ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಎನ್‌ಪಿಎಸ್‌ ಜಾರಿ: ಸುಧಾಕರ್

|
Google Oneindia Kannada News

ಬೆಂಗಳೂರು, ಆಗಸ್ಟ್ 27: ವೈದ್ಯಕೀಯ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಬಹು ದಿನಗಳ ಬೇಡಿಕೆಯಾಗಿದ್ದ ಪಿಂಚಣಿ ಯೋಜನೆಗೆ (ಎನ್‌ಪಿಎಸ್) ಸಚಿವ ಡಾ. ಕೆ. ಸುಧಾಕರ್‌ ಹಸಿರು ನಿಶಾನೆ ತೋರಿದ್ದಾರೆ.

Recommended Video

NEET ವಿಷಯದಲ್ಲಿ ರಾಜಕೀಯ ಮಾಡಲು ಬಿಡುವುದಿಲ್ಲ.. | Oneindia Kannada

ಸರ್ಕಾರಿ ವೈದ್ಯ, ದಂತ ವೈದ್ಯಕೀಯ ಕಾಲೇಜು, ಇವುಗಳಿಗೆ ಹೊಂದಿಕೊಂಡಿರುವ ಬೋಧಕ ಆಸ್ಪತ್ರೆಗಳು ಮತ್ತು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಾಯಂ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಈ ಯೋಜನೆ ಲಾಭ ಪಡೆಯಲಿದ್ದಾರೆ.

ಸಚಿವ ಸುಧಾಕರ್‌ ಅವರು ಅಧಿಕಾರವಹಿಸಿಕೊಂಡ ಬಳಿಕ ಅವರನ್ನು ನಿಯೋಗದಲ್ಲಿ ಭೇಟಿ ಮಾಡಿದ್ದಇಲಾಖೆಯ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಪಿಂಚಣಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮನವಿ ಸಲ್ಲಿಸಿದ್ದರು. ಮನವಿ ಸ್ವೀಕರಿಸಿದ್ದ ಸಚಿವರು ಕ್ರ ಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ‌

ಮೋದಿ ಜೊತೆ ಸಂವಾದ: ವಿದ್ಯಾರ್ಥಿಗಳ ಸೇವೆ ಬಳಕೆಗೆ ಸುಧಾಕರ್ ಮನವಿಮೋದಿ ಜೊತೆ ಸಂವಾದ: ವಿದ್ಯಾರ್ಥಿಗಳ ಸೇವೆ ಬಳಕೆಗೆ ಸುಧಾಕರ್ ಮನವಿ

ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಈ ಬೇಡಿಕೆಗೆ ಅನುಮೋದನೆ ನೀಡುವಂತೆ ಸಚಿವ ಸುಧಾಕರ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದುಅಧಿಕೃತ ಆದೇಶ ಹೊರಬಿದ್ದಿದೆ.

ಆರ್ಥಿಕ ಬಿಕ್ಕಟ್ಟಿನ ನಡುವೆ ಶುಭಸುದ್ದಿ

ಆರ್ಥಿಕ ಬಿಕ್ಕಟ್ಟಿನ ನಡುವೆ ಶುಭಸುದ್ದಿ

ಕೊರೋನಾದಿಂದಾಗಿ ಸರ್ಕಾರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದರೂ ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮೆಡಿಕಲ್‌ ಕಾಲೇಜು ಆಸ್ಪತ್ರೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಎನ್‌ಪಿಎಸ್‌ ಯೋಜನೆ ಜಾರಿಗೊಳಿಸುವುದು ಸೂಕ್ತ ಎಂಬ ಸಚಿವ ಸುಧಾಕರ್‌ ಅವರ ಅಗ್ರಹಕ್ಕೆ ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿ, ತಕ್ಷಣ ಕ್ರಮ ಜರುಗಿಸುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅಂತಿಮವಾಗಿ ಹಣಕಾಸು ಇಲಾಖೆ ಸಮ್ಮತಿ ದೊರಕಿದ್ದು ಆದೇಶ ಹೊರಡಿಸಿದೆ.

