ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿವಿಗಳಲ್ಲಿ ಶುಲ್ಕ ಪಡೆಯದ ಬಗ್ಗೆ ಸುತ್ತೋಲೆ
ಬೆಂಗಳೂರು, ಜುಲೈ 04; ವಿಶ್ವವಿದ್ಯಾಲಯಗಳಲ್ಲಿ/ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ಶುಲ್ಕಗಳನ್ನು ಪಡೆಯದಿರುವ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಯಿಂದ ಯಾವುದೇ ಕಡ್ಡಾಯ ಶುಲ್ಕ ಪಾವತಿ ಮಾಡುವಂತೆ ಒತ್ತಾಯ ಮಾಡಬಾರದು ಎಂದು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಲಾಗಿದೆ.
ಮಂಗಳವಾರ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಶಿವಶಂಕರ್ ನಾಯಕ್. ಎಲ್ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ.

ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷ ಒಳಗಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುತ್ತಿದೆ ಎಂದು ಹೇಳಿದೆ.
ಸರ್ಕಾರ ಆಯಾಯ ಕೋರ್ಸಿಗೆ ನಿಗದಿ ಮಾಡಿರುವ ಕಾಲೇಜು ಶುಲ್ಕವನ್ನು ಮಾರುಪಾವತಿ ಮಾಡಲಾಗುತ್ತಿದೆ ಹಾಗೂ ಸದರಿ ಮೊತ್ತವನ್ನು ವಿದ್ಯಾರ್ಥಿಯು ತನ್ನ ಖಾತೆಗೆ ಜಮೆಯಾದ ನಂತರದಲ್ಲಿ ಸಂಬಂಧಪಟ್ಟ ಕಾಲೇಜಿಗೆ ಪಾವತಿಸಲು ಸೂಚಿಸಲಾಗಿರುತ್ತದೆ ಎಂದು ವಿವರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಸ್ನಾತಕ/ ಸ್ನಾತಕೋತ್ತರ/ ಡಿಪ್ಲಮೋ/ ಪಾಲಿಟೆಕ್ನಿಕ್/ ವೃತ್ತಿಪರ ಕೋರ್ಸ್‌ಗಳಾದ ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ allied Courses ಗಳಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಯಾವುದೇ ಶುಲ್ಕವನ್ನು ಕಡ್ಡಾಯವಾಗಿ ಪ್ರವೇಶಾತಿ ಸಮಯದಲ್ಲಿ ಪಾವತಿ ಮಾಡುವಂತೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರು/ ವಿಶ್ವವಿದ್ಯಾಲಯದ ಮುಖ್ಯಸ್ಥರು ಒತ್ತಾಯ ಮಾಡಬಾರದೆಂದು ಈಗಾಗಲೇ ಉನ್ನತ ಶಿಕ್ಷಣ ಇಲಾಖೆಯ ಸುತ್ತೋಲೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸುತ್ತೋಲೆ ಮತ್ತು ಆದೇಶಗಳನ್ನು ಹೊರಡಿಸಲಾಗಿದೆ ಎಂದು ತಿಳಿಸಿದೆ.
ಮಾರ್ಗಸೂಚಿಗಳು; ಭಾರತ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮಾರ್ಗಸೂಚಿ (2020-21 ರಿಂದ 2025-26 ರ ವರೆಗೆ) ಯ ಕಂಡಿಕೆ 8ರಲ್ಲಿ Freeship Card ಬಗ್ಗೆ ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ. ಅದರಂತೆ SSP ತಂತ್ರಾಂಶದಲ್ಲಿ ಅವಕಾಶ ಮಾಡಿಕೊಡಲಾಗಿದೆ ಹಾಗೂ ಅರ್ಹ ವಿದ್ಯಾರ್ಥಿಗಳು ಸದರಿ ಕಾರ್ಡಿನ ಮೂಲಕ ಯಾವುದೇ ಬೋಧನಾ ಶುಲ್ಕ ಹಾಗೂ ಕಡ್ಡಾಯ ಶುಲ್ಕಗಳನ್ನು ಪಾವತಿಸದೇ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುತ್ತಿದ್ದಾರೆ.
ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ ಇವರ ಪ್ರಸ್ತಾವನೆಯಂತೆ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆಗೆ ಈ ಕೆಳಕಂಡಂತೆ ದೂರುಗಳು ವಿದ್ಯಾರ್ಥಿಗಳಿಂದ ಸ್ವೀಕೃತವಾಗಿದ್ದು, ಇದನ್ನು ಪರಿಶೀಲಿಸಿ 3/7/2023ರಲ್ಲಿ ಈ ಕುರಿತು ಆದೇಶ ಹೊರಡಿಸಲಾಗಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಮತಿಯ ಮೇರೆಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಂಸ್ಥೆ/ ಕಾಲೇಜುಗಳು ಈ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಿದೆ.
* ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ಮಂಜೂರಾಗುವ ಶುಲ್ಕದ ಮೊತ್ತವನ್ನು ವಿದ್ಯಾರ್ಥಿಯು ಕಡ್ಡಾಯವಾಗಿ ಕಾಲೇಜಿಗೆ ಪಾವತಿ ಮಾಡಬೇಕಾಗಿರುತ್ತದೆ (ನಿರ್ವಹಣಾ ವೆಚ್ಚ ಹೊರತುಪಡಿಸಿ), ಸಮಾಜ ಕಲ್ಯಾಣ ಇಲಾಖೆಯು DBT ಮೂಲಕ ವಿದ್ಯಾರ್ಥಿಗಳಿಗೆ ಪಾವತಿಸಿದ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಖಚಿತ ಪಡಿಸಿಕೊಂಡು ನಂತರ ವಿದ್ಯಾರ್ಥಿಯಿಂದ ಸದರಿ ಮೊತ್ತವನ್ನು ಪಾವತಿ ಮಾಡಿಸಿಕೊಳ್ಳುವುದು.
* ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿ ಹಾಗೂ ಉನ್ನತ ಶಿಕ್ಷಣದಲ್ಲಿ ವಂಚಿತರಾಗಬಾರದೆಂಬ ಉದ್ದೇಶದಿಂದ ಪ್ರವೇಶಾತಿ ಸಮಯದಲ್ಲಿ ಕಡ್ಡಾಯ ಶುಲ್ಕಗಳನ್ನು (ಮರುಪಾವತಿ ಮಾಡಲಾಗುವ/ Deposit ಗಳನ್ನು ಹೊರತುಪಡಿಸಿ) ಪಾವತಿಸುವಂತೆ ಒತ್ತಾಯ ಮಾಡುವಂತಿಲ್ಲ.
* ಕೋರ್ಸುವಾರು ನಿಗದಿಯಾಗಿರುವ ಶುಲ್ಕದ ವಿವರಗಳನ್ನು ಸಂಬಂಧಪಟ್ಟ ಇಲಾಖೆ/ ವಿಶ್ವವಿದ್ಯಾಲಯ/ ಮಂಡಳಿಗಳು ನೇರವಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ ತಂತ್ರಾಂಶದಲ್ಲಿ ನಮೂದು ಮಾಡಲಾಗುತ್ತಿದ್ದು, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಮಂಜೂರು ಮಾಡಲಾಗುತ್ತಿದೆ.
* ಕೌನ್ಸಿಲಿಂಗ್ ಸೀಟುಗಳಿಗೆ ಸಂಬಂಧಿಸಿದಂತೆ, ಸರ್ಕಾರಿ ಕೋಟಾ ಸೀಟುಗಳಿಗೆ ವಿಶ್ವವಿದ್ಯಾಲಯ ಹಾಗೂ KEA ನಿಗದಿಪಡಿಸಿದ ಶುಲ್ಕಗಳನ್ನು ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಮಂಜೂರು ಮಾಡಲು ಕ್ರಮವಹಿಸಲಾಗಿದ್ದು, ಸರ್ಕಾರಿ ಕೋಟಾ ಸೀಟಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಂದ ಇತರೆ ಯಾವುದೇ ಶುಲ್ಕಗಳನ್ನು ವಸೂಲು ಮಾಡುವಂತಿಲ್ಲ.
* ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ಮೇಲ್ಕಂಡ Fee Components ಗಳನ್ನು ಮಾತ್ರ ಮಂಜೂರು ಮಾಡಲಾಗುತ್ತಿದ್ದು, ಇಲಾಖೆ/ ಮಂಡಳಿ/ ವಿಶ್ವವಿದ್ಯಾಲಯಗಳು ಕೋರ್ಸುವಾರು ನಿಗದಿಯಾದ ಶುಲ್ಕದ ವಿವರಗಳನ್ನು ಕಡ್ಡಾಯವಾಗಿ ನಿಗದಿತ ಅವಧಿಯೊಳಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ನಮೂದಿಸುವುದು.
ಒಮ್ಮೆ ಸಮಾಜ ಕಲ್ಯಾಣ ಇಲಾಖೆಯಿಂದ ಅನುಮೋದನೆಯಾದ ಶುಲ್ಕದ ವಿವರಗಳನ್ನು ಯಾವುದೇ ಹಂತದಲ್ಲಿಯೂ ಬದಲಾವಣೆ ಮಾಡಲು ಸಾಧ್ಯವಿರುವುದಿಲ್ಲ. ಆದ್ದರಿಂದ, ಸಂಬಂಧಪಟ್ಟ ಇಲಾಖೆ/ ಮಂಡಳಿ/ ವಿಶ್ವವಿದ್ಯಾಲಯಗಳು ಕಡ್ಡಾಯವಾಗಿ Fee Components ಪರಿಶೀಲಿಸಿ ನಮೂದು ಮಾಡುವುದು. ವೇಳೆ ಶುಲ್ಕಗಳು ಕಡಿಮೆ ಮಂಜೂರಾದಲ್ಲಿ, ಸಂಬಂಧಪಟ್ಟ ಇಲಾಖೆ/ ಮಂಡಳಿ/ ವಿಶ್ವವಿದ್ಯಾಲಯಗಳೇ ನೇರ ಹೊಣೆಗಾರರಾಗಿರುತ್ತಾರೆ.
* ವಿದ್ಯಾರ್ಥಿಯು ಆಯಾ ಕೋರ್ಸಿಗೆ ದಾಖಲಾದ ದಿನದಿಂದಲೇ ವಿದ್ಯಾರ್ಥಿಗೆ University Reg Number ಅನ್ನು ನೀಡುವುದು ಹಾಗೂ ದಾಖಲಾದ ದಿನದಿಂದಲೇ ವಿದ್ಯಾರ್ಥಿಯು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುವುದು.
* ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದಿರುವ ವಿದ್ಯಾರ್ಥಿಯಿಂದ ಯಾವುದೇ ಕಡ್ಡಾಯ ಶುಲ್ಕ ಪಡೆಯದೇ UUCMS ನಲ್ಲಿ ದಾಖಲು ಮಾಡಿಕೊಳ್ಳುವುದು ಹಾಗೂ ಅಂದೇ UUCMS ಸಂಖ್ಯೆಯನ್ನು ವಿದ್ಯಾರ್ಥಿಗೆ ವಿತರಿಸುವುದು. ತಾಂತ್ರಿಕ ಶಿಕ್ಷಣ ಸಂಸ್ಥೆಗಳೂ ಸಹ ಇದರಂತೆಯೇ ಕ್ರಮವಹಿಸುವುದು.
* ಅದೇ ರೀತಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ದಾಖಲಾಗುತ್ತಿರುವ ವಿದ್ಯಾರ್ಥಿಗಳಿಗೂ ಸಹ ದಾಖಲಾದ ದಿನದಂದೇ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುವುದು ಎಂದು ತಿಳಿಸಲಾಗಿದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications