• search
For Quick Alerts
ALLOW NOTIFICATIONS  
For Daily Alerts

  ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ: ನಾಮಪತ್ರ ಸಲ್ಲಿಕೆ ಹೇಗೆ?

  By Nayana
  |

  ಬೆಂಗಳೂರು, ಮೇ 16: ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ಮೇ 15 ರಂದು ಅಧಿಸೂಚನೆ ಹೊರಡಿಸಲಾಗಿದೆ.

  ನಾಮಪತ್ರ ಸಲ್ಲಿಸಲು ಮೇ 22 ಕೊನೆಯ ದಿನಾಂಕವಾಗಿರುತ್ತದೆ. ನಾಮಪತ್ರ ಪರಿಶೀಲನೆಗೆ ಮೇ 23, ಉಮೇದುವಾರಿಕೆಯನ್ನು ಹಿಂತೆಗೆ ದುಕೊಳ್ಳಲು ಮೇ 25 ಕೊನೆಯ ದಿನಾಂಕವಾಗಿರುತ್ತದೆ. ಮತದಾನ ಜೂನ್‌ 8ರಂದು ನಡೆಯಲಿದೆ. ಮತದಾನ ಬೆಳಗ್ಗೆ 8ಕ್ಕೆ ಪ್ರಾರಂಭವಾಗಲಿದ್ದು, ಸಂಜೆ 4ರವರೆಗೆ ನಡೆಯಲಿದೆ. ಮತ ಎಣಿಕೆಯು ಜೂನ್‌ 12ರಂದು ನಡೆಯಲಿದೆ.

  ವಿಧಾನಪರಿಷತ್ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

  ಈ ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗಳ ವಯಸ್ಸು ಭಾರತೀಯ ಸಂವಿಧಾನದ ಅನುಚ್ಳೇದ 173 (ಬಿ) ರನ್ವಯ 30 ವರ್ಷಗಳಿಗೆ ಕಡಿಮೆ ಇರಕೂಡದು ಮತ್ತು ಅವರು ಕರ್ನಾಟಕದ ಯಾವುದಾದರೂ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು ಮತ್ತು ಅವರು ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹರಾಗಿರಬಾರದು.

  ಚಾಲ್ತಿಯಲ್ಲಿರುವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವ ಬಗ್ಗೆ ಸಂಬಂಧಿಸಿದ ಮತದಾರರ ನೋಂದಣಾಧಿಕಾರಿ/ಸಹಾಯಕ ಮತದಾರರ ನೋಂದಣಾಧಿಕಾರಿಗಳಿಂದ ಪಡೆದ ಮತದಾರರ ಪಟ್ಟಿಯ ದೃಢೀಕೃತ ನಕಲನ್ನು ಹಾಜರುಪಡಿಸಬೇಕು ಎಂದು ತಿಳಿಸಲಾಗಿದೆ.

  ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತರಾಗಿರುವವರು ಮಾತ್ರ ಈ ಚುನಾವಣೆಯಲ್ಲಿ ಮತದಾರರಾಗಿರುತ್ತಾರೆ. ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ಇವರು ಚುನಾವಣಾಧಿಕಾರಿಗಳಾಗಿರುತ್ತಾರೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆ (ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕುಗಳು) ಈ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೆ.

  ನಾಮಪತ್ರಗಳನ್ನು ಸಲ್ಲಿಸಲು ಬೇಕಾದ ನಮೂನೆಗಳನ್ನು ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ಇವರ ಕಚೇರಿಯಿಂದ ಪಡೆಯಬಹುದು. ಈ ಚುನಾವಣೆಯಲ್ಲಿ ಸ್ಪರ್ಧಿಸಲಿಚ್ಫಿಸುವವರು ಗಮನಿಸಬೇಕಾದ ಒಂದು ಮುಖ್ಯ ಅಂಶವೇನೆಂದರೆ, 1951 ರ ಪ್ರಜಾ ಪ್ರಾತಿನಿಧ್ಯ ಅಧಿನಿಯಮದ 33 ನೇ ನಿಯಮದ ಪ್ರಕಾರ ಪ್ರತಿ ಅಭ್ಯರ್ಥಿಯ ನಾಮಪತ್ರದಲ್ಲಿ ಸಂಬಂಧಿಸಿದ ಕ್ಷೇತ್ರದ ಮತದಾರರ ಪಟ್ಟಿಯಲ್ಲಿರುವ ಕನಿಷ್ಠ ಹತ್ತು ಮತದಾರರು ಸೂಚಕರಾಗಿ ಸಹಿ ಮಾಡಿರಬೇಕು.

