ಅರ್ಚಕರಿಗೆ ನೋಟಿಸ್; ಕಾಂಗ್ರೆಸ್‌ ಸರ್ಕಾರ ಕ್ಷಮೆ ಕೇಳಬೇಕು

ಬೆಂಗಳೂರು, ಜನವರಿ 23; ದೇವಾಲಯದ ಅರ್ಚಕರಿಗೆ ನೋಟಿಸ್ ನೀಡಿರುವ ವಿಚಾರ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ ಮಾಡಿದೆ. ಈ ಕೂಡಲೇ ಬೇಷರತ್ ಕ್ಷಮೆ ಯಾಚಿಸಿ, ನೋಟಿಸ್ ವಾಪಸ್ ಪಡೆಯಿರಿ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.

ಕಳೆದ 50 ವರ್ಷಗಳಿಂದ ಚಿಕ್ಕಮಗಳೂರುಹೊರ ವಲಯದಲ್ಲಿರುವ ಹಿರೇಮಗಳೂರು ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಹಿರೇಮಗಳೂರು ಕಣ್ಣನ್ ಅವರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ನೋಟಿಸ್ ನೀಡಿದೆ. ಈ ವಿಚಾರ ಈಗ ಚರ್ಚೆಗೆ ಕಾರಣವಾಗಿದೆ.

Notice To Temple Priest BY Vijayendra Upset With Govt

ಈ ಕುರಿತು ಬಿ. ವೈ. ವಿಜಯೇಂದ್ರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. 'ಕಾಂಗ್ರೆಸ್ ಸರ್ಕಾರದ ಆಡಳಿತ ತುಘಲಕ್ ಹಾದಿಯಲ್ಲಿ ನಡೆದಿದೆ, ಹಿಂದೂ ಧರ್ಮಿಯರ ಧಾರ್ಮಿಕ ಕ್ಷೇತ್ರದಲ್ಲಿಯೂ ಆದಾಯ ಗಳಿಕೆಯನ್ನು ಮಾನದಂಡವನ್ನಾಗಿಸಿಕೊಂಡು ಹಿರೇಮಗಳೂರು ಕಣ್ಣನ್ ಅವರಂತಹ ನಾಡಿನ ಶ್ರೇಷ್ಠ ಕನ್ನಡ ವಿದ್ವಾಂಸ ಹಾಗೂ ಆಧ್ಯಾತ್ಮಿಕ ಮಾರ್ಗದರ್ಶಕರಿಗೆ ನೋಟಿಸ್ ನೀಡಿರುವ ಕ್ರಮ ಅತ್ಯಂತ ಹಾಸ್ಯಾಸ್ಪದ ಹಾಗೂ ಖಂಡನೀಯ' ಎಂದು ಹೇಳಿದ್ದಾರೆ.

'ಹಿಂದೂ ಆಚಾರ-ವಿಚಾರ ಹಾಗೂ ಧಾರ್ಮಿಕ ಕೇಂದ್ರಗಳನ್ನೇ ಗುರಿಯನ್ನಾಗಿಸಿಕೊಂಡು ಕಾಂಗ್ರೆಸ್ ಸರ್ಕಾರ ಆಗಾಗ ಸರಣೀ ರೂಪದಲ್ಲಿ ಜನರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಧರ್ಮನಿಷ್ಠರ ಸಹನೆಯನ್ನು ಕೆಣಕುವಂತಿದೆ' ಎಂದು ಪೋಸ್ಟ್ ಹಾಕಿದ್ದಾರೆ.

'ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿರುವ ನೋಟಿಸ್ ಅನ್ನು ಈ ಕೂಡಲೇ ಬೇಷರತ್ ಕ್ಷಮೆ ಯಾಚಿಸಿ ಸರ್ಕಾರ ವಾಪಸ್ ಪಡೆಯಬೇಕು, ಇಂಥಾ ಅಸಂಬದ್ಧ ನೋಟಿಸ್ ನೀಡಿದ ಅವಿವೇಕಿ ಅಧಿಕಾರಿಯನ್ನು ಕೂಡಲೇ ಅಮಾನತ್ತಿನಲ್ಲಿಡಲಿ' ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

ನೋಟಿಸ್ ನೀಡಿದ್ದು ಏಕೆ?; ಕಳೆದ 50 ವರ್ಷಗಳಿಂದ ಚಿಕ್ಕಮಗಳೂರು ಹೊರ ವಲಯದಲ್ಲಿರುವ ಹಿರೇಮಗಳೂರು ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಹಿರೇಮಗಳೂರು ಕಣ್ಣನ್ ಅವರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ನೋಟಿಸ್ ನೀಡಿದೆ.

