ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆ.20ರವರೆಗೆ ಶಾಲಾ,ಕಾಲೇಜು ದಾಖಲಾತಿ ದಿನಾಂಕ ವಿಸ್ತರಣೆ: ಸುರೇಶ್ ಕುಮಾರ್

|
Google Oneindia Kannada News

ಬೆಂಗಳೂರು,ಫೆಬ್ರವರಿ 06: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಈ ವರ್ಷದ ಶಾಲಾ ಕಾಲೇಜುಗಳು ತಡವಾಗಿ ಆರಂಭವಾಗಿವೆ.

ಹಲವು ವಿದ್ಯಾರ್ಥಿಗಳು ಇನ್ನೂ ಕೂಡ ದಾಖಲಾತಿ ಮಾಡಿಸಿಕೊಳ್ಳುತ್ತಿದ್ದಾರೆ.ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತರಗತಿಗಳ ದಾಖಲಾತಿ ಕೊನೆಯ ದಿನಾಂಕವನ್ನು ಫೆಬ್ರವರಿ 20ರವರೆಗೆ ವಿಸ್ತರಿಸಲಾಗಿದೆ ಎಂದು ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಾಲಾ ಶುಲ್ಕ ಸಮಸ್ಯೆ ಪರಿಹಾರಕ್ಕೆ ವಿಶೇಷ ಆದೇಶ ಮಾಡಿದ ಸುರೇಶ್ ಕುಮಾರ್ಶಾಲಾ ಶುಲ್ಕ ಸಮಸ್ಯೆ ಪರಿಹಾರಕ್ಕೆ ವಿಶೇಷ ಆದೇಶ ಮಾಡಿದ ಸುರೇಶ್ ಕುಮಾರ್

ಎಲ್ಲಾ ತರಗತಿಗಳಿಗೆ ಸೇರ್ಪಡೆಗೆ ದಾಖಲಾತಿಯನ್ನು ಕಡ್ಡಾಯಗೊಳಿಸಲಾಗಿರುವುದರಿಂದ ವಿದ್ಯಾರ್ಥಿಗಳ ದಾಖಲಾತಿಗೆ ಅನುಕೂಲ ಕಲ್ಪಿಸಲು ಪ್ರಸ್ತುತ ವರ್ಷದ ಶಾಲಾ ಕಾಲೇಜುಗಳ ದಾಖಲಾತಿ ಪ್ರವೇಶ ಅವಧಿಯನ್ನು ವಿಸ್ತರಿಸಬೇಕೆಂದು ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

Notice Of Extension Of School College Enrollment Date In Karnataka

ರಾಜ್ಯದ ವಿವಿಧ ಭಾಗಗಳ ವಿದ್ಯಾರ್ಥಿಗಳು ತಾವು ಬಯಸಿದ ಕಾಲೇಜುಗಳಲ್ಲಿ ದಾಖಲಾತಿ ಪಡೆಯುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ.ಈ ವರ್ಷದ ದಾಖಲಾತಿಗೆ ಫೆಬ್ರವರಿ 6 ಕಡೆಯ ದಿನಾಂಕವಾಗಿತ್ತು. ಆದರೆ ಹಲವು ವಿದ್ಯಾರ್ಥಿಗಳು ಇನ್ನೂ ತರಗತಿಗೆ ದಾಖಲಾಗಲು ಸಾಧ್ಯವಾಗುತ್ತಿಲ್ಲ.

ಈ ವರ್ಷ ತರಗತಿಗಳು ತಡವಾಗಿ ಪ್ರಾರಂಭವಾಗಿರುವುದರಿಂದ ದಾಖಲಾತಿಗೆ ಸಮಯ ನೀಡಬೇಕೆಂದು ಕೋರಿ ರಾಜ್ಯದ ವಿವಿಧಭಾಗಗಳಿಂದ ವಿದ್ಯಾರ್ಥಿಗಳು, ಪೋಷಕರು ಮತ್ತು ಜನಪ್ರತಿನಿಧಿಗಳಿಂದ ಪ್ರಸ್ತಾವನೆಗಳು ಸ್ವೀಕೃತವಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಾಖಲಾತಿಯನ್ನು ಫೆ.20ರವರೆಗೆ ವಿಸ್ತರಿಸಬೇಕೆಂದು ಸಚಿವರು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಟಿಪ್ಪಣಿಯಲ್ಲಿ ಸೂಚಿಸಿದ್ದಾರೆ.

English summary
Minister Suresh Kumar said that School and college enrollment date extended to February 20.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X