ದೇವೇಗೌಡರ ಮುಂದೆ ಎಚ್‌ಡಿಕೆ ಕಣ್ಣೀರು : ಶರವಣ ಹೊಸ ಬಾಂಬ್
Recommended Video
ಬೆಂಗಳೂರು, ಆಗಸ್ಟ್ 23 : "ಕಾಂಗ್ರೆಸ್ ನಾಯಕರ ಕಿರುಕುಳದ ಬಗ್ಗೆ ಎಚ್. ಡಿ. ಕುಮಾರಸ್ವಾಮಿ ಹಲವು ಬಾರಿ ದೇವೇಗೌಡರ ಎದುರು ಕಣ್ಣೀರು ಹಾಕಿದ್ದರು" ಎಂದು ಜೆಡಿಎಸ್ ನಾಯಕ ಟಿ. ಎ. ಶರವಣ ಹೊಸ ಬಾಂಬ್ ಸಿಡಿಸಿದರು.
ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಶರವಣ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. "ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕುಮಾರಸ್ವಾಮಿ ಹೇಳಿದ್ದರು" ಎಂದು ತಿಳಿಸಿದರು.
"ಕಾಂಗ್ರೆಸ್ ಶಾಸಕರ ಅತಿರೇಕದ ವರ್ತನೆಗಳು ಕುಮಾರಸ್ವಾಮಿಗೆ ಬೇಸರ ತಂದಿತ್ತು. ಸಿದ್ದರಾಮಯ್ಯ ಸೇರಿ ಹಲವಾರು ಕಾಂಗ್ರೆಸ್ ನಾಯಕರಿಗೆ ಕುಮಾರಸ್ವಾಮಿ ಸಿಎಂ ಸ್ಥಾನದಲ್ಲಿರುವುದು ಸಹಿಸಿಕೊಂಡು ಹೋಗಲು ಸಾಧ್ಯವಾಗಿಲ್ಲ" ಎಂದು ಹೇಳಿದರು.

"ಕುಮಾರಸ್ವಾಮಿ ಅವರನ್ನು ಇಳಿಸಲೇಬೇಕೆಂದು ತೀರ್ಮಾನ ಕೈಗೊಂಡಿದ್ದರು. ಈಗ ಆ ಕೆಲಸ ಮಾಡಿದ್ದಾರೆ. ಮೈತ್ರಿ ಸರ್ಕಾರ ಪತನವಾಗಲು ಸಿದ್ದರಾಮಯ್ಯ ಕಾರಣ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ. ಇದನ್ನು ಚರ್ಚೆ ಮಾಡುವ ಅಗತ್ಯವಿಲ್ಲ" ಎಂದರು.
ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಎರಡೂ ಪಕ್ಷಗಳ ನಡುವಿನ ಸಂಬಂಧ ಹಳಸಿದೆ. ಎರಡು ದಿನಗಳ ಹಿಂದೆ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮೈತ್ರಿ ಸರ್ಕಾರ ಪತನಗೊಳ್ಳಲು ಸಿದ್ದರಾಮಯ್ಯ ಕಾರಣ ಎಂದು ಆರೋಪಿಸಿದ್ದರು.












Click it and Unblock the Notifications