ಚಿಂಚೋಳಿ, ಕುಂದಗೋಳ ಉಪ ಚುನಾವಣೆಯತ್ತ ಎಲ್ಲರ ಚಿತ್ತ

ಬೆಂಗಳೂರು, ಏಪ್ರಿಲ್ 22 : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮುಗಿಯಿತು ಎಂದು ರಾಜಕೀಯ ಪಕ್ಷಗಳ ನಾಯಕರು ವಿಶ್ರಾಂತಿ ಪಡೆಯುವಂತಿಲ್ಲ. ಮೇ 19ರಂದು ನಡೆಯುವ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ತಯಾರಾಗಬೇಕಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಮೇ 19ರಂದು ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಆದ್ದರಿಂದ, ವಿವಿಧ ಪಕ್ಷಗಳ ರಾಜಕೀಯ ನಾಯಕರು ಪ್ರಚಾರದಲ್ಲಿ ತೊಡಗಬೇಕಿದೆ.

ಯಾವುದೇ ರಾಜಕೀಯ ಪಕ್ಷ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಕಾಂಗ್ರೆಸ್-ಜೆಡಿಎಸ್ ಉಪ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಳ್ಳಲಿವೆಯೇ? ಎಂದು ಕಾದು ನೋಡಬೇಕು. ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರಿದ್ದರು. ಆದ್ದರಿಂದ, ಕ್ಷೇತ್ರವನ್ನು ಉಳಿಸಿಕೊಳ್ಳುವ ಹೊಣೆ ಪಕ್ಷದ ಮೇಲಿದೆ.

ವಿಧಾನಸಭೆ ಉಪ ಚುನಾವಣೆಯಲ್ಲಿ ಗೆದ್ದು ವಿಧಾನಸಭೆಯಲ್ಲಿ ಈಗಿರುವ ಶಾಸಕರ ಬಲವನ್ನು ಹೆಚ್ಚಿಸಿಕೊಳ್ಳಲು ಬಿಜೆಪಿ ತಂತ್ರ ರೂಪಿಸುತ್ತಿದೆ. ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಮೈತ್ರಿ ಸರ್ಕಾರಕ್ಕೆ ಭಾರಿ ಹಿನ್ನಡೆ ಉಂಟಾಗಲಿದೆ...

ಚಿಂಚೋಳಿ ವಿಧಾನಸಭಾ ಕ್ಷೇತ್ರ

ಚಿಂಚೋಳಿ ವಿಧಾನಸಭಾ ಕ್ಷೇತ್ರ

ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಮೇ 19ರಂದು ಉಪ ಚುನಾವಣೆ ನಡೆಯಲಿದೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಡಾ.ಉಮೇಶ್ ಜಾಧವ್ ಗೆಲುವು ಸಾಧಿಸಿದ್ದರು. ಶಾಸಕ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದಾರೆ. ಆದ್ದರಿಂದ ಉಪ ಚುನಾವಣೆ ಎದುರಾಗಿದೆ. ಉಮೇಶ್ ಜಾಧವ್ ಗುಲ್ಬರ್ಗಾ ಕ್ಷೇತ್ರದಿಂದ ಲೋಕಸಭಾ ಚುಣಾವಣಾ ಕಣಕ್ಕಿಳಿದಿದ್ದಾರೆ.

ಕುಂದಗೋಳ ಉಪ ಚುನಾವಣೆ

ಕುಂದಗೋಳ ಉಪ ಚುನಾವಣೆ

ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಮೇ 19ರಂದು ಚುನಾವಣೆ ನಡೆಯಲಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಕುಂದಗೋಳ ಕ್ಷೇತ್ರದಿಂದ ಕಾಂಗ್ರೆಸ್‌ನ ಸಿ.ಎಸ್.ಶಿವಳ್ಳಿ ಆಯ್ಕೆಯಾಗಿದ್ದರು. 53 ವರ್ಷದ ಅವರು ಮಾರ್ಚ್ 22ರಂದು ಹೃದಯಾಘಾತದಿಂದಾಗಿ ಮೃತಪಟ್ಟರು. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದರು. ತೆರವಾದ ಸ್ಥಾನಕ್ಕೆ ಈಗ ಉಪ ಚುನಾವಣೆ ಎದುರಾಗಿದೆ.

634 ಮತಗಳ ಸೋಲು

634 ಮತಗಳ ಸೋಲು

2018ರ ಚುನಾವಣೆಯಲ್ಲಿ ಕುಂದಗೋಳ ಕ್ಷೇತ್ರದಲ್ಲಿ ಬಿಜೆಪಿಯ ಸಿ.ಎಸ್.ಈಶ್ವರ ಗೌಡ ಅವರು ಕೇವಲ 634 ಮತಗಳ ಅಂತರದಿಂದ ಸೋಲು ಕಂಡಿದ್ದರು. ಆದ್ದರಿಂದ, ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂದು ಪಕ್ಷ ತಂತ್ರ ರೂಪಿಸುತ್ತಿದೆ.

ಸಿ.ಎಸ್.ಶಿವಳ್ಳಿ ಅವರು 64, 871 ಮತಗಳನ್ನು ಪಡೆದಿದ್ದರು. ಬಿಜೆಪಿಯ ಸಿ.ಎಸ್.ಈಶ್ವರ ಗೌಡ ಅವರು 64,237 ಮತಗಳನ್ನು ಪಡೆದಿದ್ದರು. ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಹಜರತ್ ಅಲಿ ಎ.ಶೇಕ್ ಅವರು 7,318 ಮತ ಪಡೆದಿದ್ದರು.

19,212 ಮತಗಳ ಸೋಲು

19,212 ಮತಗಳ ಸೋಲು

2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಡಾ.ಉಮೇಶ್ ಜಾಧವ್ ಅವರು 73,905 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಬಿಜೆಪಿಯ ಸುನೀಲ್ ವೈ.ವಲ್ಯಾಪುರೆ ಅವರು 54,693 ಮತಗಳನ್ನು ಪಡೆದು 19,212 ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+