ವಕ್ಫ್ ಬೋರ್ಡ್‌ನಿಂದ ರೈತರಿಗೆ ನೋಟಿಸ್: ಯೂಟರ್ನ್ ತೆಗೆದುಕೊಂಡ ರಾಜ್ಯ ಸರ್ಕಾರ!
ರಾಜ್ಯದಲ್ಲಿ ವಕ್ಫ್ ಬೋರ್ಡ್ ಹಾಗೂ ರೈತರ ನಡುವೆ ಸಂಘರ್ಷವೊಂದು ಏರ್ಪಟ್ಟಿದೆ. ವಿಜಯಪುರದಲ್ಲಿ ವಕ್ಫ್ ಬೋರ್ಡ್‌ನಿಂದ ರೈತರಿಗೆ ನೋಟಿಸ್ ನೀಡಲಾಗಿದ್ದು, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇದರಿಂದ ಹೆಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರವು ಡ್ಯಾಮೇಜ್ ಕಂಟ್ರೋಲ್ ಮಾಡುವುದಕ್ಕೆ ಮುಂದಾಗಿದೆ.
ಕರ್ನಾಟಕದಲ್ಲಿ ಹೊಸ ವಿವಾದವೊಂದು ಶುರುವಾಗಿದೆ. ರೈತರಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್‌ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್‌ನ ಪ್ರಭಾವಿ ಸಚಿವ ಎಚ್.ಕೆ ಪಾಟೀಲ್ ಅವರು ತುರ್ತು ಕ್ರಮ ತೆಗೆದುಕೊಂಡಿದ್ದಾರೆ. ವಕ್ಫ್ ಬೋರ್ಡ್‌ನಿಂದ ನೀಡಿರುವ ನೋಟಿಸ್‌ಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಅವರು ಸೂಚನೆ ನೀಡಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಎದುರಾಗಿದೆ.

ಇಲ್ಲಿಯ ವರೆಗೆ ರಾಜ್ಯ ಸರ್ಕಾರವು ವಕ್ಫ್ ಬೋರ್ಡ್‌ನಿಂದ ಯಾವುದೇ ರೈತರಿಗೆ ನೋಟಿಸ್ ನೀಡಿಲ್ಲ ಎಂದು ಹೇಳಿಕೊಂಡು ಬಂದಿತ್ತು. ರಾಜ್ಯದ ಯಾವುದೇ ರೈತರಿಗೂ ಸರ್ಕಾರದಿಂದ ನೋಟಿಸ್ ಜಾರಿ ಮಾಡಿಲ್ಲ. ಆದರೆ, ಬಿಜೆಪಿ ನಾಯಕರು ಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ. ಇದು ಬಿಜೆಪಿಯ ಕುತಂತ್ರವಲ್ಲದೇ ಮತ್ತಿನ್ನೇನೂ ಅಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ, ಇದೀಗ ಕಾಂಗ್ರೆಸ್ ನಾಯಕರು ಯೂಟರ್ನ್ ತೆಗೆದುಕೊಂಡಿದ್ದಾರೆ.
ನೋಟಿಸ್ ವಾಪಸ್ ಪಡೆಯುವುದಕ್ಕೆ ಸೂಚನೆ
ಕರ್ನಾಟಕದಲ್ಲಿ ರೈತರಿಗೆ ವಕ್ಫ್ ಬೋರ್ಡ್‌ನಿಂದ ನೋಟಿಸ್ ನೀಡಿರುವುದು ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ರಾಜ್ಯ ಸರ್ಕಾರವು ಎಚ್ಚೆತ್ತುಕೊಂಡಿದೆ. ಇದೀಗ ವಕ್ಫ್ ಬೋರ್ಡ್‌ನಿಂದ ನೀಡಲಾಗಿರುವ ನೋಟಿಸ್‌ಗಳನ್ನು ಹಿಂಪಡೆಯುವಂತೆ ನಿರ್ದೇಶನ ನೀಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ ಪಾಟೀಲ ಹೇಳಿದ್ದಾರೆ.
ಈ ತಪ್ಪಿನ ಬಗ್ಗೆ ವಿಚಾರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ವಕ್ಫ್ ಬೋರ್ಡ್‌ನಿಂದ ರೈತರಿಗೆ ಸಂಬಂಧಿಸಿದ ಜಮೀನುಗಳಿಗೂ ನೋಟಿಸ್ ಜಾರಿ ಮಾಡಲಾಗಿದೆ ಎನ್ನುವ ಗಂಭೀರ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆಯಲ್ಲಿ ನೋಟಿಸ್‌ಗಳನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಪಾಟೀಲ್ ಅವರು ಹೇಳಿದ್ದಾರೆ.
ನಮ್ಮ ಸರ್ಕಾರಕ್ಕೆ ರೈತರ ಜಮೀನು ತೆಗೆದುಕೊಳ್ಳುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಆದರೆ, ರಾಜ್ಯ ಬಿಜೆಪಿ ನಾಯಕರು ವಿನಾಕಾರಣ ವಿವಾದ ಸೃಷ್ಟಿ ಮಾಡುತ್ತಿದ್ದಾರೆ. ರೈತರಿಗೆ ನೋಟಿಸ್ ಹೋಗಿದ್ದರೆ ಅದನ್ನು ಹಿಂದಕ್ಕೆ ಪಡೆದುಕೊಳ್ಳಲಾಗುವುದು. ವಿಜಯಪುರದ ತಹಶಿಲ್ದಾರ್ ಅವರು ತಪ್ಪು ಮಾಡಿದ್ದಾರೆ. ಅಧಿಕಾರಿಗಳ ತಪ್ಪಿಗೆ ರಾಜಕೀಯವಾಗಿ ಆರೋಪ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
ಜಮೀರ್ ಯಾಕೆ ರಾಜೀನಾಮೆ ಕೊಡಬೇಕು ?
ಸಚಿವ ಜಮೀರ್ ಅಹ್ಮದ್‌ಖಾನ್ ಅವರು ರಾಜೀನಾಮೆ ಯಾಕೆ ಕೊಡಬೇಕು ಎಂದು ಎಚ್.ಕೆ ಪಾಟೀಲ ಅವರು ಪ್ರಶ್ನೆ ಮಾಡಿದ್ದಾರೆ. ಇಲ್ಲಿ ಅಧಿಕಾರಿಗಳು ತಪ್ಪು ಮಾಡಿದ್ದಾರೆ. ತಹಶಿಲ್ದಾರ್ ತಪ್ಪು ಮಾಡಿದ್ದರೆ, ಅದನ್ನು ಜಿಲ್ಲಾಧಿಕಾರಿಗಳು ನೋಡಿಕೊಳ್ಳಲಿದ್ದಾರೆ. ಇನ್ನು ರೈತರ ಭೂಮಿಯನ್ನು ವಕ್ಫ್ ಬೋರ್ಡ್‌ಗೆ ಅಥವಾ ವಕ್ಫ್ ಬೋರ್ಡ್ ಆಸ್ತಿಯಾಗಿ ಪರಿವರ್ತನೆ ಮಾಡುವ ಯಾವುದೇ ಉದ್ದೇಶವು ರಾಜ್ಯ ಸರ್ಕಾರಕ್ಕೆ ಇಲ್ಲ. ಇದೆಲ್ಲ ಬಿಜೆಪಿ ನಾಯಕರ ಅಪಪ್ರಚಾರ ಎಂದು ಹೇಳಿದ್ದಾರೆ.












Click it and Unblock the Notifications