ಮಹದಾಯಿ : ಕಾಮಗಾರಿ ಆರಂಭಿಸದಂತೆ ಸುಪ್ರೀಂ ಸೂಚನೆ
ಬೆಂಗಳೂರು, ಮಾರ್ಚ್ 02 : ಮಹದಾಯಿ ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ಯೋಜನೆಯ ಕಾಮಗಾರಿಯನ್ನು ಆರಂಭಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.
Recommended Video
ಗೋವಾ ಸರ್ಕಾರ ಮಹದಾಯಿ ಯೋಜನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ನಡೆಯಿತು. 2014ರ ಮಧ್ಯಂತರ ತೀರ್ಪು ಪಾಲಿಸುವಂತೆ ಸೂಚನೆ ನೀಡಿದ ನ್ಯಾಯಾಲಯ ಗೋವಾ ಅರ್ಜಿಯನ್ನು ಇತ್ಯರ್ಥಗೊಳಿಸಿತು.
ಮಹದಾಯಿ ನ್ಯಾಯಾಧೀಕರಣ 2014ರಲ್ಲಿ ನೀಡಿದ್ದ ಆದೇಶವನ್ನು ಪಾಲಿಸಬೇಕು. ಯೋಜನೆಯ ಡಿಪಿಆರ್ ಸಲ್ಲಿಕೆ ಮಾಡಿದ ಬಳಿಕ ಕಾಮಗಾರಿ ಆರಂಭಿಸಬಹುದು ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಕೇಂದ್ರ ಸರ್ಕಾರದ ಏಜೆನ್ಸಿಗಳ ಅನುಮತಿ ಪಡೆದುಕೊಂಡು ಕರ್ನಾಟಕ ಯೋಜನೆಯ ಕಾಮಗಾರಿಯನ್ನು ಆರಂಭಿಸಬೇಕು ಎಂದು ನ್ಯಾಯಾಲಯ ಹೇಳಿದೆ.
ಫೆಬ್ರವರಿ 20ರಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಮಹದಾಯಿ ಯೋಜನೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು ಎಂದು ಸೂಚನೆ ನೀಡಿತ್ತು. ಫೆಬ್ರವರಿ 27ರಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.
ಸರ್ಕಾರ ಅಧಿಸೂಚನೆ ಹೊರಡಿಸಿದರೂ ಈಗ ಕರ್ನಾಟಕ ಯೋಜನೆಯ ಕಾಮಗಾರಿಯನ್ನು ಆರಂಭಿಸುವಂತಿಲ್ಲ. ಯೋಜನೆಯ ಡಿಪಿಆರ್ ಸಿದ್ಧವಾಗಬೇಕು. ಕೇಂದ್ರದ ವಿವಿಧ ಏಜೆನ್ಸಿಗಳ ಅನುಮತಿಯನ್ನು ಪಡೆಯಬೇಕು.











Click it and Unblock the Notifications