• search

ಪಕ್ಷದಲ್ಲಿ ಮೂರು ಹುದ್ದೆ, ಹೆಚ್ಚಿದ ಸಿದ್ದರಾಮಯ್ಯ ಪ್ರಭಾವ!

By Gururaj
Subscribe to Oneindia Kannada
For Quick Alerts
ALLOW NOTIFICATIONS
For Daily Alerts
    ಪಕ್ಷದಲ್ಲಿ ಅತ್ಯಂತ ಪ್ರಭಾವಿ ವ್ಯಕ್ತಿಯಾದ ಸಿದ್ದರಾಮಯ್ಯ | Oneindia Kannada

    ಬೆಂಗಳೂರು, ಜುಲೈ 19 : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ನೇಮಕ ಮಾಡಲಾಗಿದೆ. ಈ ಮೂಲಕ 2019ರ ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಪ್ರಮುಖ ಪಾತ್ರವನ್ನು ವಹಿಸಲಿದ್ದಾರೆ.

    ಸಿದ್ದರಾಮಯ್ಯ ಅವರನ್ನು ನೇಮಕ ಮಾಡುವ ಮೂಲಕ ಪಕ್ಷ ಅವರಿಗೆ ಹೆಚ್ಚಿನ ಜವಾವ್ದಾರಿಯನ್ನು ನೀಡಿದೆ. ಡಿ.ಕೆ.ಶಿವಕುಮಾರ್,ಜಿ.ಪರಮೇಶ್ವರ ಮತ್ತು ದಿನೇಶ್ ಗುಂಡೂರಾವ್ ಅವರು ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರದ ಜವಾಬ್ದಾರಿ ನೋಡಿಕೊಳ್ಳಲಿದ್ದು, ಸಿದ್ದರಾಮಯ್ಯ ಲೋಕಸಭೆ ಚುನಾವಣೆಯತ್ತ ಗಮನಹರಿಸಲಿದ್ದಾರೆ.

    ಕಾಂಗ್ರೆಸ್ ವರ್ಕಿಂಗ್ ಕಮಿಟಿ ರಚನೆ, ಸಿದ್ದರಾಮಯ್ಯಗೆ ಸ್ಥಾನ

    ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಉತ್ತರ ಕರ್ನಾಟಕದ ಯಾವುದಾದರೂ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಸೂಚನೆಯನ್ನು ನೀಡುವ ನಿರೀಕ್ಷೆ ಇದೆ. ಈಗಾಗಲೇ ಸಿದ್ದರಾಮಯ್ಯ ಬಾಗಲಕೋಟೆಯ ಬಾದಾಮಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

    ಕಾಂಗ್ರೆಸ್ ವರ್ಕಿಂಗ್ ಕಮಿಟಿ ರಚಿಸಿ ಲೇವಡಿಗೆ ಗುರಿಯಾದ ರಾಹುಲ್!

    ಸಿದ್ದರಾಮಯ್ಯ ಅವರು ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ನೇಮಕವಾಗಿದ್ದರಿಂದ ಅವರಿಗೆ ಪಕ್ಷದಲ್ಲಿ ಮೂರು ಹುದ್ದೆ ಸಿಕ್ಕಿದಂತಾಗಿದೆ. ಸಿದ್ದರಾಮಯ್ಯ ಅವರ ಅನುಭವವನ್ನು ಬಳಸಿಕೊಂಡು ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲಿ ಚುನಾವಣಾ ಪ್ರಚಾರಕ್ಕೆ ರೂಪುರೇಷೆಯನ್ನು ತಯಾರಿಸುವ ಸಾಧ್ಯತೆ ಇದೆ....

     ಹೆಚ್ಚಿದ ಸಿದ್ದರಾಮಯ್ಯ ಪ್ರಭಾವ

    ಹೆಚ್ಚಿದ ಸಿದ್ದರಾಮಯ್ಯ ಪ್ರಭಾವ

    ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಪಕ್ಷದಲ್ಲಿ ಅವರಿಗೆ ಮೂರು ಹುದ್ದೆ ಸಿಕ್ಕಿದಂತಾಗಿದೆ. ಈಗಾಗಲೇ ಸಿದ್ದರಾಮಯ್ಯ ಆಡಳಿತ ಪಕ್ಷದ ನಾಯಕರಾಗಿ, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದಾರೆ.

    ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಿದ್ದು, ಕರ್ನಾಟಕ ಮತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳಲ್ಲಿ ಸಿದ್ದರಾಮಯ್ಯ ಅವರ ಪಾತ್ರವೂ ಇರುತ್ತದೆ.

    ಉತ್ತರ ಕರ್ನಾಟಕದಿಂದ ಸ್ಪರ್ಧೆ?

    ಉತ್ತರ ಕರ್ನಾಟಕದಿಂದ ಸ್ಪರ್ಧೆ?

