ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೆಇಇ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಬಹುದು

|
Google Oneindia Kannada News

ಬೆಂಗಳೂರು, ಡಿಸೆಂಬರ್ 01 : ಜೆಇಇ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಅವಕಾಶ ನೀಡಲಾಗಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈ ಕುರಿತು ಆದೇಶ ಹೊರಡಿಸಿದೆ.

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿ) ಸಹಿತ ಕೇಂದ್ರದ ಇತರ ತಾಂತ್ರಿಕ ಸಂಸ್ಥೆಗಳಲ್ಲಿ ಪ್ರವೇಶ ಅವಕಾಶ ಕಲ್ಪಿಸುವ ಜಂಟಿ ಪ್ರವೇಶ ಪರೀಕ್ಷೆ(ಜೆಇಇ)ಯನ್ನು ಇನ್ನು ಕನ್ನಡದಲ್ಲಿಯೂ ಬರೆಯಬಹುದಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ; ಆನ್‌ಲೈನ್ ಪ್ರಶ್ನೆ ಪತ್ರಿಕೆ ಇಲ್ಲದ್ವಿತೀಯ ಪಿಯುಸಿ ಪರೀಕ್ಷೆ; ಆನ್‌ಲೈನ್ ಪ್ರಶ್ನೆ ಪತ್ರಿಕೆ ಇಲ್ಲ

ಕನ್ನಡ ಸೇರಿದಂತೆ 11 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವನ್ನು ಕಲ್ಪಿಸಲಾಗಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈ ಸಂಬಂಧ ಎನ್‌ಐಟಿಗೆ ಸೂಚನೆ ನೀಡಿದೆ.

ಎಸ್ಎಸ್ಎಲ್ ಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ ಎಸ್ಎಸ್ಎಲ್ ಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

JEE Exam

ಜೆಇಇ ಪರೀಕ್ಷೆಗಳನ್ನು ಇದುವರೆಗೂ ಹಿಂದಿ, ಇಂಗ್ಲಿಷ್ ಹಾಗೂ ಗುಜರಾತಿ ಭಾಷೆಗಳಲ್ಲಿ ನಡೆಸಲಾಗುತ್ತಿತ್ತು. 2017ರಲ್ಲಿಯೇ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದರು.

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ: ಯಾವಾಗ ಯಾವ ಪರೀಕ್ಷೆ?ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ: ಯಾವಾಗ ಯಾವ ಪರೀಕ್ಷೆ?

ಗುಜರಾತಿ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ಕನ್ನಡದಲ್ಲೂ ಬರೆಯಲು ಅವಕಾಶ ಮಾಡಿಕೊಡಿ ಎಂದು ಒತ್ತಾಯಿಸಲಾಗಿತ್ತು. ಈಗ ಕನ್ನಡ ಸೇರಿದಂತೆ 11 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ಪ್ರತಿಷ್ಠಿತ ಐಐಟಿ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯಲು ಜೆಇಇ ಪರೀಕ್ಷೆಯಲ್ಲಿ ಪಾಸ್ ಆಗುವುದು ಕಡ್ಡಾಯವಾಗಿದೆ. ಒಟ್ಟು 360 ಅಂಕಗಳಿಗೆ ನಡೆಯುವ ಜೆಇಇ ಪರೀಕ್ಷೆಯಲ್ಲಿ ಅಂತಿಮ ಸುತ್ತಿಗೆ ಆಯ್ಕೆಯಾಗಬೇಕು ಎಂದರೆ ಮೊದಲ ಸುತ್ತಿನ ಪರೀಕ್ಷೆಯಲ್ಲಿ 100 ಅಂಕ ಪಡೆದಿರಬೇಕು.

English summary
Now students can write Joint Entrance Examination (JEE) exam in Kannada also. JEE is an engineering entrance examination conducted for admission to various engineering colleges in India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X