ಡಿಕೆ ರವಿ ನಿಗೂಢ ಸಾವು, ಸಿಬಿಐ ತನಿಖೆಗೆ ಕೇಂದ್ರ ಅಸ್ತು
ಬೆಂಗಳೂರು, ಏ. 14 : ದಕ್ಷ ಐಎಎಸ್ ಅಧಿಕಾರಿ ಡಿಕೆ ರವಿ ಅವರ ನಿಗೂಢ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಲು ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಮಂಗಳವಾರದಿಂದಲೇ ತನಿಖೆಯ ಕಾರ್ಯ ಆರಂಭಗೊಳ್ಳಲಿದ್ದು, ಇಂದು ತನಿಖಾ ತಂಡವನ್ನು ರಚನೆ ಮಾಡಲಾಗುತ್ತದೆ.
ಡಿಕೆ ರವಿ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಸಂಬಂಧ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಸೋಮವಾರ ಅಧಿಸೂಚನೆ ಹೊರಡಿಸಿದೆ. ಹಿಂದೆ ತನಿಖೆಯನ್ನು 3 ತಿಂಗಳೊಳಗೆ ಮುಗಿಸಬೇಕೆಂದು ಮಾ.24ರಂದು ಕರ್ನಾಟಕ ಸರಕಾರ ಅಧಿಸೂಚನೆ ಹೊರಡಿಸಿತ್ತು. [ಡಿಕೆ ರವಿ ಕೇಸ್ : ಸಿಬಿಐ ಪ್ರಕರಣ ಕೈ ಬಿಡುವ ಸಾಧ್ಯತೆ?]

ಆದರೆ, ಕಾಲಮಿತಿಯಲ್ಲಿ ತನಿಖೆ ನಡೆಸಲು ಅಸಾಧ್ಯ ಎಂದು ಕರ್ನಾಟಕ ಸರ್ಕಾರದ ಅಧಿಸೂಚನೆಯನ್ನು ಸಿಬಿಐ ತಿರಸ್ಕರಿಸಿತ್ತು. ಆದ್ದರಿಂದ ಸರ್ಕಾರ ಏಪ್ರಿಲ್ 6ರಂದು ಹೊಸ ಅಧಿಸೂಚನೆ ಹೊರಡಿಸಿತ್ತು ಮತ್ತು ಕಾಲಮಿತಿ ನಿಗದಿಪಡಿಸಿರಲಿಲ್ಲ. [ಸಿಬಿಐಗೆ ಷರತ್ತು ರಹಿತ ಸೂಚನೆ ಕೊಟ್ಟ ಸಿದ್ದು]
ಈ ಅಧಿಸೂಚನೆಯ ಅನ್ವಯ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಸೋಮವಾರ ಪ್ರಕರಣದ ಸಿಬಿಐ ತನಿಖೆಗೆ ಆದೇಶ ಹೊರಡಿಸಿದೆ. ಮಂಗಳವಾರದಿಂದಲೇ ತನಿಖೆ ಆರಂಭಗೊಳ್ಳಲಿದ್ದು, ಇಂದು ತನಿಖಾ ತಂಡ ರಚನೆಯಾಗಲಿದೆ.[ಡಿಕೆ ರವಿ ಕೇಸ್ : timeline]
ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತರಾಗಿದ್ದ ಡಿಕೆ ರವಿ ಅವರು ಮಾ.16ರಂದು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದರು. ಮೊದಲು ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ್ಯಾಂತ ಭಾರೀ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಸಿಬಿಐ ತನಿಖೆಗೆ ಒಪ್ಪಿಸಿದ್ದರು.












Click it and Unblock the Notifications