ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ವಾಟ್ಸಪ್‌ನಲ್ಲಿ ಮಾಹಿತಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 07 : ಕರ್ನಾಟಕ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಪ್ರತಿನಿತ್ಯ ಮಾಹಿತಿ ನೀಡಲು ವಾಟ್ಸಪ್ ಗ್ರೂಪ್ ರಚನೆ ಮಾಡಲಾಗಿದೆ. ಜಿಲ್ಲಾವಾರು ವಿಭಾಗಗಳನ್ನು ಮಾಡಲಾಗಿದ್ದು, ಜನರು ಇದಕ್ಕೆ ಸೇರ್ಪಡೆಯಾಗಬಹುದು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಫೇಸ್ ಬುಕ್ ಖಾತೆಯ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ. ಸರ್ಕಾರದ ಪ್ರತಿನಿತ್ಯದ ಕಾರ್ಯಕ್ರಮಗಳ ವಿವರಗಳು ಇನ್ನು ಮುಂದೆ ನೇರವಾಗಿ ವಾಟ್ಸಪ್ ಮೂಲಕ ನಿಮಗೆ ತಲುಪಲಿದೆ ಎಂದು ಹೇಳಿದ್ದಾರೆ.

ತಮ್ಮ ಫೇಸ್ ಬುಕ್ ಖಾತೆಯಲ್ಲಿ ಅವರು ಲಿಂಕ್ ವೊಂದನ್ನು ನೀಡಿದ್ದು, ಇದನ್ನು ಕ್ಲಿಕ್ ಮಾಡಿ, ನಿಮ್ಮ ಜಿಲ್ಲೆಯ ಗ್ರೂಪ್‌ಗೆ ಜನರು ಸೇರ್ಪಡೆಯಾಗಬಹುದು. ಮುಖ್ಯಮಂತ್ರಿಗಳ ಕಚೇರಿಯಿಂದ ಈ ಗ್ರೂಪ್‌ ಅನ್ನು ನಿರ್ವಹಣೆ ಮಾಡಲಾಗುತ್ತದೆ.

Now get Karnataka government updates in WhatsApp

ಯುವ ಜನರನ್ನು ತಲುಪಲು ಈಗ ವಾಟ್ಸಪ್ ಪ್ರಬಲ ಅಸ್ತ್ರವಾಗಿದೆ. ಮುಂದಿನ ದಿನಗಳಲ್ಲಿ ಜನರ ಜೊತೆ ನೇರವಾಗಿ ಸಂಪರ್ಕ ಸಾಧಿಸಲು ಅನುಕೂಲವಾಗುವಂತೆ ವಾಟ್ಸಪ್ ಗ್ರೂಪ್ ರಚನೆ ಮಾಡಲಾಗಿದ್ದು, ಜಿಲ್ಲಾವಾರು ವಿಭಾಗಗಳನ್ನು ಮಾಡಲಾಗಿದೆ.

ಗ್ರೂಪ್‌ನಲ್ಲಿ ಸರ್ಕಾರದ ಕಾರ್ಯಕ್ರಮಗಳು, ಜನಪರ ಯೋಜನೆಗಳ ಮಾಹಿತಿಯನ್ನು ಹಂಚಿಕೊಳ್ಳುವ ಸಾಧ್ಯತೆ ಇದೆ. ನೂರಾರು ಜನರು ಈಗಾಗಲೇ ವಾಟ್ಸಪ್ ಗ್ರೂಪ್ ಸೇರಿದ್ದಾರೆ.

English summary
Now get daily Karnataka government updates in WhatsApp. Chief Minister office created the WhatsApp group to inform about govt schemes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X