ಕನಕಪುರ ಬಂಡೆಗೆ ಬಿಗ್ ಶಾಕ್: ಲೋಕಾಯುಕ್ತದಿಂದ ಡಿಕೆ ಶಿವಕುಮಾರ್‌ಗೆ ನೋಟಿಸ್
ಬೆಂಗಳೂರು ಏಪ್ರಿಲ್ 10: ಚುನಾವಣೆ ಹೊಸ್ತಿಲಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಗ್ ಶಾಕ್ ಎದುರಾಗಿದೆ. ಲೋಕಾಯುಕ್ತದಿಂದ ಡಿಕೆ ಶಿವಕುಮಾರ್‌ಗೆ ಮತ್ತೆ ನೋಟಿಸ್ ನೀಡಲಾಗಿದೆ. ಇದರಿಂದಾಗಿ ಲೋಕಸಭಾ ಚುನಾವಣೆಯಲ್ಲಿ ಬ್ಯೂಸಿ ಆಗಿರುವ ಕನಕಪುರ ಬಂಡೆಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಅಕ್ರಮ ಆಸ್ತಿ ಗಳಿಸಿರುವ ಆರೋಪ ಈಗಾಗಲೇ ಡಿಕೆ ಶಿವಕುಮಾರ್ ಅವರ ಮೇಲಿದ್ದು, ಇದೀಗ ಅದರ ದಾಖಲೆಗಳನ್ನು ಒದಗಿಸುವಂತೆ ನೊಟೀಸ್ ಜಾರಿ ಮಾಡಲಾಗಿದೆ. ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆ ರದ್ದು ಮಾಡಿ ರಾಜ್ಯ ಸರ್ಕಾರ, ಲೋಕಾಯುಕ್ತ ತನಿಖೆಗೆ ನೀಡಿತ್ತು.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್, ಕಳೆದ ಫೆಬ್ರವರಿ ತಿಂಗಳಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ತಿ ಗಳಿಕೆ ವಿವರ ನೀಡುವಂತೆ ನೋಟಿಸ್ ಜಾರಿ ಮಾಡಿದ್ದು, ಸಿಬಿಐಗೆ ನೀಡಿರುವ ದಾಖಲಾತಿಗಳ ಮಾಹಿತಿಗಳನ್ನು ಒದಗಿಸುವಂತೆ ನೋಟಿಸ್‌ನಲ್ಲಿ ಸೂಚಿಸಿದೆ.
2013ರ ಏಪ್ರಿಲ್ 1ರಿಂದ 2018ರ ಏಪ್ರಿಲ್ 30ರ ಅವಧಿಯಲ್ಲಿನ ಅಕ್ರಮವಾಗಿ 74.93 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳಿಸಿರುವ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಈಗಾಗಲೇ ಲೋಕಾಯುಕ್ತ ದೂರು ದಾಖಲಿಸಿಕೊಂಡಿದ್ದು, ಇದೀಗ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ದಾಖಲೆ ಒದಗಿಸುವಂತೆ ನೋಟೀಸ್ ಜಾರಿ ಮಾಡಿದೆ.
ಇದೇ ಆಸ್ತಿ ಗಳಿಕೆ ಆರೋಪದಡಿ ಡಿಕೆ ಶಿವಕುಮಾರ್ ವಿರುದ್ಧ 2020ರ ಅಕ್ಟೋಬರ್ 03ರಂದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಸಿಬಿಐ ಪ್ರಕರಣ ದಾಖಲಿಸಿತ್ತು. ಆದ್ರೆ, ಈ ಹಿಂದೆ ಬಿಜೆಪಿ ತನಿಖೆಗೆ ನೀಡಿದ್ದ ಅನುಮತಿಯನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತು. ಅಲ್ಲದೇ ಈ ಪ್ರಕರಣದ ತನಿಖೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ, 2023ರ ನವೆಂಬರ್ 23ರಂದು ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವಹಿಸಿತ್ತು. ಬಳಿಕ ಸರ್ಕಾರದ ಆದೇಶದಂತೆ ಲೋಕಾಯುಕ್ತ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆಯನ್ನು ಪ್ರತ್ಯೇಕ ತಂಡಕ್ಕೆ ವಹಿಸಲಾಗಿತ್ತು.
ಲೋಕಸಭಾ ಚುನಾವಣೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬ್ಯೂಸಿ ಆಗಿದ್ದಾರೆ. ಆದರೆ ಲೋಕಾಯುಕ್ತ ನೋಟೀಸ್ ಇದೀಗ ಸಂಕಷ್ಟ ಎದುರಾಗಿದೆ.












Click it and Unblock the Notifications