  ಪ್ರತಿ ಅಭ್ಯರ್ಥಿ ರೂ 10,000 ರೂ ಠೇವಣಿ ಮಾಡಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು ರೂ 5,000 ರೂ. ಠೇವಣಿ ಮಾಡಬೇಕು. ಅಭ್ಯರ್ಥಿಯು ಪರಿಶಿಷ್ಟ ಜಾತಿ, ಪರಿಶಿಕಷ್ಟ ಪಂಗಡಕ್ಕೆ ಸೇರಿದ್ದವರಾಗಿದ್ದಲ್ಲಿ ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ದೃಢೀಕರಣ ಪತ್ರ ಲಗತ್ತಿಸಬೇಕು.

  ಈ ಚುನಾವಣೆಯಲ್ಲಿ ಜಿಲ್ಲಾಧಿಕಾರಿಗಳು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಇವರುಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ.

  ನಾಮಾಂಕನ ಪತ್ರಗಳನ್ನು ಚುನಾವಣಾಧಿಕಾರಿಗಳಾದ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ರವರಿಗೆ ಅಥವಾ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆರವರಿಗೆ ಪ್ರಾದೇಶಿಕ ಆಯುಕ್ತ ಕಚೇರಿ, ಬೆಂಗಳೂರು ವಿಭಾಗ, 2 ನೇ ಮಹಡಿ, ಕೆ. ಹೆಚ್. ರಸ್ತೆ, ಶಾಂತಿನಗರ, ಬೆಂಗಳೂರು - 560 027 ಇಲ್ಲಿ ಸಲ್ಲಿಸಬೇಕು.

  ಅಭ್ಯರ್ಥಿಗಳು ನಿಗದಿತ ನಮೂನೆಗಳಲ್ಲಿ (ಫಾರಂ 26) ಪ್ರಮಾಣ ಪತ್ರವನ್ನು ಮತ್ತು ಹೆಚ್ಚುವರಿ ಪ್ರಮಾಣ ಪತ್ರವನ್ನು ನೋಟರಿರವರಿಂದ ಪ್ರಮಾಣೀಕರಿಸಿದ ಪ್ರಮಾಣ ಪತ್ರವನ್ನು ನಾಮಪತ್ರದೊಂದಿಗೆ ಲಗತ್ತಿಸಿ ಸಲ್ಲಿಸಬೇಕು. ನಾಮಪತ್ರಗಳನ್ನು ಸಲ್ಲಿಸುವ ಅಭ್ಯರ್ಥಿಗಳು ರಾಜಕೀಯ ಪಕ್ಷಗಳಿಂದ ಸ್ಪರ್ಧಿಸಲು ಇಚ್ಛಿಸುವ ಸಂದರ್ಭದಲ್ಲಿ ಮಾನ್ಯ ಆಯೋಗವು ನಿಗಧಿಪಡಿಸಿದ ಪ್ರಪತ್ರ-ಎಎ, ಪ್ರಪತ್ರ-ಬಿಬಿ ಗಳನ್ನು ನಾಮಪತ್ರಗಳನ್ನು ಸಲ್ಲಿಸಲು ಮೇ 22 ಕೊನೆಯ ದಿನಾಂಕವಾಗಿರುತ್ತದೆ.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  Notification has been issued for the election of Karnataka south east teacher's constituency which will be held on June 8. The election commission has given information about filing the nominations for aspirants.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more