5949 ಅಧಿಕಾರಿ ಮತ್ತು ಸಿಬ್ಬಂದಿಗೆ ಪ್ರಯೋಜನ

5949 ಅಧಿಕಾರಿ ಮತ್ತು ಸಿಬ್ಬಂದಿಗೆ ಪ್ರಯೋಜನ

ಒಟ್ಟು27 ಸಂಸ್ಥೆಗಳಲ್ಲಿ ಕಾಯಂ ಆಗಿ ಕರ್ತವ್ಯ ನಿರ್ವಹಿಸುತ್ತಿರುವ 5949ಅಧಿಕಾರಿ ಮತ್ತು ಸಿಬ್ಬಂದಿಗೆ ಯೋಜನೆ ಪ್ರಯೋಜನ ದೊರಕಲಿದೆ. ಇದರಲ್ಲಿ 2061 ಮಂದಿ ಎಐಸಿಟಿಇ ಅನುಮೋದನೆ ಪಡೆದ ಹುದ್ದೆಗಳಾಗಿದ್ದರೆ 3888 ಎಐಸಿಟಿಇ ಯೇತರ ಹುದ್ದೆಗಳಾಗಿವೆ. ಈ ನೂತನ ಯೋಜನೆಯಿಂದ ಸರ್ಕಾರಕ್ಕೆ ಪ್ರತಿ ವಷ೯ 77.27 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ. 2006 ರ ಏಪ್ರಿಲ್‌ 1 ರ ನಂತರ ಕಾಯಂ ಆಗಿ ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ವೃಂದದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತಕ್ಷಣದಿಂದಲೇ ನೂತನ ಪಿಂಚಣಿ ಯೋಜನೆ ಜಾರಿಯಾಗಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್ ನಿರ್ವಹಣೆಗೆ ಸಿಬ್ಬಂದಿ ಕೊರತೆ ಇನ್ನಿಲ್ಲ: ಸುಧಾಕರ್ಕೋವಿಡ್ ನಿರ್ವಹಣೆಗೆ ಸಿಬ್ಬಂದಿ ಕೊರತೆ ಇನ್ನಿಲ್ಲ: ಸುಧಾಕರ್

7ನೇ ವೇತನ ಆಯೋಗದ ಶಿಫಾರಸ್ಸುಗಳಿಗೆ ಅನುಗುಣ

7ನೇ ವೇತನ ಆಯೋಗದ ಶಿಫಾರಸ್ಸುಗಳಿಗೆ ಅನುಗುಣ

ಈ ಹಿಂದೆ ಬೋಧಕ ಸಿಬ್ಬಂದಿ ಬೇಡಿಕೆಯಾಗಿದ್ದ ಏಳನೇ ವೇತನ ಆಯೋಗದ ಶಿಫಾರಸ್ಸುಗಳಿಗೆ ಅನುಗುಣವಾಗಿ ವೇತನ ಮತ್ತು ಭತ್ಯೆ ನೀಡುವ ಪ್ರಸ್ತಾವನೆಗೂ ಸಚಿವರು ಅನುಮೋದನೆ ದೊರಕಿಸಿಕೊಟ್ಟಿದ್ದರು. ಹಾಗೆಯೇ ಐದಾರು ವಷ೯ಗಳಿಂದ ನನೆಗುದಿಗೆ ಬಿದ್ದಿದ್ದ ವೈದ್ಯ ವಿದ್ಯಾಥಿ೯ಗಳ ಶಿಷ್ಯ ವೇತನ ಪ್ರಸ್ತಾವನೆಗೂ ಅನುಮತಿ ದೊರಕಿಸಿ ಈಗಾಗಲೇ ಪರಿಷ್ಕೃತ ಶಿಷ್ಯ ವೇತನ ಆದೇಶ ಜಾರಿಯಾಗಿದೆ. ಇದೀಗ ಅನೇಕ ದಿನಗಳಿಂದ ಅನುಮತಿಗೆ ಕಾಯುತ್ತಿದ್ದ ಎನ್‌ಪಿಎಸ್‌ ಯೋಜನೆಗೂ ಮುಕ್ತಿ ದೊರಕಿದಂತಾಗಿದೆ.

ಯಡಿಯೂರಪ್ಪ ಅವರಿಗೆ ಇಲಾಖೆಯಿಂದ ಧನ್ಯವಾದ

ಯಡಿಯೂರಪ್ಪ ಅವರಿಗೆ ಇಲಾಖೆಯಿಂದ ಧನ್ಯವಾದ

ಕೊರೋನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗೆ ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿದ್ದ ಎನ್‌ಪಿಎಸ್‌ ಯೋಜನೆ ಜಾರಿಗೊಳಿಸಿರುವ ಈ ತೀರ್ಮಾನ ಸಾರ್ಥಕಭಾವ ಮೂಡಿಸಿದೆ. ನಮ್ಮ ಮನವಿಗೆ ಸ್ಪಂದಿಸಿ ಅನಮತಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಇಲಾಖೆ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆʼ - ಡಾ. ಕೆ. ಸುಧಾಕರ್‌, ವೈದ್ಯಕೀಯ ಶಿಕ್ಷಣ ಸಚಿವರು.

English summary
Minister Dr.K.Sudhakar gave green signal for the New Pension scheme for teaching and non-teaching staff in Medical Education department. The scheme which was demanded from long time will benefit all the permanent teaching and non-teaching staff of government affiliated medical, dental colleges and super specialty hospitals.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X