    ಕಾಂಗ್ರೆಸ್ ಪಕ್ಷ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳನ್ನುಗಳಿಸಲು ತಂತ್ರ ರೂಪಿಸುತ್ತಿದೆ. ಆದ್ದರಿಂದ, ಸಿದ್ದರಾಮಯ್ಯ ಅವರಿಗೆ ಉತ್ತರ ಕರ್ನಾಟಕದ ಯಾವುದಾದದರೂ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಸೂಚನೆ ನೀಡುವ ಸಾಧ್ಯತೆ ಇದೆ.

    ಸಿದ್ದರಾಮಯ್ಯ ಅವರು ಲೋಕಸಭೆ ಚುನಾವಣೆಯತ್ತ ಹೆಚ್ಚಿನ ಗಮನ ಹರಿಸಲಿದ್ದಾರೆ. ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ ಅವರಿಗೆ ಮೈತ್ರಿ ಸರ್ಕಾರ ನಡೆಸುವ ಹೊಣೆ ನೀಡಲಾಗುತ್ತದೆ. ಈ ಲೆಕ್ಕಾಚಾರದ ಹಿನ್ನಲೆಯಲ್ಲಿ ಕಾಂಗ್ರೆಸ್ ವರ್ಕಿಂಗ್ ಸಮಿತಿಗೆ ಸಿದ್ದರಾಮಯ್ಯ ಅವರನ್ನು ಸದಸ್ಯರಾಗಿ ನೇಮಕ ಮಾಡಲಾಗಿದೆ.

    ರಾಹುಲ್ ಗಾಂಧಿಗೆ ಆಪ್ತರು

    ರಾಹುಲ್ ಗಾಂಧಿಗೆ ಆಪ್ತರು

    ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಿದ್ದರಾಮಯ್ಯ ಅವರು ಆಪ್ತರು. ಲೋಕಸಭೆಯ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸಲು ರಾಹುಲ್ ಗಾಂಧಿ ಸಿದ್ದರಾಮಯ್ಯ ಅವರ ಅನುಭವವನ್ನು ಬಳಸಿಕೊಳ್ಳಲಿದ್ದಾರೆ.

    ಸಿದ್ದರಾಮಯ್ಯ ಅವರಿಗೆ ಪ್ರಚಾರದ ರೂಪುರೇಷೆ, ಪ್ರಣಾಳಿಕೆ ಸಿದ್ಧಪಡಿಸುವ ಜವಾಬ್ದಾರಿ ನೀಡುವ ಸಾಧ್ಯತೆ ಇದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಸಿದ್ದರಾಮಯ್ಯ ಅವರು ಪಕ್ಷದ ಪರವಾಗಿ ಪ್ರಚಾರ ನಡೆಸುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಜೆಡಿಎಸ್ ಜೊತೆ ಸೇರಿ ಸರ್ಕಾರ ರಚನೆ ಮಾಡಿದೆ. ಆದ್ದರಿಂದ, ರಾಜ್ಯದಲ್ಲಿಯೂ ಹೆಚ್ಚಿನ ಸ್ಥಾನಗಳಿಸುವ ಉತ್ಸಾಹದಲ್ಲಿದೆ.

    ಕೆಲವು ನಾಯಕರನ್ನು ಕೈಬಿಟ್ಟಿದ್ದಾರೆ

    ಕೆಲವು ನಾಯಕರನ್ನು ಕೈಬಿಟ್ಟಿದ್ದಾರೆ

    ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ವರ್ಕಿಂಗ್ ಕಮಿಟಿ ರಚನೆ ಮಾಡುವಾಗ ಹಿರಿಯ ನಾಯಕರಾದ ಆಸ್ಕರ್ ಫರ್ನಾಂಡೀಸ್, ಬಿ.ಕೆ.ಹರಿಪ್ರಸಾದ್, ಎಂ.ವೀರಪ್ಪ ಮೊಯ್ಲಿ ಅವರನ್ನು ಕೈ ಬಿಟ್ಟು, ಸಿದ್ದರಾಮಯ್ಯ ಅವರನ್ನು ನೇಮಿಸಿದ್ದಾರೆ.

    ಜನರಿಗೆ ಹತ್ತಿರವಾಗಿರುವ ನಾಯಕರನ್ನು ಬಳಸಿಕೊಂಡು ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸುವುದು ರಾಹುಲ್ ಗಾಂಧಿ ಅವರ ಕಾರ್ಯತಂತ್ರ. ಆದ್ದರಿಂದ, ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಅವರಿಗೆ ಸಮಿತಿಯಲ್ಲಿ ಸ್ಥಾನ ಸಿಕ್ಕಿದೆ.

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    English summary
    Former Chief Minister Siddaramaiah appointed as a member of the Congress Working Committee. Now he has to play three role in the party leader of the Congress Legislature Party, Chairman of the coordination committee and CWC member.

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more