ಕನ್ನಡದ ಪಂಡಿತ, ಕನ್ನಡದ ಪೂಜಾರಿ ಎಂದೇ ಖ್ಯಾತಿ ಪಡೆದಿರುವ ಹಿರೇಮಗಳೂರು ಕಣ್ಣನ್ ಅವರ ವೇತನವನ್ನು ತಡೆ ಹಿಡಿದು, 4,500 ರೂಪಾಯಿಯಂತೆ 10 ವರ್ಷಕ್ಕೆ 4,74,000 ರೂ. ಹಣವನ್ನು ಸರ್ಕಾರಕ್ಕೆ ವಾಪಸ್ ನೀಡುವಂತೆ ಜಿಲ್ಲಾಡಳಿತ ನೋಟಿಸ್‌ನಲ್ಲಿ ತಿಳಿಸಿದೆ.

ರಾಜ್ಯ ಸರ್ಕಾರ ಪ್ರತಿ ತಿಂಗಳು 7500 ರೂ. ವೇತನ ನೀಡುತ್ತಿತ್ತು. ಆದರೆ ಇದೀಗ ದೇವಾಲಯದ ಆದಾಯ ಕಡಿಮೆ ಇದೆ ಎಂಬ ಕಾರಣ ನೀಡಿ ಈ ಹಿಂದೆ ನೀಡಿದ್ದ 7500 ರೂ. ವೇತನದಲ್ಲಿ 4500 ರೂ. ಅನ್ನು ವಾಪಸ್ ನೀಡುವಂತೆ, ಈ ತಿಂಗಳ ವೇತನವನ್ನು ತಡೆ ಹಿಡಿದು ತಹಶೀಲ್ದಾರ್ ಸುಮಂತ್ ನೋಟಿಸ್ ಜಾರಿ ಮಾಡಿದ್ದಾರೆ.

ಹಿರೇಮಗಳೂರು ಕಣ್ಣನ್ ಅವರು ಈ ದೇಗುಲದಲ್ಲಿ ದಿನ ನಿತ್ಯವೂ ಸೀತಾ, ರಾಮ, ಲಕ್ಷ್ಮಣರಿಗೆ ಕನ್ನಡದಲ್ಲೇ ಮಂತ್ರಘೋಷಗಳಿಂದ ಪೂಜೆ ಸಲ್ಲಿಸುವುದು ವಿಶೇಷವಾಗಿದೆ. ರಾಜ್ಯ, ಹೊರ ರಾಜ್ಯದಿಂದ ಆಗಮಿಸುವ ನೂರಾರು ಭಕ್ತರು ದೇವಾಲಯದಲ್ಲಿ ಕಲ್ಯಾಣ ರಾಮರ ದರ್ಶನ ಪಡೆಯುತ್ತಾರೆ.

ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ; ಹಿರೇಮಗಳೂರು ಕಣ್ಣನ್‌ಗೆ ನೋಟಿಸ್ ನೀಡಿರುವ ವಿಚಾರದ ಕುರಿತು ಸಾರಿಗೆ, ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ನೋಟಿಸ್ ವಾಪಸ್ ಪಡೆಯಲು ಸೂಚನೆ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, "ಸ್ಥಳೀಯ ತಹಶೀಲ್ದಾರ್ ತಪ್ಪು ತೀರ್ಮಾನದಿಂದ ನೋಟಿಸ್ ಜಾರಿಯಾಗಿದೆ. ಅದನ್ನು ವಾಪಸ್‌ ಪಡೆಯಲು ಮುಜರಾಯಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡಲಾಗುತ್ತದೆ" ಎಂದು ಹೇಳಿದ್ದಾರೆ.

ನೋಟಿಸ್ ಕುರಿತು ಮಾತನಾಡಿದ್ದ ಹಿರೇಮಗಳೂರು ಕಣ್ಣನ್, "44 ವರ್ಷಗಳಿಂದ ದೇವಾಲಯದ ಅರ್ಚಕನಾಗಿ ಕೆಲಸ ಮಾಡಿದ್ದೇನೆ. ದೇವಾಲಯದ ಆದಾಯ ಇಲ್ಲ ಎಂದು ವೇತನ ತಡೆಹಿಡಿದು ಅರ್ಚಕರಿಗೆ ನೀಡಿದ ವೇತನ ವಾಪಸ್ ಕೇಳುವುದು ಸರಿಯಲ್ಲ. ದೇವಾಲಯಗಳಲ್ಲಿ ಅರ್ಚಕರ ಕೊರತೆ ಇದೆ. ಬಡ ಅರ್ಚಕರ ವೇತನ ವಾಪಸ್ ಕೇಳುವುದು ಎಷ್ಟು ಸರಿ?" ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+