ನವೆಂಬರ್‌ಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ: ಡಿ.ಕೆ. ಶಿವಕುಮಾರ್ ಘೋಷಣೆ‌

ಬೆಂಗಳೂರು: ರಾಜ್ಯದಲ್ಲಿ ಬಾಕಿ ಇರುವ ಪಂಚಾಯತಿ ಹಾಗೂ ಪಾಲಿಕೆ ಚುನಾವಣೆಗಳನ್ನು ನವೆಂಬರ್ ತಿಂಗಳೊಳಗೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಚುನಾವಣೆಗೆ ಅಗತ್ಯ ಸಿದ್ಧತೆಗಳನ್ನು ಸರ್ಕಾರ ಕೈಗೊಳ್ಳುತ್ತಿದೆ ಎಂದು ಅವರು ಹೇಳಿದರು.

ಈ ಕುರಿತು ಮಾತನಾಡಿದ ಮುಖ್ಯಮಂತ್ರಿ D.K.Shivakumar ಅವರು, ನವೆಂಬರ್ ಒಳಗೆ ಪಂಚಾಯತಿ ಹಾಗೂ ಪಾಲಿಕೆ ಚುನಾವಣೆಗಳನ್ನು ನಡೆಸಲಾಗುವುದು. ಎಸ್ ಐ ಆರ್ ಮುಗಿದ ತಕ್ಷಣ ಚುನಾವಣೆ ನಡೆಸಲು ಆಯೋಗಕ್ಕೆ ಪತ್ರ ಬರೆಯಲಾಗುವುದು. ಗ್ರಾಮೀಣ , ತಾಲ್ಲೂಕುಗಳಿಂದ ಜನರ ವಲಸೆ ತಪ್ಪಿಸಲು ಸ್ಥಳೀಯ ಮಟ್ಟದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಆದ್ಯತೆ ನೀಡುವಂತೆ ಶಾಸಕರಿಗೆ ತಿಳಿಸಲಾಗಿದೆ ಎಂದು ಹೇಳಿದರು.

D K Shivakumar

ನಾಗೇಂದ್ರ ರಾಜೀನಾಮೆ ಪಡೀತಾರ ಡಿ.ಕೆ.ಶಿವಕುಮಾರ್

ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಚರ್ಚೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾಗೇಂದ್ರ ಪಕ್ಷದ ವಿಚಾರದಲ್ಲಿ ಎಂದು ಹಿಂದೇಟು ಹಾಕಿಲ್ಲ. ಪಕ್ಷದ ಶಿಸ್ತಿನ ಸಿಪಾಯಿ. ಅವರು ನಿರಪರಾಧಿ. ಆದರೂ ನಾವು ರಾಜೀನಾಮೆ ಪಡೆದಿದ್ದೆವು. ಅವರ ನಾಯಕತ್ವದಲ್ಲಿ ಅಪಾರ ವಿಶ್ವಾಸವಿದೆ ಎಂದರು. ಇನ್ನೂ ದೆಹಲಿ ಭೇಟಿ ವೇಳೆ ಕೇಂದ್ರದ ಸಚಿವರು, ಕಾನೂನು ತಜ್ಞರ ಜೊತೆ ಚರ್ಚೆ. ನಮ್ಮ ಪಕ್ಷದ ಕಚೇರಿ ಶಂಕುಸ್ಥಾಪನೆ ಬಗ್ಗೆ ನಾಯಕರೊಂದಿಗೆ ಚರ್ಚಿಸಲಾಗುವುದು ಎಂದರು.

ಶಾಸಕರ ಬೇಡಿಕೆಯನ್ನು ಕೇಳಿದ್ದೇನೆ. ತಮ್ಮ ಕ್ಷೇತ್ರದ ಅಭಿವೃದ್ದೀಯೇ ನಮ್ಮ ಗುರಿ. ಪ್ರಣಾಳಿಕೆಯಲ್ಲಿ ತಿಳಿಸಿರುವಂತೆ ಪಾರದರ್ಶಕ ಆಡಳಿತ, ರಾಜ್ಯದ ಹಿತಕ್ಕೆ ಶ್ರಮಿಸಬೇಕು ಎಂದರು. ವಿರೋಧ ಪಕ್ಷದವರಿಗೆ ಬಡವರು, ಬರದ ಬಗ್ಗೆ ಕಾಳಜಿ ಇಲ್ಲ. ಅವರಿಗೆ ರಾಜಕೀಯ ಮುಖ್ಯ. ಡಿಸಿಎಂ ಅವರು ಶೀಘ್ರ ಬರಪೀಡಿತ ತಾಲ್ಲೂಕು ಪ್ರಕಟಿಸಲಿದ್ದಾರೆ. ಕುಡಿಯುವ ನೀರಿಗೆ 1 ಕೋಟಿ ರೂ. ನೀಡಲಾಗಿದೆ. 102 ತಾಲ್ಲೂಕು ಪ್ರವಾಸ ಅಧ್ಯಯನ ಮುಕ್ತಾಯವಾದ ನಂತರ ಬರಪೀಡಿತ ಪ್ರದೇಶ ಘೋಷಣೆ ಮಾಡಲಾಗುವುದು" ಎಂದರು.

ಸರಕಾರಿ ಭೂಮಿ ಕಾನೂನು ರೀತಿ ಬಳಕೆ:

ಪಾರ್ಕ್ ಗಳ ಜಾಗ ಬಳಕೆ ಬಗ್ಗೆ ಮಸೂದೆಗೆ ವಿರೋಧ ಪಕ್ಷಗಳ ಟೀಕೆ ಬಗ್ಗೆ ಕುರಿತು ಮಾತನಾಡಿ, ರಸ್ತೆ ಅಗಲೀಕರಣ ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವ ಅಭಿವೃದ್ಧಿ ಕಾರ್ಯಗಳಿಗೆ ಕಾನೂನು ರೀತಿ ಭೂಮಿ ಬಳಸುವ ಚಿಂತನೆಯಿದೆ. ನಾವು ಖಾಸಗಿಯವರಿಗೆ ಅವಕಾಶ ನೀಡುವುದಿಲ್ಲ. ಬೇರೆ ಸರ್ಕಾರದಲ್ಲಿ ಅವರು ಅವರ ಪಕ್ಷ ಹಾಗೂ ಕಾರ್ಯಕರ್ತರಿಗೆ ನೀಡಿರುವುದು ಹೇಳಲೇ? ಸದಾಶಿವನಗರದ ನಮ್ಮ ನಿವಾಸದ ಬಳಿ ಪಾರ್ಕ್ ನೋಡಿ ಎಂದು ತಿರುಗೇಟು ನೀಡಿದರು.

ಬೆಂಗಳೂರಿನ ಮುಂದಿನ 25 ವರ್ಷಗಳ ನೀರಿನ ಭದ್ರತೆಗಾಗಿ ಪ್ರಮುಖ ಕೆರೆಗಳ ಸಂರಕ್ಷಣೆ, ಅಂತರ್ಜಲ ಹೆಚ್ಚಳ ಹಾಗೂ ಒತ್ತುವರಿ ತಡೆಗೆ ಸರ್ಕಾರ ಸಮಗ್ರ ಯೋಜನೆ ರೂಪಿಸುತ್ತಿದೆ" ಎಂದು ತಿಳಿಸಿದರು. ಹೆಸರಘಟ್ಟ, ಬೆಟ್ಟದಕೋಟೆ, ಹೊಸಕೋಟೆ, ಎಲೆಮಲ್ಲಪ್ಪ ಶೆಟ್ಟಿ, ಬನ್ನೇರುಘಟ್ಟ, ಬಾಗಲೂರು ಹಾಗೂ ಬೈರಮಂಗಲ ಕೆರೆಗಳನ್ನು ಅಭಿವೃದ್ಧಿಪಡಿಸಿ ಹೊಸ ಜೀವ ನೀಡಲು ಕಾರ್ಯಕ್ರಮ ರೂಪಿಸಲಾಗುತ್ತಿದೆ. ಕೆರೆಗಳ ಒತ್ತುವರಿ ತಡೆ, ಅಗತ್ಯವಿರುವ ಕಡೆ ಆಳಗೊಳಿಸುವುದು ಹಾಗೂ ಕೊಳಚೆ ನೀರು ಸೇರುವುದನ್ನು ತಡೆಯುವ ಕ್ರಮಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಹೊಸ ಉದ್ಯಾನಗಳ ಅಭಿವೃದ್ಧಿಗೆ ಒತ್ತು: D.K. Shivakumar

ಬೆಂಗಳೂರು ನಗರಕ್ಕೆ ಹಸಿರು ಹೊದಿಕೆ ಹೆಚ್ಚಿಸಲು ತುರಹಳ್ಳಿ ಅರಣ್ಯ, ತೊಟ್ಟಿಕಲ್ಲು ಜಲಪಾತ, ಬಿಎಂ ಕಾವಲ್ ಅರಣ್ಯ, ಬಸವಂತಪುರ, ಮಂಡೂರು ಹಾಗೂ ಜ್ಯೋತಿಪುರ ಸೇರಿದಂತೆ ಒಟ್ಟು 5,000ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಹೊಸ ಉದ್ಯಾನಗಳನ್ನು ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ. ಇದರ ಮೂಲಕ ಬೆಂಗಳೂರಿನಲ್ಲಿ ಹಸಿರು ಪ್ರದೇಶ ವಿಸ್ತರಣೆ, ಪರಿಸರ ಸಂರಕ್ಷಣೆ ಮತ್ತು ಭವಿಷ್ಯದ ನೀರಿನ ಭದ್ರತೆಗೆ ಒತ್ತು ನೀಡಲಾಗುತ್ತಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+