಾಗಿ ಮಾರ್ಚ್ 31, 2022ರ ತನಕ ಗಡುವು ನಿಗದಿ ಪಡಿಸಿದೆ. ಗಡುವು ಮೀರಿದಲ್ಲಿ 1 ಲಕ್ಷ ರೂ. ದಂಡ ಕಟ್ಟಬೇಕಾಗಿ ಬರುವುದು. ಅದರ ಜೊತೆಗೆ ಹೆಚ್ಚುವರಿ ಪರಿಸರ ಶುಲ್ಕವನ್ನೂ ಕಟ್ಟಿಸಿಕೊಳ್ಳಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ.

Not Registered Old Borewells? Up A Fine Of Rs 1 Lakh

ಇನ್ನು ಮುಂದೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಿವೇಶನಗಳಲ್ಲಿ ಬೋರ್‌ವೆಲ್‌ ಕೊರೆಸಲು ಅನುಮತಿ ನೀಡದಿರಲು 'ರಾಜ್ಯ ಅಂತರ್ಜಲ ಪ್ರಾಧಿಕಾರ' ರಚಿತ ಬಿಬಿಎಂಪಿ ಸಮಿತಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು 2019ರಲ್ಲೇ ತಿಳಿಸಿತ್ತು.

ನಗರದಲ್ಲಿ ಅಂತರ್ಜಲ ಮಟ್ಟಕುಸಿಯುವುದನ್ನು ತಪ್ಪಿಸುವ ಉದ್ದೇಶದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ. ನಿವೇಶನಗಳಲ್ಲಿ ಬೋರ್‌ವೆಲ್‌ ಕೊರೆಸಿಕೊಂಡು ಬಳಿಕ ಆ ನೀರನ್ನು ಕಟ್ಟಡ ನಿರ್ಮಾಣ ಕಾಮಗಾರಿಗೆ ಬಳಸುವುದರಿಂದ ಅಂತರ್ಜಲ ಕಡಿಮೆಯಾಗುತ್ತದೆ.

ಹಾಗಾಗಿ ಇನ್ನು ಮುಂದೆ ನಿವೇಶನಗಳಲ್ಲಿ ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಬೋರ್‌ವೆಲ್‌ ಕೊರೆಸಲು ಅನುಮತಿ ನೀಡದಿರಲು ತೀರ್ಮಾನಿಸಲಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ನೀರು ಅಗತ್ಯವಿದ್ದಲ್ಲಿ ಜಲಮಂಡಳಿ ಸಂಸ್ಕರಿಸಿದ ತಾಜ್ಯ ನೀರನ್ನು ಉಪಯೋಗಿಸಬಹುದು ಎಂದು ಹೇಳಿತ್ತು.

ಒಂದು ವೇಳೆ ನಗರದಲ್ಲಿ ಅನಧಿಕೃತವಾಗಿ ಬೋರ್‌ವೆಲ್‌ ಕೊರೆಯುವುದು ಕಂಡು ಬಂದಲ್ಲಿ ಈ ಮೇಲ್ಕಂಡ ಇಲಾಖೆಗಳಿಗೆ ದೂರು ನೀಡಬಹುದು. ಕಟ್ಟಡದ ಮಾಲಿಕ, ಬೋರ್‌ವೆಲ್‌ ಡ್ರಿಲ್ಲಿಂಗ್‌ ಏಜೆನ್ಸಿ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಬೋರ್‌ವೆಲ್‌ ಕೊರೆಯಲು ರಾಜ್ಯ ಅಂತರ್ಜಲ ಪ್ರಾಧಿಕಾರ ರಚಿತ ಬಿಬಿಎಂಪಿ ಸಮಿತಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಈ ಸಮಿತಿಯಲ್ಲಿ ಜಲಮಂಡಳಿಯ ಪ್ರಧಾನ ಮುಖ್ಯ ಎಂಜಿನಿಯರ್‌ ಅಧ್ಯಕ್ಷರಾಗಿದ್ದು, ಬಿಬಿಎಂಪಿ, ಪೊಲೀಸ್‌ ಇಲಾಖೆ, ಬೆಸ್ಕಾಂ, ಅಂತರ್ಜಲ ಪ್ರಾಧಿಕಾರ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಸದಸ್ಯರಾಗಿದ್ದಾರೆ.

Recommended Video

IPL ನಲ್ಲಿ ಪಾಕ್ ಆಟಗಾರರಿಗೆ ಸಿಕ್ಕ ಸಕ್ಸಸ್ ವಿರಾಟ್ ಮತ್ತು ABD ಗೆ‌ ಇನ್ನೂ ಸಿಕ್ಕಿಲ್ಲ | Oneindia Kannada

English summary
Residences and commercial establishments that are yet to register their old borewells with the Karnataka Ground Water Authority or the Central Groundwater Authority (CGWA) will have to pay a fine of Rs 1 lakh for the delay, said a public notice issued by CGWA.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X